ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 8 ಮಂದಿ ಮೃತಪಟ್ಟು, 7ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಆಂಧ್ರದ ಕೃಷ್ಣ ಜಿಲ್ಲೆಯ ಸೀತನಪಲ್ಲಿಯಲ್ಲಿ ಟ್ರಕ್‌ವೊಂದು ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಪೊಲೀಸ್ ವರದಿಗಳಂತೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರಾಕ್ಟರ್‌ಅನ್ನು ಟ್ರಕರ್ ಓವರ್‌ಟೇಕ್ ಮಾಡಲು ಹೋದಾಗ ಅಪಘಾತ ಸಂಭವಿಸಿದೆ.
ಪೊಲೀಸರು ಹಾಗೂ ಸ್ಥಳೀಯರು ಪರಿಹಾರ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳದಲ್ಲಿ 2 ಕಿ.ಮೀ ದೂರದವರೆಗೂ ಸಂಚಾರದಟ್ಟಣೆ ಉಂಟಾಗಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?
ಇನ್ನೊಂದು ಘಟನೆಯಲ್ಲಿ ತೆಲಂಗಾಣದ ಮೆಹಬೂಬಾಬಾದ್ ಜಿಲ್ಲೆಯ ಗುಡೂರು ಕ್ರಾಸ್ ರಸ್ತೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ.
ಬಿದಿರಿನ ಕಡ್ಡಿಗಳನ್ನು ಹೊತ್ತ ಟ್ರಕ್ ಮೆಹಬೂಬಾಬಾದ್‌ನಿಂದ ನರಸಮ್‌ಪೇಟೆಗೆ ತೆರಳುತ್ತಿದ್ದಾಗ ವಾಹನದ ನಿಯಂತ್ರಣ ಕಳೆದುಕೊಂಡ ಚಾಲಕ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಸಾರ್ವಜನಿಕರ ಮೇಲೆ ವಾಹನ ಹರಿಸಿದ ಪರಿಣಾಮ ಅಪಘಾತ ಸಂಭವಿಸಿದೆ.
