ಆಗ್ರಾ ಪರಿಷತ್ ಚುನಾವಣಾ ಅಕ್ರಮ: 6 ಅಧಿಕಾರಿಗಳ ಅಮಾನತು; 21 ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಚುನಾವಣಾ ಆಯೋಗ ಆದೇಶ

Date:

ಉತ್ತರ ಪ್ರದೇಶ ವಿಧಾನ ಪರಿಷತ್ ಚುನಾವಣೆ ಭಾಗವಾಗಿ ಆಕ್ಟೋಬರ್ 23 ರಂದು ನಡೆದ ಆಗ್ರಾ ವಿಭಾಗದ ಶಿಕ್ಷಕರ ಕ್ಷೇತ್ರದಲ್ಲಿ ಮತದಾನ ನಡೆದಿತ್ತು. ಮತದಾನದ ವೇಳೆ, ಗಂಭೀರ ಕರ್ತವ್ಯ ಲೋಪ ಮತ್ತು ನಿಯಮಗಳ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಒಟ್ಟು ಆರು ಉನ್ನತ ಅಧಿಕಾರಿಗಳನ್ನು ಚುನಾವಣಾ ಆಯೋಗ (ECI) ಅಮಾನತುಗೊಳಿಸಿದೆ. ಮಾತ್ರವಲ್ಲದೆ, 21 ಚುನಾವಣಾ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶಿಸಿದೆ.

- Advertisement -

ಆಗ್ರಾ ವಿಭಾಗದ ಕಮಿಷನರ್ ಮತ್ತು ಆಗ್ರಾ ವಿಭಾಗೀಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಸಲ್ಲಿಸಿದ ತನಿಖಾ ವರದಿಯ ಆಧಾರದ ಮೇಲೆ ಆಯೋಗವು ಕ್ರಮ ಕೈಗೊಂಡಿದೆ. ಅಮಾನತುಗೊಂಡಿರುವ ಆರೂ ಅಧಿಕಾರಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲ್ಲಿಸಲು ನಿರ್ಧರಿಸಲಾಗಿದ್ದು, ಮತಗಟ್ಟೆ ಕರ್ತವ್ಯದಲ್ಲಿದ್ದ ಇತರ 21 ಸಿಬ್ಬಂದಿ ಮತ್ತು ಪೊಲೀಸ್ ಪೇದೆಗಳ ವಿರುದ್ಧ ಶಿಸ್ತು ಕ್ರಮ ಮತ್ತು ತನಿಖೆ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿಗೆ ಆಯೋಗ ನಿರ್ದೇಶನ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

“ಮೇಲ್ವಿಚಾರಣೆಯ ಹೊಣೆ ಹೊತ್ತಿದ್ದ ಅಧಿಕಾರಿಗಳು ಮತಗಟ್ಟೆಗಳ ಒಳಗೆ ಮತ್ತು ಸುತ್ತಮುತ್ತ ಸೂಕ್ತ ನಿಯಂತ್ರಣ ಸಾಧಿಸಲು ಮತ್ತು ಪರಿಣಾಮಕಾರಿ ಮೇಲ್ವಿಚಾರಣೆ ನಡೆಸಲು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳು ಇಂತಹ ಗಂಭೀರ ಕರ್ತವ್ಯ ಲೋಪ ಎಸಗಿರುವುದನ್ನು ಆಯೋಗವು ತೀವ್ರವಾಗಿ ಪರಿಗಣಿಸುತ್ತದೆ. ಇಂತಹ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಕ್ಷಮಿಸಲು ಸಾಧ್ಯವಿಲ್ಲ” ಎಂದು ಆಯೋಗ ಹೇಳಿದೆ.

