ತಮಿಳುನಾಡು| ದಿಂಡಿಗಲ್‌ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ಮಗು ಸೇರಿ 7 ಮಂದಿ ಸಾವು

Date:

ತಮಿಳುನಾಡಿನ ದಿಂಡಿಗಲ್‌ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಒಂದು ಮಗು ಸೇರಿದಂತೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ.

- Advertisement -

ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ತಿರುಚ್ಚಿ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ದಿಂಡಿಗಲ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ರಿಸೆಪ್ಷನ್​ ಹಾಲ್​ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರ ಕರ್ನಾಟಕ ಜನತೆಯ ಆಶೋತ್ತರಗಳು ಈ ಬಾರಿಯಾದರೂ ಈಡೇರಲಿ

ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಕಾರ, ಅಗ್ನಿ ಅವಘಡದಿಂದಾಗಿ ಆಸ್ಪತ್ರೆಯಲ್ಲಿ ಆವರಿಸಿದ ದಟ್ಟವಾದ ಹೊಗೆಯಿಂದ ಹಲವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಸುಮಾರು 50 ಆಂಬ್ಯುಲೆನ್ಸ್‌ಗಳನ್ನು ಬಳಸಿಕೊಂಡು ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ, ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಕನಿಷ್ಠ 30 ರೋಗಿಗಳನ್ನು ಚಿಕಿತ್ಸೆಗಾಗಿ ದಿಂಡಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿಯನ್ನು ಹತೋಟಿಗೆ ತರಲು ಅಗ್ನಿಶಾಮಕ ದಳದ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟರು. ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಆಸ್ಪತ್ರೆಯೊಳಗೆ ಸಿಲುಕಿರುವವರನ್ನು ಪತ್ತೆಹಚ್ಚಿ ರಕ್ಷಿಸುವ ಕಾರ್ಯಾಚರಣೆ ಮುಂದುವರೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CJP ಪ್ರತಿಭಟನೆ | AISA ನಾಯಕಿ ನೇಹಾ ಬೋರಾ ವಶಕ್ಕೆ; ಪೊಲೀಸ್‌ ಬಸ್‌ ಸುತ್ತುವರಿದ ಪ್ರತಿಭಟನಾಕಾರರು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ...

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅಜ್ಜಿ ನಿಧನ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಬಿಜೆಪಿ, ಪೊಲೀಸ್ ವ್ಯವಸ್ಥೆ ವಿರುದ್ಧ ಭದ್ರತಾ ಸಿಬ್ಬಂದಿ ಆಕ್ರೋಶ

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ...