ದೆಹಲಿ ಸಿಎಂ ರೇಖಾ ಗುಪ್ತಾ ಸೇರಿ ಐವರು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ: ಎಡಿಆರ್

Date:

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ದೆಹಲಿಯಲ್ಲಿ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಏಳು ಸಚಿವರ ಪೈಕಿ ಐವರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಪೋರ್ಟ್ (ಎಡಿಆರ್) ವಿಶ್ಲೇಷಣೆ ತಿಳಿಸಿದೆ. ಈ ಪೈಕಿ ಓರ್ವ ಸಚಿವ ಆಶಿಶ್ ಸೂದ್ ವಿರುದ್ಧ ಗಂಭೀರ ಕ್ರಿಮಿನಲ್ ಆರೋಪಗಳಿವೆ ಎಂದು ವರದಿ ಉಲ್ಲೇಖಿಸಿದೆ.

- Advertisement -

ಇಬ್ಬರು ಸಚಿವರು ಕೋಟ್ಯಾಧಿಪತಿಗಳು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 2025ರ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಸಚಿವರು ಸಲ್ಲಿಸಿದ ಅಫಿಡವಿಟ್ ಆಧರಿಸಿ ಈ ಸಂಶೋಧನೆಗಳು ನಡೆದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಇದನ್ನು ಓದಿದ್ದೀರಾ? ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ‘ಗೂಂಡಾಗಿರಿ’ ವಿಡಿಯೋ ವೈರಲ್!

ರಾಜೌರಿ ಗಾರ್ಡನ್ ಕ್ಷೇತ್ರದ ಮಂಜಿಂದರ್ ಸಿಂಗ್ ಸಿರ್ಸಾ ಅವರು ಅತಿ ಹೆಚ್ಚು ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. 248.85 ಕೋಟಿ ರೂಪಾಯಿ ಮಂಜಿಂದರ್ ಆಸ್ತಿಯಾಗಿದೆ. ಇನ್ನು ಸಚಿವರ ಪಟ್ಟಿಯಲ್ಲಿಅತೀ ಕಡಿಮೆ ಆಸ್ತಿಯನ್ನು ಕರವಾಲ್ ನಗರ ಕ್ಷೇತ್ರದ ಕಪಿಲ್ ಮಿಶ್ರಾ ಅವರು ಘೋಷಿಸಿದ್ದಾರೆ. ಅವರ ಆಸ್ತಿ 1.06 ಕೋಟಿ ರೂ.ಗಳಷ್ಟಿದೆ ಎಂದು ವರದಿಯಾಗಿದೆ.

ಇನ್ನು ಏಳು ಸಚಿವರ ಸರಾಸರಿ ಆಸ್ತಿ 56.03 ಕೋಟಿ ರೂ.ಗಳಾಗಿದ್ದು, ಎಲ್ಲಾ ಏಳು ಸಚಿವರು ಸಾಲ ಇರುವುದಾಗಿ ಘೋಷಿಸಿಕೊಂಡಿದ್ದಾರೆ. ನವದೆಹಲಿ ಕ್ಷೇತ್ರದ ಪರ್ವೇಶ್ ಸಾಹಿಬ್ ಸಿಂಗ್, ಅತ್ಯಧಿಕ ಸಾಲ (74.36 ಕೋಟಿ ರೂ.) ಇರುವುದಾಗಿ ಘೋಷಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? BREAKING NEWS | ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ

ಆರು ಸಚಿವರು ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದು, ಆದರೆ ಓರ್ವ ಸಚಿವರು 12ನೇ ತರಗತಿ ಮಾತ್ರ ಓದಿರುವುದಾಗಿ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಐವರು ಸಚಿವರು 41 ರಿಂದ 50 ವರ್ಷ ವಯಸ್ಸಿನವರಾಗಿದ್ದರೆ, ಉಳಿದ ಇಬ್ಬರು 51ರಿಂದ 60 ವರ್ಷ ವಯಸ್ಸಿನವರಾಗಿದ್ದಾರೆ. ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಮಾತ್ರ ಮಹಿಳೆಯಾಗಿದ್ದು, ಬೇರೆ ಮಹಿಳಾ ಶಾಸಕಿಯರಿಗೆ ಯಾವುದೇ ಖಾತೆ ನೀಡಲಾಗಿಲ್ಲ.

ಫೆಬ್ರವರಿ 5ರಂದು ದೆಹಲಿ ಚುನಾವಣೆ ನಡೆದಿದ್ದು ಫೆಬ್ರವರಿ 8ರಂದು ಫಲಿತಾಂಶ ಹೊರಬಿದ್ದಿದೆ. 70 ಸದಸ್ಯ ಬಲವಿದ್ದು ದೆಹಲಿ ವಿಧಾನಸಭೆಯಲ್ಲಿ ಈ ಪೈಕಿ 48 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಅಧಿಕಾರ ಪಡೆದುಕೊಂಡಿತು. ಎಎಪಿ 22 ಸ್ಥಾನ, ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆದ್ದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...