ಯುಎಪಿಎ ಅಡಿ 6 ವರ್ಷ ಜೈಲುವಾಸ; ಇಬ್ಬರು ಯುವಕರನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಿದ ಜೆ-ಕೆ ಕೋರ್ಟ್‌

Date:

ಜಮ್ಮು ಮತ್ತು ಕಾಶ್ಮೀರದಲ್ಲಿ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ’ (ಯುಎಪಿಎ) ಅಡಿಯಲ್ಲಿ ಬಂಧನಕ್ಕೊಳಗಾಗಿದ್ದ ಇಬ್ಬರು ಯುವಕರನ್ನು ನಿರ್ದೋಷಿಗಳೆಂದು ಜಮ್ಮು-ಕಾಶ್ಮೀರ ವಿಶೇಷ ನ್ಯಾಯಾಲಯ ಘೋಷಿಸಿದೆ. ಬರೋಬ್ಬರಿ ಆರು ವರ್ಷಗಳ ಸುದೀರ್ಘ ಜೈಲುವಾಸ ಅನುಭವಿಸಿದ ಯುವಕರು ಈಗ ಜೈಲಿನಿಂದ ಹೊರಬಂದಿದ್ದಾರೆ. ಪೊಲೀಸರ ಕೃತ್ಯದಿಂದಾಗಿ ಆರು ವರ್ಷಗಳ ತಮ್ಮ ಅತ್ಯಮೂಲ್ಯ ದಿನಗಳು, ಜೀವನವನ್ನು ಜೈಲಿನಲ್ಲಿ ಕಳೆದುಕೊಂಡಿದ್ದಾರೆ.

- Advertisement -

ಪ್ರಾಸಿಕ್ಯೂಷನ್ ಮಂಡಿಸಿದ ಸಾಕ್ಷ್ಯಾಧಾರಗಳಲ್ಲಿ ತೀವ್ರ ಸ್ವರೂಪದ ವಿರೋಧಾಬಾಸಗಳು ಮತ್ತು ತಾಂತ್ರಿಕ ಲೋಪಗಳು ಇವೆ ಎಂಬುದನ್ನು ಗಮನಿಸಿದ ನ್ಯಾಯಾಲಯವು, “ಇಂತಹ ದೋಷಪೂರಿತ ಸಾಕ್ಷ್ಯಗಳ ಆಧಾರದ ಮೇಲೆ ಶಿಕ್ಷೆ ವಿಧಿಸುವುದು ನ್ಯಾಯಸಮ್ಮತವಲ್ಲ” ಎಂದು ಸ್ಪಷ್ಟಪಡಿಸಿದೆ. ಪ್ರಕರಣವನ್ನು ರದ್ದುಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ | ಬಿಜೆಪಿಯ ಹಿಂದುತ್ವದ ಅಸ್ತ್ರಕ್ಕೆ ಎಸ್‌ಪಿ...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ಕೇವಲ ಕೆಲವೇ ತಿಂಗಳುಗಳು ಬಾಕಿ ಇವೆ. ಆ ರಾಜ್ಯದ ರಾಜಕೀಯ ರಂಗದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ. ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ, ಮಾಜಿ ಮುಖ್ಯಮಂತ್ರಿ...

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ...

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ ಬಲಿ ಕೇವಲ ಸೋಲಿನ ಸಂಕೇತವಲ್ಲ; ಆತ ಚಾರಿತ್ರಿಕವಾಗಿ ಪ್ರಭುತ್ವದ ವಂಚನೆಯನ್ನು ಬಯಲು ಮಾಡುವ ಜೀವಂತ ಪ್ರತಿರೋಧ. ಊರಿಗೆಲ್ಲ ದೀಪಾವಳಿಯು ಬೆಳಕಿನ ಸಂಭ್ರಮವಾದರೆ,...

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

2020ರ ಸೆಪ್ಟೆಂಬರ್ 16ರಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ ಹಾಗೂ ಸಿಆರ್‌ಪಿಎಫ್‌ ತುಕಡಿಗಳು ಜಂಟಿಯಾಗಿ ಬಾರಾಮುಲ್ಲಾ ಸಮೀಪದ ಕಾನಿಸ್ಪೋರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ನಡೆಸಿದ್ದವು. ಈ ವೇಳೆ, ಸೋಪೋರ್‌ನ ಹುಜೈಫ್ ಫಿರ್ದೌಸ್ ಭಟ್ ಮತ್ತು ಬಾರಾಮುಲ್ಲಾದ ಐಜಾಜ್ ಅಹ್ಮದ್ ಭಟ್ ಎಂಬಿಬ್ಬರು ಯುವಕರನ್ನು ವಶಕ್ಕೆ ಪಡೆದಿದ್ದರು. ಅವರ ವಾಹನವನ್ನು ತಪಾಸಣೆ ನಡೆಸಿದಾಗ ಎರಡು ಹ್ಯಾಂಡ್ ಗ್ರೆನೇಡ್‌ಗಳು, 100 ಜೀವಂತ ಗುಂಡುಗಳು ಹಾಗೂ ನಿಷೇಧಿತ ಲಷ್ಕರ್-ಎ-ತೊಯ್ಬಾ (LeT) ಉಗ್ರ ಸಂಘಟನೆಯ ಪೋಸ್ಟರ್‌ಗಳು ಪತ್ತೆಯಾಗಿವೆ ಎಂದು ಪೊಲೀಸರು ಪ್ರತಿಪಾದಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 18, 23, 39 ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಯುಎಪಿಎ ಕಾಯ್ದೆಯಡಿ ರಚಿಸಲಾದ ವಿಶೇಷ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಫಿರೋಜ್ ಅಹ್ಮದ್ ಖಾನ್ ಪ್ರಕರಣದ ಸಮಗ್ರ ವಿಚಾರಣೆ ನಡೆಸಿ ನವೆಂಬರ್ 5ರಂದು ತೀರ್ಪು ಪ್ರಕಟಿಸಿದ್ದಾರೆ. ಶಸ್ತ್ರಾಸ್ತ್ರ ವಶಪಡಿಸಿಕೊಂಡ ಸನ್ನಿವೇಶಕ್ಕೆ ಯಾವುದೇ ಸ್ವತಂತ್ರ ಸಾಕ್ಷಿಗಳಿಲ್ಲ. ಅಲ್ಲದೆ, ಪ್ರಾಸಿಕ್ಯೂಷನ್ ಸಾಕ್ಷಿಗಳ ವಿಚಾರಣೆ ವೇಳೆ ಹೊರಬಿದ್ದ ಹೇಳಿಕೆಗಳು ಪರಸ್ಪರ ವಿರೋಧಾತ್ಮಕವಾಗಿದೆ ಎಂಬುದನ್ನು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

ಪೊಲೀಸರು ಯುವಕರನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ವೇಳೆ ಬಂಧಿಸಿದ್ದಾಗಿ ಹೇಳಿದ್ದರೆ, ಬಂಧಿತ ಯುವಕರು ತಮ್ಮನ್ನು ರಾತ್ರಿ ವೇಳೆ ತಮ್ಮ ಮನೆಗಳಿಂದಲೇ ಪೊಲೀಸರು ಕರೆದುಕೊಂಡು ಹೋಗಿದ್ದರೆಂದು ಕೋರ್ಟ್‌ಗೆ ತಿಳಿಸಿದ್ದರು.

ಜೊತೆಗೆ, ಪ್ರಾಸಿಕ್ಯೂಷನ್ ಸಲ್ಲಿಸಿದ ಸಾಕ್ಷಿಗಳಲ್ಲಿ ಒಬ್ಬ ಸಾಕ್ಷಿ 100 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರೆ, ಮತ್ತೊಬ್ಬ ಸಾಕ್ಷಿ ಕೇವಲ 40 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾನೆ. ಅಂತೆಯೇ ಒಬ್ಬ ಸಾಕ್ಷಿ ಲಷ್ಕರ್-ಎ-ತೊಯ್ಬಾ ಪೋಸ್ಟರ್‌ಗಳು ಸಿಕ್ಕಿವೆ ಎಂದರೆ, ಇನ್ನೊಬ್ಬ ಸಾಕ್ಷಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಪೋಸ್ಟರ್‌ಗಳು ಸಿಕ್ಕಿವೆ ಎಂದು ಹೇಳಿಕೆ ನೀಡಿದ್ದನು. ಈ ಗೊಂದಲ ಮತ್ತು ವಿರೋಧಾಬಾಸಗಳು ಪ್ರಕರಣದ ಮೂಲ ಅಡಿಪಾಯವನ್ನೇ ಕಸಿಯುವಂತೆ ಮಾಡಿವೆ ಎಂದು ನ್ಯಾಯಾಲಯ ಹೇಳಿದೆ.

ಈ ಲೇಖನ ಓದಿದ್ದೀರಾ?: ಗಡ್ಕರಿ-ಮೋಶಾ ಆಡಳಿತದಲ್ಲಿ ‘ವೋಟ್‌ ಚೋರಿ’ ಬೆನ್ನಲ್ಲೇ ‘ಪೆಟ್ರೋಲ್ ಚೋರಿ’: ₹62,000 ಕೋಟಿ ದೋಚುವ ಹುನ್ನಾರ!

ಅಲ್ಲದೆ, ವಿಚಾರಣೆಯ ಸಮಯದಲ್ಲಿ, ಬಂಧಿತ ಯುವಕರು ಯಾವುದೇ ನಿರ್ದಿಷ್ಟ ಭಯೋತ್ಪಾದಕ ಸಂಘಟನೆ ಅಥವಾ ಭಯೋತ್ಪಾದಕರೊಂದಿಗೆ ಸಂಪರ್ಕದಲ್ಲಿದ್ದರು ಎಂಬುದಕ್ಕೆ ಯಾವುದೇ ದಾಖಲೆಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಎಂದು ತನಿಖಾಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಆರೋಪಿಗಳ ಬಳಿಯಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದೇ ಸಂಶಯಾಸ್ಪದವಾಗಿರುವಾಗ, ಯುಎಪಿಎ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಈ ತೀರ್ಪು ಹೊರಬಿದ್ದ ಬೆನ್ನಲ್ಲೇ ಪೊಲೀಸರ ಕ್ರಮ ಮತ್ತು ಧೋರಣೆ ಕುರಿತು ಸಾರ್ವಜನಿಕ ಚರ್ಚೆಗಳು ಆರಂಭವಾಗಿವೆ.  ಆರು ವರ್ಷಗಳ ಅಮೂಲ್ಯ ಜೀವನವನ್ನು ಜೈಲಿನಲ್ಲಿ ಕಳೆದ ಈ ಯುವಕರ ಜೀವನ ನಷ್ಟಕ್ಕೆ ಹೊಣೆ ಯಾರು? ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಹೊಣೆಗಾರಿಕೆ ನಿಗದಿಪಡಿಸಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಸೇರಿದಂತೆ ಹಲವು ರಾಜಕೀಯ ನಾಯಕರು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಒತ್ತಾಯಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು: ಟಾಟಾ ಕೈಗಾರಿಕಾ ಘಟಕದಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ಮೂವರು ಗುತ್ತಿಗೆ ಕಾರ್ಮಿಕರ ಸಾವು

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಕೈಗಾರಿಕಾ ಘಟಕವೊಂದರಲ್ಲಿ ನಿರ್ವಹಣಾ ಕಾರ್ಯದಲ್ಲಿ ತೊಡಗಿದ್ದ ಮೂವರು...

ತಮಿಳುನಾಡು: ರಸ್ತೆ ಮಧ್ಯೆ ಪಟಾಕಿ ಸಿಡಿಸಿದ್ದನ್ನು ಪ್ರಶ್ನಿಸಿದ ಪೊಲೀಸ್ ಅಧಿಕಾರಿಯ ಭೀಕರ ಹತ್ಯೆ

ತಮಿಳುನಾಡಿನ ಥೇಣಿಯಲ್ಲಿ ರಸ್ತೆ ಮಧ್ಯೆ ಪಟಾಕಿ ಸಿಡಿಸುತ್ತಿದ್ದ ಯುವಕರ ಗುಂಪನ್ನು ಪ್ರಶ್ನಿಸಿದ...

ಬೀದರ್‌ | ಹಾಲು, ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯಲು ಕೆಆರ್‌ಎಸ್ ಆಗ್ರಹ

ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆಯನ್ನು ರಾಜ್ಯ ಸರ್ಕಾರ ತಕ್ಷಣವೇ...