ದೆಹಲಿಯ 69% ಕುಟುಂಬಗಳು ಮಾಲಿನ್ಯ ಸಂಬಂಧಿತ ಆರೋಗ್ಯ ಸಮಸ್ಯೆಗೆ ತುತ್ತಾಗಿವೆ: ಸಮೀಕ್ಷೆ

Date:

ದೆಹಲಿಯಲ್ಲಿ ವಾಯು ಮಾಲಿನ್ಯವು ಹೆಚ್ಚುತ್ತಲೇ ಇದೆ. ದೀಪಾವಳಿಯ ಸಮಯದಲ್ಲಿ ಗಾಳಿಯ ಪರಿಸ್ಥಿತಿ ಮತ್ತಷ್ಟು ಗಂಭೀರ ಸ್ಥಿತಿಗೆ ತಲುಪಿದೆ. ದೀಪಾವಳಿ ಸಮಯದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಮಾಲಿನ್ಯಕಾರಕ ನಗರವೆಂಬ ಕುಖ್ಯಾತಿಗೆ ದೆಹಲಿ ಗುರಿಯಾಗಿದೆ. ಮಾಲಿನ್ಯವು ಜನರ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ದೆಹಲಿಯ 69% ಕುಟುಂಬಗಲ್ಲಿ ಕನಿಷ್ಠ ಒಬ್ಬರು ಉಸಿರಾಟ ಮತ್ತು ಮಾಲಿನ್ಯ ಸಂಬಂಧಿತ ಆರೋಗ್ಯ ಸಮಸ್ಯೆಗೆ ತುತುತ್ತಾಗಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

- Advertisement -

ಗುರುವಾರ, ದೀಪಾವಳಿ ಹಬ್ಬದ ರಾತ್ರಿ ದೆಹಲಿಯಲ್ಲಿ ಎಕ್ಯೂಐ (ವಾಯು ಗುಣಮಟ್ಟ ಸೂಚ್ಯಂಕ) 999 ತಲುಪಿತ್ತು. ಇದು ದೆಹಲಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಅತ್ಯಧಿಕ ದಾಖಲೆಯಗಿದೆ. ಈ ಬೆನ್ನಲ್ಲೇ, ಲೋಕಲ್ ಸರ್ಕಲ್ಸ್‌ ಸಮೀಕ್ಷೆ ನಡೆಸಿದೆ. ದೆಹಲಿ, ನೋಯ್ಡಾ, ಗುರುಗ್ರಾಮ್, ಫರಿದಾಬಾದ್ ಮತ್ತು ಗಾಜಿಯಾಬಾದ್‌ನ ಸುಮಾರು 21,000 ಕ್ಕೂ ಹೆಚ್ಚು ಮಂದಿಯನ್ನು ಮಾತನಾಡಿಸಿದೆ. ಸಮೀಕ್ಷೆಯ ಪ್ರಕಾರ, ದೆಹಲಿ ಮತ್ತು ಸುತ್ತಲಿನ 69% ಕುಟುಂಬಗಳಲ್ಲಿ ಒಬ್ಬರು ಅಥವಾ ಹೆಚ್ಚಿನ ಸದಸ್ಯರು ಗಂಟಲು ನೋವು ಅಥವಾ ಕೆಮ್ಮು ಸಮಸ್ಯೆಯಿಂದ ಬಳಲುತ್ತಿದ್ದಾರೆ. 62% ಕುಟುಂಬಗಳಲ್ಲಿ ಕನಿಷ್ಠ ಒಬ್ಬರು ಕಣ್ಣು ಉರಿ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗೂ ದೆಹಲಿಯ ಒಟ್ಟು ಜನರಲ್ಲಿ 46% ಮಂದಿ ‘ಮೂಗು ಕಟ್ಟುವ’ ಬಾಧೆಗೆ ತುತ್ತಾಗಿದ್ದರೆ. ಸಮೀಕ್ಷೆಗೆ ಒಳಪಟ್ಟವರಲ್ಲಿ ಹಲವರು ಒಂದಕ್ಕಿಂತ ಹೆಚ್ಚು ರೋಗಲಕ್ಷಣಗಳನ್ನು ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ದೆಹಲಿಯಲ್ಲಿ 31% ಮಂದಿ ಉಸಿರಾಟದ ತೊಂದರೆ ಅಥವಾ ಆಸ್ತಮಾದಿಂದ ಬಳಲುತ್ತಿದ್ದಾರೆ. ಆತಂಕ (ಆ್ಯಂಸೈಟಿ)ಯಂತಹ ಸಮಸ್ಯೆಗೆ 23% ಮಂದಿ ತುತ್ತಾಗಿದ್ದರೆ, 15% ಮಂದಿ ನಿದ್ರಾಬಾಧೆ ಅನುಭವಿಸುತ್ತಿದ್ದಾರೆ. ಆದಾಗ್ಯೂ, ದೆಹಲಿ ಹೊರ ಭಾಗದ 31% ರಷ್ಟು ಜನರು ತಮ್ಮ ಕುಟುಂಬಗಳಲ್ಲಿ ಯಾರೂ ಮಾಲಿನ್ಯದ ಕಾರಣದಿಂದಾಗಿ ಯಾವುದೇ ಸಮಸ್ಯೆಗಳನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ‘ವಕ್ಫ್‌ ಆಸ್ತಿ ಅಲ್ಲಾಹನದ್ದು, ಮರಳಿ ಪಡೆಯಲು ಕಾಂಪ್ರಮೈಸ್‌ ಬೇಡ’ ಎಂದಿದ್ದ ಬೊಮ್ಮಾಯಿ; ಇಲ್ಲಿದೆ ದಾಖಲೆ

