ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ, 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಹೊರತರಲಾಗಿದೆ ಎಂದು ವರದಿಯಾಗಿದೆ.
ಡಿಎಸ್‌ಪಿ (ಕಾನೂನು ಮತ್ತು ಸುವ್ಯವಸ್ಥೆ) ಕೃಷ್ಣ ಮುರಾರಿ ಮಾತನಾಡಿ, “5-6 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಅಧಿಕ ಮಂದಿಯನ್ನು ರಕ್ಷಣೆ ಮಾಡಲಾಗಿದೆ. 7 ಮಂದಿಗೆ ಗಂಭೀರವಾಗಿ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.
#WATCH | Patna, Bihar: Krishna Murari, DSP (law & order) says, “5-6 people have died. More than 30 people have been rescued. 7 are seriously injured and have been sent to hospital…” https://t.co/yT6pLszXO2 pic.twitter.com/8P1aq4JNiH
— ANI (@ANI) April 25, 2024
ಘಟನಾ ಸ್ಥಳಕ್ಕೆ ದೌಡಾಯಿಸಿದ ಗೃಹ ರಕ್ಷಕ ದಳ ಮತ್ತು ಅಗ್ನಿಶಾಮಕ ದಳದ ಡಿಜಿ ಶೋಭಾ ಒಹತ್ಕರ್ ಸುದ್ದಿಗಾರರೊಂದಿಗೆ ಮಾತನಾಡಿ, “16 ಸಾವಿರಕ್ಕೂ ಹೆಚ್ಚು ಹೊಟೇಲ್‌ಗಳಲ್ಲಿ ಅಗ್ನಿಶಾಮಕ ಪರಿಶೋಧನೆ ನಡೆಸಲಾಗಿದೆ, ಇನ್ನೂ ಪ್ರಗತಿಯಲ್ಲಿದೆ. ಪರಿಶೋಧನೆಯ ವೇಳೆ ನಿರ್ದಿಷ್ಟ ಸೂಚನೆಗಳನ್ನು ನೀಡಲಾಗಿದೆ. ಆದರೆ ಕೆಲವರು ಆ ಸೂಚನೆಗಳನ್ನು ಅನುಸರಿಸುವುದಿಲ್ಲ” ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | ಸ್ಕ್ರಾಪ್ ಗೋದಾಮಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಎರಡು ಟ್ರಾಕ್ಟರ್, ಬೈಕ್
“ನಾವು ನೀಡಿದ ಸೂಚನೆಗಳನ್ನು ಕೆಲವರು ಅನುಸರಿಸಿದರೆ, ಇನ್ನೂ ಕೆಲವರು ಸೂಚನೆಗೆ ಗಮನ ಹರಿಸುವುದಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬರುತ್ತದೆ” ಎಂದು ತಿಳಿಸಿದ್ದಾರೆ.
“ನಾವು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದೇವೆ, ಅದರ ಬಗ್ಗೆ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮಾಹಿತಿ ಬಂದಿದೆ. ಸರಿಯಾದ ತನಿಖೆಯ ಮೂಲಕ ನಿಖರವಾದ ಕಾರಣವನ್ನು ಪತ್ತೆಹಚ್ಚಲಾಗುವುದು ಮತ್ತು ಸೂಕ್ತವಾದ ಕ್ರಮವನ್ನು ಅನುಸರಿಸಲಾಗುವುದು” ಎಂದು ಹೇಳಿದರು.