ಉತ್ತರಾಖಂಡ್ ಅರಣ್ಯದಲ್ಲಿ ಕಾಡ್ಗಿಚ್ಚು: ಐವರು ಸಾವು, ಸಾವಿರಾರು ಎಕರೆ ಕಾಡು ನಾಶ

Date:

ಉತ್ತರಾಖಂಡ್‌ ಅರಣ್ಯಗಳಲ್ಲಿ ಕಾಡ್ಗಿಚ್ಚು ಸಂಭವಿಸಿ ಐವರು ಮೃತಪಟ್ಟು, ಸಾವಿರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಗಾಗಿದೆ.

- Advertisement -

ಪಿತೋರಾಘರ್‌ ಜಿಲ್ಲೆಯ ಗಂಗೋಲಿಹಟ್‌ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮಾನವ ನಿರ್ಮಿತವಾದ ಈ ಘಟನೆಗೆ ಸಂಬಂಧಿಸಿದಂತೆ ಭಾರತೀಯ ಅರಣ್ಯ ಕಾಯ್ದೆಯಡಿ ಪಿಯೂಶ್ ಸಿಂಗ್, ಆಯೂಶ್ ಸಿಂಗ್‌, ರಾಹುಲ್ ಸಿಂಗ್‌ ಹಾಗೂ ಅಂಕಿತ್‌ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಡೆಹರಾಡೂನ್‌ನ ಹವಾಮಾನ ಕೇಂದ್ರದ ನಿರ್ದೇಶಕ ಬಿಕ್ರಮ್‌ ಸಿಂಗ್‌ ಮಾತನಾಡಿ, ಮೇ 7 ರಿಂದ ಮೇ 8 ಹಾಗೂ ಮೇ 11 ರಿಂದ ಉತ್ತರಾಖಂಡ್‌ನಲ್ಲಿ ಮಳೆಬರುವ ಸಾಧ್ಯತೆಯಿದ್ದು, ಕಾಡ್ಗಿಚ್ಚು ಶಮನಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಹಿಮಾಲಯದ ಕಣಿವೆಯ ರಾಜ್ಯದಲ್ಲಿ ಸಂಭವಿಸುವ ಕಾಡ್ಗಿಚ್ಚು ತಿಂಗಳುಗಳ ಕಾಲ ಮುಂದುವರೆಯುತ್ತದೆ. 2023ರ ನವೆಂಬರ್‌ 1ರಂದ 910 ಅರಣ್ಯಗಳಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ 1145 ಹೆಕ್ಟೇರ್‌ ಅರಣ್ಯ ನಾಶವಾಗಿತ್ತು. ಇದರಿಂದ ಸರ್ಕಾರಕ್ಕೆ ಲಕ್ಷಾಂತರ ರೂ. ನಷ್ಟವಾಗಿತ್ತು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್ ಪ್ರಕರಣ, ಒಕ್ಕಲಿಗರ ನಾಯಕತ್ವ ಮತ್ತು ಮನುಷ್ಯತ್ವ

ಕಾಡ್ಗಿಚ್ಚು ವಸತಿ ಪ್ರದೇಶದಲ್ಲಿ ವಾಸಿಸುವ ಜನರಿಗೂ ಅಪಾಯ ತಂದೊಡ್ಡಲಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕೆಂದು ಉತ್ತರಾಖಂಡ್‌ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

ಮಾನವ ನಿರ್ಮಿತದಿಂದ ಸಂಭವಿಸುವ ಕಾಡ್ಗಿಚ್ಚಿನ ಪ್ರಕರಣದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮೇ 8 ರಂದು ತುರ್ತಾಗಿ ಪರಿಗಣಿಸಲು ಇಂದು ಒಪ್ಪಿಗೆ ಸೂಚಿಸಿದೆ.ಕಾಡ್ಗಿಚ್ಚಿನಿಂದ ಸಂಭವಿಸುವ ಅನಾಹುತದಲ್ಲಿ ಶೇ.90 ರಷ್ಟು ಮಾನವ ನಿರ್ಮಿತವಾಗಿರುತ್ತದೆ.

ನ್ಯಾಯಮೂರ್ತಿ ಬಿ ಆರ್‌ ಗವಾಯಿ ನೇತೃತ್ವದ ಪೀಠ ಹಿರಿಯ ನ್ಯಾಯವಾದಿ ರಾಜೀವ್‌ ದತ್ತ, ವಕೀಲ ಕೆ ಪರಮೇಶ್ವರ್‌ ಒಳಗೊಂಡ ಅರ್ಜಿದಾರರಿಗೆ ಸೂಚನೆ ನೀಡಿದೆ.

ಘಟನೆಯು ಆಘಾತಕಾರಿಯಾಗಿದ್ದು, ಅರಣ್ಯದ ಎಲ್ಲಡೆ ಇಂಗಾಲದ ಡೈಆಕ್ಸೈಡ್‌ ಹೊಗೆ ಆವರಿಸಿದೆ. ಕಳೆದ 6 ತಿಂಗಳಲ್ಲಿ ಸಂಭವಿಸಿದ ಅಗ್ನಿ ಅನಾಹುತಗಳಲ್ಲಿ 900ಕ್ಕೂ ಹೆಚ್ಚು ಘಟನೆಗಳು ಮಾನವ ನಿರ್ಮಿತವಾಗಿದ್ದು, ಇದರಿಂದ ಸಾವಿರಾರು ಎಕರೆ ಅರಣ್ಯ ನಾಶವಾಗಿದೆ ಎಂದು ಹಿರಿಯ ನ್ಯಾಯವಾದಿ ರಾಜೀವ್‌ ದತ್ತ ಕೋರ್ಟ್‌ಗೆ ಮಾಹಿತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...