ದುರುಳ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕನನ್ನು ಹೊಂದ ಹಂತಕನನ್ನು ಸ್ಥಳೀಯರು ಹೊಡೆದು ಕೊಂದಿದ್ದಾರೆ ಎಂದು ವರದಿಯಾಗಿದೆ.
ಹತ್ಯೆಗೈದು ಹತನಾದ ಆರೋಪಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ. ಆತ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಹೇಳಲಾಗಿದೆ. ಆತ ಬಾಲಕ ವಿಕಾಸ್‌ನನ್ನು ಆತನ ತಾಯಿಯ ಎದುರೇ ಶಿರಚ್ಛೇದ ಮಾಡಿ, ಕೊಂದಿರುವಾಗಿ ವರದಿಯಾಗಿದೆ.
ಬೈಕ್‌ನಲ್ಲಿ ಬಂದ ಆರೋಪ ಮಹೇಶ್ ಏಕಾಏಕಿ ಕಾಲೂ ಸಿಂಗ್ ಎಂಬವರ ಮನೆಗೆ ನುಗ್ಗಿದ್ದಾನೆ. ಮನೆಯಲ್ಲಿದ್ದ ಮಾರಕಾಸ್ತ್ರವನ್ನು ತೆಗೆದುಕೊಂಡು ಬಾಲಕನ ಮೇಲೆ ಭೀಕರ ದಾಳಿ ನಡೆಸಿದ್ದಾನೆ. ಆತನ ಹೊಡೆತದ ರಭಸಕ್ಕೆ ಬಾಲಕನ ರುಂಡ ಮತ್ತು ಮುಂಡ ಬೇರ್ಪಟ್ಟಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬಾಲಕನನ್ನು ರಕ್ಷಿಸಲು ಯತ್ನಿಸಿದ ಆತನ ತಾಯಿಗೂ ಗಾಯಗಳಾಗಿವೆ. ಸ್ಥಳೀಯರು ಮನೆಗೆ ಧಾವಿಸಿ, ಆರೋಪಿ ಮಹೇಶ್‌ನನ್ನು ಹಿಡಿದು ಥಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ, ಮಹೇಶ್‌ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆತ ದಾರಿಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ಲೇಖನ ಓದಿದ್ದೀರಾ?: ಬಿಹಾರದ ಭೂಮಿ ಲೂಟಿ: ಅದಾನಿ ಸಾಮ್ರಾಜ್ಯದ ವಿಸ್ತರಣೆಯಲ್ಲಿ ಮೋದಿ ಸರ್ಕಾರದ ನೇರ ಪಾತ್ರ
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಧಾರ್ ಎಸ್‌ಪಿ ಮಯಂಕ್ ಅವಸ್ಥಿ, “ಇದೊಂದು ಮನಕಲಕುವ ಘಟನೆ. ನಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಪ್ರಾಥಮಿಕ ತನಿಕೆಯಲ್ಲಿ ಆರೋಪಿ ಮಹೇಶ್ ಮಾನಸಿಕ ಅಸ್ವಸ್ಥನಾಗಿದ್ದ. ಆತನ ಕಳೆದ ಮೂರ್ನಾಲ್ಕು ದಿನಗಳಿಂದ ತನ್ನ ಮನೆಯಿಂದ ನಾಪತ್ತೆಯಾಗಿದ್ದ ಎಂಬುದಾಗಿ ತಿಳಿದುಬಂದಿದೆ” ಎಂದು ಹೇಳಿದ್ದಾರೆ.