ಹಿಂಸೆಗೆ ತಿರುಗಿದ ಲಡಾಖ್‌ನ ರಾಜ್ಯ ಸ್ಥಾನಮಾನದ ಕೂಗು; 5 ಸಾವು, 80ಕ್ಕೂ ಹೆಚ್ಚು ಗಾಯಾಳುಗಳು

Date:

ಲಡಾಖ್‌ನಲ್ಲಿ ರಾಜ್ಯ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್‌ನಡಿ ಸೇರ್ಪಡೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಗಳು ಬುಧವಾರ ಹಿಂಸಾತ್ಮಕವಾಗಿ ಬದಲಾಗಿದ್ದು, ಕನಿಷ್ಠ ಐವರು ಸಾವನ್ನಪ್ಪಿ, 80ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 10 ಮಂದಿಯ ಸ್ಥಿತಿ ಗಂಭೀರವಾಗಿದೆ. ಈ ಘಟನೆಯ ಬಳಿಕ ಲೇಹ್‌ನಲ್ಲಿ ಪೊಲೀಸ್‌ ಅಧಿಕಾರಿಗಳು ಕರ್ಫ್ಯೂ ಜಾರಿಗೊಳಿಸಿದ್ದು, ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪಿನ ಸಭೆಗೆ ನಿಷೇಧ ಹೇರಿದ್ದಾರೆ.

- Advertisement -

ಪ್ರತಿಭಟನೆಯ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದ್ದು, ಒಂದು ವಾಹನವನ್ನೂ ಸುಟ್ಟುಹಾಕಲಾಗಿದೆ. ಹಿಂಸಾಚಾರವನ್ನು ತಡೆಯಲು ಪೊಲೀಸರು ಆಶ್ರುವಾಯು ಮತ್ತು ಲಾಠಿ ಚಾರ್ಜ್‌ ಮಾಡಿದ್ದಾರೆ. ಲೇಹ್ ಲಡಾಖ್‌ನ ಒಕ್ಕೂಟ ಪ್ರದೇಶದ ಆಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)2023ರ ಸೆಕ್ಷನ್ 163ರ ಅಡಿಯಲ್ಲಿ ಕರ್ಫ್ಯೂ ಜಾರಿಗೊಳಿಸಿದ್ದು, ಲೇಹ್‌ನಲ್ಲಿ ಯಾವುದೇ ಪ್ರತಿಭಟನೆ, ರ‍್ಯಾಲಿ ಅಥವಾ ಮೆರವಣಿಗೆಗೆ ನಿಷೇಧ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಲೇಹ್ ಅಪೆಕ್ಸ್ ಬಾಡಿ (LAB) ಯುವ ಘಟಕದಿಂದ ಕರೆ ನೀಡಲಾಗಿದ್ದ ಈ ಆಂದೋಲನವು ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ ಆರನೇ ಶೆಡ್ಯೂಲ್‌ನಡಿ ಸೇರ್ಪಡೆಗೆ ಒತ್ತಾಯಿಸುವ ನಿರಂತರ ಅಭಿಯಾನದ ಭಾಗವಾಗಿತ್ತು. ಲಡಾಖ್ ಮೊದಲು ಜಮ್ಮು ಮತ್ತು ಕಾಶ್ಮೀರ ರಾಜ್ಯದ ಭಾಗವಾಗಿತ್ತು. 2019ರ ಆಗಸ್ಟ್ 5ರಂದು 370ನೇ ವಿಧಿ ರದ್ದುಗೊಂಡ ಬಳಿಕ ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ಕೇಂದ್ರದ ನೇರ ನಿಯಂತ್ರಣಕ್ಕೆ ಒಳಪಟ್ಟಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಿನೆಮಾ ಟಿಕೆಟ್ ದರಗಳಿಗೆ ಸರ್ಕಾರಿ ಕಡಿವಾಣದ ಸಂಗತಿಯೇನು?

ಸೆಪ್ಟೆಂಬರ್ 10ರಿಂದ ಆರಂಭವಾದ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ 15 ಜನರಲ್ಲಿ ಇಬ್ಬರ ಆರೋಗ್ಯ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಈ ಬೆಳವಣಿಗೆಯ ಬಳಿಕ ಒಂದು ದಿನದ ಬಂದ್‌ಗೆ ಕರೆ ನೀಡಲಾಗಿತ್ತು. ಹವಾಮಾನ ಕಾರ್ಯಕರ್ತ ಸೋನಂ ವಾಂಗ್ಚುಕ್ ತಮ್ಮ 15 ದಿನಗಳ ಉಪವಾಸವನ್ನು ಮಂಗಳವಾರ ಕೊನೆಗೊಳಿಸಿದ್ದು, ತಮ್ಮ ಬೆಂಬಲಿಗರಿಗೆ ಹಿಂಸೆಯಿಂದ ದೂರವಿರುವಂತೆ ಮನವಿ ಮಾಡಿದ್ದರು.

ಕೆಲವು ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪದಿಂದ ಉದ್ವಿಗ್ನತೆ ತಾರಕಕ್ಕೇರಿತು. ಬಳಿಕ ಪ್ರತಿಭಟನಾಕಾರರು ಲೇಹ್‌ನ ಬಿಜೆಪಿ ಕಚೇರಿಯ ಹೊರಗಡೆ ಭದ್ರತಾ ವಾಹನಕ್ಕೆ ಬೆಂಕಿ ಹಚ್ಚಿದರು. ಶಾಂತಿ ಸ್ಥಾಪನೆಗೆ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...