ದೆಹಲಿಯ ಮೇಲೆ GRAP-1 (ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ) ಅನ್ನು ವಿಧಿಸಿದ ದಿನಗಳ ನಂತರ ಅಕ್ಟೋಬರ್ 19 ರಂದು ಇದೇ ರೀತಿಯ ಸಮೀಕ್ಷೆ ನಡೆಸಲಾಗಿತ್ತು. ಆ ಸಮೀಕ್ಷೆಗೆ ಹೋಲಿಸಿದರೆ ಹೊಸ ಸಮೀಕ್ಷೆ ನಡೆಯುವ ವೇಳೆಗೆ, ಅಂದರೆ, ಕೇವಲ ಎರಡು ವಾರಗಳಲ್ಲಿ ಗಂಟಲು ನೋವು ಮತ್ತು ಕೆಮ್ಮು ಹೊಂದಿರುವ ಸಂಖ್ಯೆಯು 36%ನಿಂದ 69%ಗೆ ಏರಿಕೆಯಾಗಿದೆ.

ಗಮನಾರ್ಹವೆಂದರೆ, ಸಮೀಕ್ಷೆ ಒಳಪಟ್ಟಿವರ ಪೈಕಿ ಕೇವಲ 23% ಜನರು ಮಾತ್ರ ವಾಯು ಶುದ್ಧಿಕಾರಕಗಳನ್ನು (ಏರ್‌ ಪಿಲ್ಟರ್‌) ಬಳಸುತ್ತಿದ್ದಾರೆ. 15% ಜನರು ತಮ್ಮ ದಿನನಿತ್ಯದ ಚಟುವಟಿಕೆಗಳಿಗಾಗಿ ಹೊರಹೋಗುವಾಗ ಮಾಸ್ಕ್‌ಗಳನ್ನು ಧರಿಸುತ್ತಿದ್ದಾರೆ. 15% ಜನರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರ ಅಥವಾ ಪಾನೀಯಗಳನ್ನು ಹೆಚ್ಚಾಗಿ ಬಳಸಲು ಯೋಜಿಸುತ್ತಿದ್ದಾರೆ. ಅಲ್ಲದೆ, ಹಲವು ಮಂದಿ ದೆಹಲಿಯನ್ನು ತೊರೆಯಲು ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...