ಜಗ್ಗಿ ವಾಸುದೇವ್ ಆಶ್ರಮದಿಂದ 6 ಮಂದಿ ನಾಪತ್ತೆ: ಹೈಕೋರ್ಟ್‌ಗೆ ತಮಿಳುನಾಡು ಪೊಲೀಸರ ಮಾಹಿತಿ

Date:

ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಜಗ್ಗಿ ವಾಸುದೇವ್(ಸದ್ಗುರು) ಅವರ ಇಶಾ ಫೌಂಡೇಶನ್‌ನಿಂದ 2016 ರಿಂದ ಇಲ್ಲಿಯವರೆಗೆ ಆರು ಮಂದಿ ಕಾಣೆಯಾಗಿದ್ದಾರೆ ಎಂದು ತಮಿಳುನಾಡು ಪೊಲೀಸರು ಗುರುವಾರ ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.

- Advertisement -

ನ್ಯಾಯಮೂರ್ತಿಗಳಾದ ಎಂ.ಎಸ್.ರಮೇಶ್ ಮತ್ತು ಸುಂದರ್ ಮೋಹನ್ ಅವರ ನ್ಯಾಯಪೀಠದ ಮುಂದೆ ಪೊಲೀಸರು ಮೌಖಿಕವಾಗಿ ಈ ಹೇಳಿಕೆ ನೀಡಿದ್ದಾರೆ. ಕಾಣೆಯಾದ ಪ್ರಕರಣಗಳ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪೊಲೀಸರ ಹೇಳಿಕೆಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯವು, ಮುಂದಿನ ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದ್ದು, ತನಿಖೆಯ ಸ್ಥಿತಿಗತಿ ವರದಿಯನ್ನು ಅಂದು ಸಲ್ಲಿಸಲು ಪೊಲೀಸರಿಗೆ ನಿರ್ದೇಶನ ನೀಡಿದೆ.

ತಿರುನೆಲ್ವೇಲಿ ಜಿಲ್ಲೆಯ ನಿವಾಸಿ ತಿರುಮಲೈ ಎಂಬವರು ತಮ್ಮ ಸಹೋದರ ಗಣೇಶನ್ ಅವರನ್ನು ಹಾಜರುಪಡಿಸುವಂತೆ ಕೋರಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ನಿರ್ದೇಶನ ನೀಡಿದೆ.

46 ವರ್ಷದ ಗಣೇಶನ್ ಕಳೆದ ವರ್ಷ ಮಾರ್ಚ್‌ನಲ್ಲಿ ಇಶಾ ಫೌಂಡೇಶನ್‌ನಿಂದ ಕಾಣೆಯಾದ ನಂತರ ತಿರುಮಲೈ ನ್ಯಾಯಾಲಯದ ಮೊರೆ ಹೋಗಿದ್ದರು. ಹಲವಾರು ದಿನಗಳಿಂದ ತನ್ನ ಸಹೋದರನೊಂದಿಗೆ ಸಂಪರ್ಕವನ್ನು ಸ್ಥಾಪಿಸಲು ಸಾಧ್ಯವಾಗದ ಕಾರಣ ತಾನು ಇಶಾ ಫೌಂಡೇಶನ್ ಅನ್ನು ಸಂಪರ್ಕಿಸಿದ್ದೆ ಎಂದು ಅವರು ಗುರುವಾರ ನ್ಯಾಯಾಲಯಕ್ಕೆ ತಿಳಿಸಿದರು.

ಇದನ್ನು ಓದಿದ್ದೀರಾ? ಕೇಜ್ರಿವಾಲ್ ಬಂಧನ | ಸತ್ಯಪಾಲ್ ಮಲಿಕ್ ಭವಿಷ್ಯ ನುಡಿದ ವಿಡಿಯೋ ವೈರಲ್

ಆದಾಗ್ಯೂ, ಆಶ್ರಮದಲ್ಲಿ ಕೆಲಸ ಮಾಡುತ್ತಿದ್ದ ನನ್ನ ಸಹೋದರ ಎರಡು ದಿನಗಳಿಂದ ವರದಿ ಮಾಡಿಕೊಂಡಿಲ್ಲ ಎಂದು ಫೌಂಡೇಶನ್ ಆ ಸಮಯದಲ್ಲಿ ತನಗೆ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ತಾನು ತಿರುಮಲೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೆ ಎಂದು ಅವರು ವಿವರಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...