ಒಡಿಶಾ| ಮೇಲ್ಸೇತುವೆಯಿಂದ ಬಿದ್ದ ಬಸ್‌; ಐವರು ಸಾವು, ಹಲವರಿಗೆ ಗಾಯ

Date:

ಒಡಿಶಾದ ಜಾಜ್‌ಪುರ ಜಿಲ್ಲೆಯ ಬಾರಾಬತಿ ಬಳಿಯ ರಾಷ್ಟ್ರೀಯ ಹೆದ್ದಾರಿ-16ರಲ್ಲಿ ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಒಂದು ಫ್ಲೈಓವರ್‌ನಿಂದ ಸ್ಕಿಡ್ ಆಗಿ ಬಿದ್ದಿದ್ದು ಕನಿಷ್ಠ ಐವರು ಸಾವನ್ನಪ್ಪಿದ್ದಾರೆ.

ಈ ಅಪಘಾತದಲ್ಲಿ ಸುಮಾರು 38 ಮಂದಿ ಗಾಯಗೊಂಡಿದ್ದಾರೆ. ಕಟಕ್‌ನಿಂದ ಪಶ್ಚಿಮ ಬಂಗಾಳದ ದಿಘಾಗೆ ತೆರಳುತ್ತಿದ್ದ ವೇಳೆ ಬಸ್ ಅಪಘಾತ ಸಂಭವಿಸಿದೆ. ಚಾಲಕ ಮದ್ಯದ ಅಮಲಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಜಜ್‌ಪುರದ ಮುಖ್ಯ ಜಿಲ್ಲಾ ವೈದ್ಯಾಧಿಕಾರಿ ಗಾಯಾಳುಗಳ ಸಂಖ್ಯೆಯನ್ನು ದೃಢಪಡಿಸಿರುವುದಾಗಿ ಇಂಡಿಯಾ ಟುಡೇ ಟಿವಿ ವರದಿ ಮಾಡಿದೆ. ಬಸ್‌ನ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದೂ ಕೂಡಾ ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗಾಯಾಳುಗಳನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಜಾಜ್‌ಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?   ಭೀಕರ ಅಪಘಾತ | ಚತುಷ್ಪಥ ಹೆದ್ದಾರಿಯಲ್ಲಿ ಹಾರಿ ಪಲ್ಟಿ ಹೊಡೆದ ಕಾರು; ಬೈಕ್‌ ಸವಾರ ಸೇರಿ 5 ಮಂದಿ ಸಾವು

“ನಾವು ಹತ್ತಿರದ ಬಸ್ ನಿಲ್ದಾಣದಲ್ಲಿದ್ದೆವು, ಬಸ್ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದ. ಬಸ್ ಚಾಲನೆ ಮಾಡುವಾಗ ಚಾಲಕ ಮದ್ಯಪಾನ ಮಾಡುತ್ತಿದ್ದ ಎಂದು ನಾವು ಭಾವಿಸುತ್ತೇವೆ” ಎಂದು ಮಾಧ್ಯಮಕ್ಕೆ ಸ್ಥಳೀಯರೊಬ್ಬರು ಹೇಳಿದ್ದಾರೆ.

ಅಪಘಾತದ ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಸಾವಿಗೆ ಸಂತಾಪ ಸೂಚಿಸಿದ್ದು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸಿ ‘ಸಂಪೂರ್ಣ ರಾಜಿ’ ಆಯೋಗ: ಕೋರ್ಟ್‌ ಮೊರೆ ಹೋಗಲಿರುವ ಆದಿತ್ಯ ಠಾಕ್ರೆ

ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದ ಫಲಿತಾಂಶವನ್ನು ನಮ್ಮ ಪಕ್ಷವು ನ್ಯಾಯಾಲಯದಲ್ಲಿ ಪ್ರಶ್ನಿಸಲಿದೆ...

ತೆಲಂಗಾಣ | 12 ಬಿಆರ್‌ಎಸ್ ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆ

ಜುಲೈ ಎರಡನೇ ವಾರದಲ್ಲಿ ತೆಲಂಗಾಣ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು...

ಬಜೆಟ್ 2024| ಕೆಲವು ವರ್ಗಗಳಿಗೆ ಆದಾಯ ತೆರಿಗೆ ಕಡಿತಗೊಳಿಸಲು ಕೇಂದ್ರ ಚಿಂತನೆ: ವರದಿ

ಕೇಂದ್ರ ಸರ್ಕಾರವು ಮುಂದಿನ ಬಜೆಟ್‌ನಲ್ಲಿ ಕೆಲವು ವರ್ಗದ ಜನರಿಗೆ ಆದಾಯ ತೆರಿಗೆ...

ಹಲವು ದೇಶಗಳಲ್ಲಿ ಪೇಪರ್ ಬ್ಯಾಲೆಟ್ ಬಳಕೆ, ನಾವೂ ಅದೇ ಹಾದಿಯಲ್ಲಿ ಸಾಗಬೇಕು: ಆಂಧ್ರ ಮಾಜಿ ಸಿಎಂ

ಹಲವು ದೇಶಗಳಲ್ಲಿ ಪೇಪರ್ ಬ್ಯಾಲೆಟ್ ಬಳಕೆ ಮಾಡಲಾಗುತ್ತಿದೆ. ನಾವೂ ಕೂಡಾ ಅದೇ...