ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವೈದ್ಯರಿಗೆ ಬೆಂಬಲ ಸೂಚಿಸಿ ಸುಮಾರು 50 ಹಿರಿಯ ವೈದ್ಯರು ರಾಜೀನಾಮೆ ನೀಡಿದ್ದಾರೆ.
ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆ ಅತ್ಯಾಚಾರ-ಕೊಲೆ ನಡೆದಿದೆ. ಈ ಪ್ರಕರಣದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿ ಕಿರಿಯ ವೈದ್ಯರುಗಳು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಈ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಅದೇ ಆಸ್ಪತ್ರೆಯ ಸುಮಾರು 50 ಹಿರಿಯ ವೈದ್ಯರು ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಬೆಳಿಗ್ಗೆ ನಡೆದ ಸರ್ಕಾರಿ ಆಸ್ಪತ್ರೆಯ ವಿವಿಧ ವಿಭಾಗಗಳ ಮುಖ್ಯಸ್ಥರ ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ಕೋಲ್ಕತ್ತಾ ವೈದ್ಯೆ ಅತ್ಯಾಚಾರ ವಿರೋಧಿಸಿ ಟಿಎಂಸಿ ಸಂಸದ ರಾಜೀನಾಮೆ
“ಇಂದಿನ ಸಭೆಯಲ್ಲಿ ಇದನ್ನು ನಿರ್ಧರಿಸಲಾಗಿದೆ. ನಮ್ಮ ಆಸ್ಪತ್ರೆಯ ಎಲ್ಲಾ 50 ಹಿರಿಯ ವೈದ್ಯರು ತಮ್ಮ ರಾಜೀನಾಮೆ ಪತ್ರಗಳಿಗೆ ಸಹಿ ಹಾಕಿದ್ದಾರೆ. ನ್ಯಾಯಕ್ಕಾಗಿ ಹೋರಾಡುತ್ತಿರುವ ಯುವ ವೈದ್ಯರಿಗೆ ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಲು ನಾವು ರಾಜೀನಾಮೆ ನೀಡುತ್ತಿದ್ದೇವೆ” ಎಂದು ಹಿರಿಯ ವೈದ್ಯರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ಸಹ ಆರ್‌ಜಿ ಕರ್ ಆಸ್ಪತ್ರೆಯಲ್ಲಿನ ತಮ್ಮ ಸಹೋದ್ಯೋಗಿಗಳಂತೆ ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಹಲವಾರು ದಿನಗಳಿಂದ ತಮ್ಮ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದ ವೈದ್ಯರುಗಳು ಕಳೆದ ನಾಲ್ಕು ದಿನಗಳಿಂದ ಆಮರಣ ಉಪವಾಸ ನಡೆಸುತ್ತಿದ್ದಾರೆ. ಆದರೆ ಅಧಿಕಾರಿಗಳಿಂದ ತಮಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ವೈದ್ಯರುಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
This is Historic !
— Dr.Dhruv Chauhan (@DrDhruvchauhan) October 8, 2024
Mass resignations of Senior most doctor faculties of RG Kar medical college in response to delayed justice and support for their junior doctors 🙌🏻
This move by West bengal senior Doctors will be written in golden words for the Ages to come. pic.twitter.com/sXiGJiHMSn
