’56 ಇಂಚ್ ಕಾ ಛೋಟಾ ಬಂದರ್, ಜಲ್ದಿ ಆವೋ ಸದನ್ ಕೆ ಅಂದರ್’: ಸಂಸತ್‌ ಎದುರು ವಿಪಕ್ಷಗಳ ವಿನೂತನ ಪ್ರತಿಭಟನೆ

Date:

ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನವಾದ ಗುರುವಾರ ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ಜಟಾಪಟಿ ನಡೆದಿದ್ದು, ‘ಇಂಡಿಯಾ’ ಮೈತ್ರಿಕೂಟದ ನಾಯಕರು ಆಟಿಕೆ ಕೋತಿಯನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.

- Advertisement -

ಸಂಸತ್ ಭವನದ ಮಕರ ದ್ವಾರದ ಬಳಿ ಜಮಾಯಿಸಿದ ಕಾಂಗ್ರೆಸ್ ಸಂಸದ ಪವನ್ ಖೇರಾ ನೇತೃತ್ವದ ಪ್ರತಿಪಕ್ಷಗಳ ಮುಖಂಡರು, ಕೈಯಲ್ಲಿ ಆಟಿಕೆ ಕೋತಿಯೊಂದನ್ನು ಹಿಡಿದು ‘56 ಇಂಚ್ ಕಾ ಛೋಟಾ ಬಂದರ್, ಜಲ್ದಿ ಆವೋ ಸದನ್ ಕೆ ಅಂದರ್’ (56 ಇಂಚಿನ ಸಣ್ಣ ಕೋತಿಯೇ, ಬೇಗ ಸದನದೊಳಗೆ ಬನ್ನಿ) ಎಂದು ಹಿಂದಿಯಲ್ಲಿ ಘೋಷಣೆ ಕೂಗಿದರು. ಪ್ರಧಾನಿ ನರೇಂದ್ರ ಮೋದಿಯವರ ‘56 ಇಂಚಿನ ಎದೆ’ಯ ಹೇಳಿಕೆಯನ್ನು ಅಣಕಿಸುವ ರೀತಿಯಲ್ಲಿ ಈ ಘೋಷಣೆ ಮೊಳಗಿದ್ದು ಎಲ್ಲರ ಗಮನ ಸೆಳೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್...

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ 22 ಸೀಟುಗಳ ಮತ ಎಣಿಕೆ ನಡೆಯುತ್ತಿದ್ದು ಇಲ್ಲಿಯವರೆಗೂ 254 ಡೆಮೊಕ್ರಟಿಕ್ ಅಭ್ಯರ್ಥಿಗಳು ಮತ್ತು 169 ರಿಪಬ್ಲಿಕನ್ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ಸಮೀಕ್ಷೆಗಳ...

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಒಂದೆಡೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರೆ, ಇನ್ನೊಂದೆಡೆ ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಿಲುವನ್ನು ಖಂಡಿಸಿ ಬಿಜೆಪಿ ನಾಯಕರು ಸಹ ಪ್ರತಿಭಟನೆ ನಡೆಸಿದರು.

ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವಿನ ಈ ಮುಖಾಮುಖಿ ಪ್ರತಿಭಟನೆಯ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, “ಸಂಸತ್ತಿನ ಆವರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳು ಈ ರೀತಿ ಮುಖಾಮುಖಿಯಾಗಿ ಕೌಂಟರ್-ಪ್ರತಿಭಟನೆ ನಡೆಸುತ್ತಿರುವುದನ್ನು ನಾನು ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆ. ಇದೊಂದು ಹೊಸ ಬೆಳವಣಿಗೆ” ಎಂದು ಅಚ್ಚರಿ ವ್ಯಕ್ತಪಡಿಸಿದರು.

ಇದೇ ವೇಳೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, “ಪ್ರಧಾನಿ ಮತ್ತು ಗೃಹ ಸಚಿವರು ತಮ್ಮ ಕೊಠಡಿಗಳಲ್ಲಿ ಕುಳಿತುಕೊಳ್ಳುವ ಬದಲು ಸದನಕ್ಕೆ ಬಂದು ಸದಸ್ಯರ ಮಾತುಗಳನ್ನು ಆಲಿಸಬೇಕು. ಸದನದೊಳಗೆ ಬಂದು ‘ನಾನು ಒಳಗಿದ್ದೆ, ನಿಮ್ಮ ಮಾತು ಕೇಳಿಸಿಕೊಳ್ಳುತ್ತಿದ್ದೆ’ ಎಂದು ಹೇಳಲು ಅವರು ಸಿದ್ಧರಿಲ್ಲ. ಇವರು ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು ಸಂಸದರ ನೈತಿಕ ಸ್ಥೈರ್ಯವನ್ನು ಕುಗ್ಗಿಸಲು ಯತ್ನಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಸತತ ಗದ್ದಲ, ಘೋಷಣೆಗಳು ಹಾಗೂ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಯಾವುದೇ ಪ್ರಮುಖ ಚರ್ಚೆಗಳಿಲ್ಲದೆ ಗುರುವಾರ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ (Sine Die) ಮುಂದೂಡಲಾಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

ಮುಂಬೈ | ಕಿರುಕುಳ ಪ್ರಶ್ನಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಿಡಿಗೇಡಿ; ಯುವತಿಯ ಎಡಗೈ ತುಂಡು

ಮುಂಬೈ ಜೀವನಾಡಿಯಾಗಿರುವ ಲೋಕಲ್ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ...

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

ಉತ್ತರ ಕರ್ನಾಟಕದ ಬಡವರ ಜೀವನಾಡಿ: ಸಾರ್ವಕಾಲಿಕ ದಾಖಲೆ ದರ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...