ಉತ್ತರ ಪ್ರದೇಶ ವಿಧಾನ ಪರಿಷತ್ತಿನ ಒಟ್ಟು 11 ಕ್ಷೇತ್ರಗಳಿಗೆ (5 ಪದವೀಧರ ಮತ್ತು 6 ಶಿಕ್ಷಕರ ಕ್ಷೇತ್ರಗಳು) ಶುಕ್ರವಾರ ಭಾರಿ ಭದ್ರತೆಯೊಂದಿಗೆ ಮತದಾನ ನಡೆದಿದ್ದು, ಒಟ್ಟು 152 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಪೈಕಿ ಆಗ್ರಾದಲ್ಲಿ ಸಂಭವಿಸಿದ ತಾಂತ್ರಿಕ ಮತ್ತು ಆಡಳಿತಾತ್ಮಕ ಲೋಪಗಳನ್ನು ಆಯೋಗವು ಗಂಭೀರವಾಗಿ ಪರಿಗಣಿಸಿ ಮರು ಮತದಾನ ನಡೆಸಿದೆ. ಆಗ್ರಾ ವಿಭಾಗದ ಶಿಕ್ಷಕರ ಕ್ಷೇತ್ರದ 20, 21 ಮತ್ತು 26ನೇ ಮತಗಟ್ಟೆಗಳಲ್ಲಿ ಅಕ್ರಮಗಳು ನಡೆದ ಹಿನ್ನೆಲೆಯಲ್ಲಿ ಸೋಮವಾರ ಮರು ಮತದಾನ ನಡೆದಿದೆ.

ಅಂದಹಾಗೆ, ಗ್ಯಾನೇಶ್‌ ಕುಮಾರ್‌ ಅವರು ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡ ನಂತರ, ಚುನಾವಣಾ ಅಕ್ರಮಗಳ ಎಗ್ಗಿಲ್ಲದೆ ನಡೆಯುತ್ತಿದೆ. ಬಿಜೆಪಿ ಪರವಾಗಿ ಮತಗಳ್ಳತನಕ್ಕೆ ಗ್ಯಾನೇಶ್‌ ಕುಮಾರ್ ಅವರೇ ಕುಮ್ಮಕ್ಕು ನೀಡುತ್ತಿದ್ದಾರೆ. ಅಪ್ರಜಾತಾಂತ್ರಿಕವಾಗಿ ಎಸ್‌ಐಆರ್‌ ಜಾರಿಗೊಳಿಸಿ, ಬಿಜೆಪಿ ವಿರೋಧಿ ಮತಗಳನ್ನು ಸರ್ವಾಧಿಕಾರಿಯಾಗಿ ಅಳಿಸಿ ಹಾಕುತ್ತಿದ್ದಾರೆ ಎಂದು ವಿಪಕ್ಷಗಳು ಮತ್ತು ನಾಗರಿಕ ಸಂಘಟನೆಗಳು ಒತ್ತಾಯಿಸುತ್ತಿವೆ. ಗ್ಯಾನೇಶ್‌ ಕುಮಾರ್‌ ರಾಜೀನಾಮೆ ಮತ್ತು ಎಸ್‌ಐಆರ್‌ ಸೇರಿದಂತೆ ಚುನಾವಣಾ ಅಕ್ರಮಗಳ ಸ್ವತಂತ್ರ ತನಿಖೆಗಾಗಿ ಆಗ್ರಹಿಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನೀರಿನ ಸಮಸ್ಯೆ ಪರಿಹರಿಸಿದ್ದ ಬೊಮ್ಮಗೊಂಡೇಶ್ವರ

ಹಿಂದೆ ಈ ಭಾಗದಲ್ಲಿ ತೀವ್ರ ಬರಗಾಲ ಉಂಟಾದಾಗ ಮಹಾತ್ಮ ಬೊಮ್ಮಗೊಂಡೇಶ್ವರರು ಜನ...

ಔರಾದ್‌ | ಸಾಲಬಾಧೆ : ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತರೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ರಾಯಚೂರು | ಮೀಸಲಾತಿ ಬದಲಾವಣೆಗೆ 150ಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ!

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಕುರಿತು...