6 ವರ್ಷಗಳ ಜೈಲುವಾಸ, ಮುಗಿಯದ ವಿಚಾರಣೆ: ಮತ್ತೆ ಕೋರ್ಟ್ ಮೆಟ್ಟಿಲೇರಿದ ಖಾಲಿದ್-ಶರ್ಜೀಲ್

Date:

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ದೆಹಲಿ ನ್ಯಾಯಾಲಯದ ಮುಂದೆ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

- Advertisement -

ಜನವರಿ 5 ರಂದು ಸುಪ್ರೀಂ ಕೋರ್ಟ್ ಇವರಿಬ್ಬರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ, ಈಗ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಸುಮೇಧ್ ಸೈನಿ ಅವರ ಮುಂದೆ ಈ ಹೊಸ ಅರ್ಜಿಗಳನ್ನು ಸಲ್ಲಿಸಲಾಗಿದೆ. ದೆಹಲಿ ನ್ಯಾಯಾಲಯವು ಈ ಅರ್ಜಿಗಳ ಕುರಿತು ದೆಹಲಿ ಪೊಲೀಸರಿಂದ ಪ್ರತಿಕ್ರಿಯೆ ಕೇಳಿದ್ದು, ಮುಂದಿನ ವಿಚಾರಣೆಯನ್ನು ಜುಲೈ 4ಕ್ಕೆ ನಿಗದಿಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ತಮ್ಮ ಅರ್ಜಿಯಲ್ಲಿ ಪ್ರಮುಖ ಕಾನೂನು ಅಂಶಗಳನ್ನು ಉಲ್ಲೇಖಿಸಿರುವ ಉಮರ್ ಖಾಲಿದ್, ಈ ಹಿಂದೆ ಸುಪ್ರೀಂ ಕೋರ್ಟ್ ತಮ್ಮ ಅರ್ಜಿಯನ್ನು ತಿರಸ್ಕರಿಸಿದ್ದರೂ, ನಂತರದ ನ್ಯಾಯಾಂಗ ಬೆಳವಣಿಗೆಗಳು ಬದಲಾವಣೆಯನ್ನು ಸೂಚಿಸುತ್ತವೆ ಎಂದು ವಾದಿಸಿದ್ದಾರೆ. ಮೇ 18 ರಂದು ಭಯೋತ್ಪಾದನೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ಅವರು ಉಲ್ಲೇಖಿಸಿದ್ದು, UAPA ಅಡಿಯಲ್ಲಿದ್ದರೂ ಸಹ ವಿಚಾರಣೆಯಿಲ್ಲದೆಯೇ  ಜೈಲಿಡುವುದು ಸರಿಯಲ್ಲ ಎಂದಿದ್ದ ನ್ಯಾಯಾಲಯದ ನಿಲುವನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ, ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಾಧೀಶರ ಪೀಠವು ಜನವರಿ 5 ರ ತೀರ್ಪನ್ನು ತೀವ್ರವಾಗಿ ಟೀಕಿಸಿತ್ತು ಮತ್ತು ಭಯೋತ್ಪಾದನಾ ನಿರೋಧಕ ಕಾಯ್ದೆಗಳು ಅನಿರ್ದಿಷ್ಟಾವಧಿ ಬಂಧನದ ಸಾಧನವಾಗಬಾರದು ಎಂದು ಒತ್ತಿಹೇಳಿದ್ದನ್ನು ಖಾಲಿದ್ ತಮ್ಮ ಅರ್ಜಿಯಲ್ಲಿ ನೆನಪಿಸಿದ್ದಾರೆ.

ಮತ್ತೊಂದೆಡೆ ಶರ್ಜೀಲ್ ಇಮಾಮ್ ತಮ್ಮ ಅರ್ಜಿಯಲ್ಲಿ, ತಮಗೆ ಜಾಮೀನು ನಿರಾಕರಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿ ಆರು ತಿಂಗಳು ಕಳೆದಿದ್ದರೂ ವಿಚಾರಣೆಯಲ್ಲಿ ಯಾವುದೇ ಮಹತ್ವದ ಪ್ರಗತಿಯಾಗಿಲ್ಲ ಮತ್ತು ಆರೋಪ ಹೊರಿಸುವ ಪ್ರಕ್ರಿಯೆಯೂ ನಡೆದಿಲ್ಲ ಎಂದು ಆಕ್ಷೇಪಿಸಿದ್ದಾರೆ. ತಾವೀಗಾಗಲೇ ಸರಿಸುಮಾರು 6 ವರ್ಷಗಳಿಂದ ಕಸ್ಟಡಿಯಲ್ಲಿದ್ದು, ಪ್ರಕರಣದಲ್ಲಿರುವ ದೊಡ್ಡ ಸಂಖ್ಯೆಯ ಆರೋಪಿಗಳು, ಸಾಕ್ಷಿಗಳು ಮತ್ತು ದಾಖಲೆಗಳನ್ನು ಗಮನಿಸಿದರೆ ಮುಂದಿನ ದಿನಗಳಲ್ಲೂ ವಿಚಾರಣೆ ಆರಂಭವಾಗುವ ಸಾಧ್ಯತೆ ತೀರಾ ಕಡಿಮೆ ಎಂದು ವಾದಿಸಿದ್ದಾರೆ.

ಯುಎಪಿಎ ಅಡಿಯಲ್ಲಿ ಸುದೀರ್ಘ ಬಂಧನಕ್ಕೊಳಗಾದ ಪ್ರಕರಣಗಳಲ್ಲಿ ಜಾಮೀನು ನೀಡುವ ಕುರಿತು ಕಾನೂನು ನಿಲುವನ್ನು ಸ್ಪಷ್ಟಪಡಿಸಿರುವ ಸುಪ್ರೀಂ ಕೋರ್ಟ್‌ನ ಇತ್ತೀಚಿನ ‘ಸೈಯದ್ ಇಫ್ತಿಕಾರ್ ಅಂದ್ರಾವಿ ವಿರುದ್ಧ ಎನ್‌ಐಎ’ ಮತ್ತು ‘ತಸ್ಲೀಮ್ ಅಹಮದ್ ವಿರುದ್ಧ ದೆಹಲಿ ಸರ್ಕಾರ’ ಪ್ರಕರಣಗಳ ತೀರ್ಪುಗಳನ್ನು ಇಮಾಮ್ ಉಲ್ಲೇಖಿಸಿದ್ದಾರೆ. ಇದರೊಂದಿಗೆ, 2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಗಲಭೆ ಭುಗಿಲೇಳುವ ಮುನ್ನವೇ, ಅಂದರೆ ಜನವರಿ ಎರಡನೇ ವಾರದಿಂದಲೇ ತಾವು ದೆಹಲಿಯಲ್ಲಿ ಇರಲಿಲ್ಲ ಮತ್ತು ಆಗಲೇ ಮತ್ತೊಂದು ಪ್ರಕರಣದಲ್ಲಿ ಕಸ್ಟಡಿಯಲ್ಲಿದ್ದೆ ಎಂಬ ಅಂಶವನ್ನು ಶರ್ಜೀಲ್ ಇಮಾಮ್ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: ಈ ದಿನ ಸಂಪಾದಕೀಯ | ದಾರಿದ್ರ್ಯದ ಗಾಯಕ್ಕೆ ಉಪ್ಪು ಮೆತ್ತಿದ ಬೆಲೆ ಏರಿಕೆ!

ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಇಬ್ಬರೂ ತಮ್ಮ ಅರ್ಜಿಗಳಲ್ಲಿ ಸುಪ್ರೀಂ ಕೋರ್ಟ್‌ನ ಹಳೆಯ ಮಹತ್ವದ ತೀರ್ಪುಗಳಾದ ‘ಯೂನಿಯನ್ ಆಫ್ ಇಂಡಿಯಾ ವಿರುದ್ಧ ಕೆ.ಎ. ನಜೀಬ್’ ಮತ್ತು ‘ವರ್ನನ್ ಗೊನ್ಸಾಲ್ವಿಸ್ ವಿರುದ್ಧ ಮಹಾರಾಷ್ಟ್ರ ಸರ್ಕಾರ’ ಪ್ರಕರಣಗಳನ್ನು ಪ್ರಸ್ತಾಪಿಸಿದ್ದಾರೆ. ಸೂಕ್ತ ಸಮಯದಲ್ಲಿ ವಿಚಾರಣೆ ಮುಗಿಯುವ ಸಾಧ್ಯತೆ ಇಲ್ಲದಿದ್ದಾಗ, ಯುಎಪಿಎ ಅಡಿಯಲ್ಲಿರುವ ಕಟ್ಟುನಿಟ್ಟಿನ ಜಾಮೀನು ನಿಯಮಗಳು ಸಂವಿಧಾನ ಒದಗಿಸಿರುವ ರಕ್ಷಣೆಯನ್ನು ಮೀರಿ ನಿಲ್ಲಲು ಸಾಧ್ಯವಿಲ್ಲ ಎಂದು ಈ ತೀರ್ಪುಗಳ ಆಧಾರದ ಮೇಲೆ ವಾದಿಸಲಾಗಿದೆ. ಇದೇ ವರ್ಷದ ಜನವರಿ 5 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಖಾಲಿದ್ ಮತ್ತು ಇಮಾಮ್‌ಗೆ ಜಾಮೀನು ನಿರಾಕರಿಸಿತ್ತು. ಆದರೆ, ಇದೇ ಪ್ರಕರಣದ ಸಹ-ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶೀಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಂ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಜಾಮೀನು ನೀಡಿ ಬಿಡುಗಡೆ ಮಾಡಿತ್ತು. ಆಗ ನ್ಯಾಯಾಲಯವು ಖಾಲಿದ್ ಮತ್ತು ಇಮಾಮ್ ವಿರುದ್ಧ ಮೇಲ್ನೋಟಕ್ಕೆ ಯುಎಪಿಎ ಅಡಿ ಪ್ರಕರಣ ಸಾಬೀತಾಗುತ್ತದೆ ಎಂದು ಹೇಳಿತ್ತಲ್ಲದೆ, ಗಲಭೆಯ ಸಂಚಿನಲ್ಲಿ ಇವರ “ಭಾಗವಹಿಸುವಿಕೆಯ ಶ್ರೇಣಿ” ಹೆಚ್ಚಿರುವುದರಿಂದ ಎಲ್ಲಾ ಆರೋಪಿಗಳನ್ನು ಸಮಾನವಾಗಿ ಕಾಣಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತ್ತು.

ಪೌರತ್ವ ತಿದ್ದುಪಡಿ ಕಾಯ್ದೆ (CAA) ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ (NRC) ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ತೀವ್ರವಾಗಿದ್ದ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ಹಿಂದೆ ದೊಡ್ಡ ಮಟ್ಟದ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿ ದೆಹಲಿ ಪೊಲೀಸರು ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಮತ್ತು ಇತರರ ವಿರುದ್ಧ ಯುಎಪಿಎ ಹಾಗೂ ಭಾರತೀಯ ದಂಡ ಸಂಹಿತೆಯ (IPC) ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...