ತ್ರಿಪುರಾ | ರಥೋತ್ಸವದಲ್ಲಿ ಹೈಟೆನ್ಶನ್‌ ವಿದ್ಯುತ್‌ ಸ್ಪರ್ಶ; 6 ಸಾವು, 15 ಮಂದಿಗೆ ಗಾಯ

Date:

Advertisements

ಬೃಹತ್‌ ರಥೋತ್ಸವ ನಡೆಯುವ ಸಂದರ್ಭದಲ್ಲಿ ರಥಕ್ಕೆ ಹೈಟೆನ್ಶನ್‌ ವಿದ್ಯುತ್‌ ತಂತಿ ಸ್ಪರ್ಶಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡ ಘಟನೆ ತ್ರಿಪುರಾದ ಉನಕೋಟಿ ಜಿಲ್ಲೆಯ ಕುಮಾರ್‌ಘಾಟ್‌ನಲ್ಲಿ ನಡೆದಿದೆ.

ಸಂಜೆ 4.30 ಗಂಟೆಯ ಸಮಯದಲ್ಲಿ ಭಗವಾನ್‌ ಜಗನ್ನಾಥನ ವಾರ್ಷಿಕ ರಥ ಯಾತ್ರೆಯ ಉತ್ಸವ ಮೆರವಣಿಗೆ ನಡೆಯುತ್ತಿದ್ದಾಗ 133 ಕೆವಿ ಓವರ್‌ಲೋಡ್ ಕೇಬಲ್‌ ಸ್ಪರ್ಶವಾಗಿದೆ. ರಥವನ್ನು ಕಬ್ಬಿಣದಿಂದ ಮಾಡಲಾಗಿದ್ದು, ಅದ್ಧೂರಿಯಾಗಿ ಅಲಂಕರಿಸಲಾಗಿತ್ತು. ವಿದ್ಯುತ್ ತಂತಿಗೆ ಅದು ತಗುಲಿದಾಗ ವಿದ್ಯುತ್ ಪ್ರವಹಿಸಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ರಥಕ್ಕೆ ವಿದ್ಯುತ್ ತಂತಿ ಹೇಗೆ ತಗುಲಿತು ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಇದು ಸ್ಟೇಷನ್‌ ಮಾಸ್ಟರ್‌ ಮಾಡುವ ಕೆಲಸ; ಪ್ರಧಾನಿಯ ವಂದೇ ಭಾರತ್ ಉದ್ಘಾಟನೆ ಛೇಡಿಸಿದ ಪ್ರಕಾಶ್‌ ರೈ 

ಘಟನೆಗೆ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಸಂತಾಪ ಸೂಚಿಸಿದ್ದು, “ಕುಮಾರ್‌ಘಾಟ್‌ನಲ್ಲಿ ಸಂಭವಿಸಿದ ಭೀಕರ ವಿದ್ಯುತ್ ಸ್ಪರ್ಶದಿಂದ ಯಾತ್ರಾರ್ಥಿಗಳು ಪ್ರಾಣ ಕಳೆದುಕೊಂಡು ಹಲವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ನನಗೆ ತೀವ್ರ ದುಃಖವಾಗಿದ್ದು, ಜೀವ ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಅಲ್ಲದೆ, ಗಾಯಗೊಂಡವರಿಗೆ ಬೇಗ ಚೇತರಿಸಿಕೊಳ್ಳಲೆಂದು ನಾನು ಹಾರೈಸುತ್ತೇನೆ. ಈ ಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ನೊಂದವರ ಬೆಂಬಲಕ್ಕೆ ನಿಂತಿದೆ” ಎಂದು ಟ್ವಿಟರ್‌ ಮೂಲಕ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X