ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷೆಗಳ ಅಧ್ವಾನಕ್ಕೆ ಕಾರಣವಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ವೇಳೆ ಹಿಂಸಾಚಾರ ನಡೆಸಲು, ಗೊಂದಲ ಸೃಷ್ಟಿಸಲು ಯತ್ನಿಸಿದ ಆರು ಮಂದಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಿಜೆಪಿ ಪ್ರತಿಭಟನೆ ವೇಳೆ ಬೆಂಬಲಿಗರು ಮತ್ತು ವಿರೋಧಿಗಳ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಘರ್ಷಣೆ ತಡೆಯುವ ನಿಟ್ಟಿನಲ್ಲಿ, ಮುನ್ನೆಚ್ಚರಿಕೆಯ ಕ್ರಮವಾಗಿ ಈ ಪ್ರತಿಭಟನೆ ವಿರೋಧಿಸಿದ್ದ ಆರು ಮಂದಿಯನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? 4ನೇ ತರಗತಿ ಪಾಸ್ ಆದವರನ್ನು ಪ್ರಧಾನಿ ಮಾಡಿ ದೊಡ್ಡ ತಪ್ಪು ಮಾಡಿದ್ವಿ: ಸಿಜೆಪಿ ಪ್ರತಿಭಟನೆಯಲ್ಲಿ ಪೋಷಕರು
ಈ ಆರು ಮಂದಿ ಪ್ರತಿಭಟನಾ ಸ್ಥಳದ ಬಳಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದರು. ಆದ್ದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಯಾವುದೇ ಹಿಂಸಾಚಾರ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಜೆಪಿ ಬೆಂಬಲಿಗರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವಾಗ ಮಧ್ಯ ಪ್ರವೇಶಿಸಿ ಹಿಂಸಾಚಾರ, ಗಲಾಟೆ ಸೃಷ್ಟಿಸುವ ಯತ್ನವನ್ನು ಈ ಆರು ಮಂದಿ ನಡೆಸಿದ್ದರು ಎಂದು ದೂರಲಾಗಿದೆ.





