ಕತಾರ್‌ನಲ್ಲಿ ಗೂಢಚರ್ಯೆ ಮಾಡಿದ ಆರೋಪದಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಂದಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.
ಭಾರತ ಸರ್ಕಾರದ ಮಧ್ಯಪ್ರವೇಶದ ಬಳಿಕ ಎಂಟು ಮಂದಿಯ ಮರಣ ದಂಡನೆಯನ್ನು ಸುದೀರ್ಘ ಅವಧಿಯ ಕಾರಾಗೃಹ ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು.
ಕತಾರ್‌ನಲ್ಲಿ ದಹ್ರಾ ಗ್ಲೋಬಲ್ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದ ಈ ಎಂಟು ಮಂದಿಯನ್ನು ಬಿಡುಗಡೆ ಮಾಡಿದ ಅಲ್ಲಿನ ಸರ್ಕಾರಕ್ಕೆ ಭಾರತ ಕೃತಜ್ಞತೆ ಸಲ್ಲಿಸಿದೆ. ಈ ಪೈಕಿ ಏಳು ಮಂದಿ ಈಗಾಗಲೇ ಭಾರತಕ್ಕೆ ಮರಳಿದ್ದಾರೆ. ಸಾವಿನ ದವಡೆಯಿಂದ ಪಾರಾದ ಎಂಟು ಮಂದಿಯ ಪೈಕಿ ಏಳು ಜನ ಈಗಾಗಲೇ ಭಾರತಕ್ಕೆ ಬಂದು ತಲುಪಿದ್ದಾರೆ.
#WATCH | Delhi: Qatar released the eight Indian ex-Navy veterans who were in its custody; seven of them have returned to India. pic.twitter.com/yuYVx5N8zR
— ANI (@ANI) February 12, 2024
ಕತಾರ್‌ನಿಂದ ಬಿಡುಗಡೆಯಾಗಿ ತಾಯ್ನಾಡಿಗೆ ಬಂದಿಳಿದ ಈ ನೇವಿ ಅಧಿಕಾರಿಗಳು ದೆಹಲಿ ವಿಮಾನ ನಿಲ್ದಾಣದಲ್ಲಿ ಖುಷಿಯಿಂದ ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ್ದಾರೆ. ಜೊತೆಗೆ ತಮ್ಮನ್ನು ಬಿಡುಗಡೆಗೊಳಿಸುವುದಕ್ಕೆ ರಾಜತಾಂತ್ರಿಕವಾಗಿ ಹಾಗೂ ವೈಯಕ್ತಿಕವಾಗಿಯೂ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದರು.
ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳು ಭಾರತಕ್ಕೆ ಮರಳಲು ಅನುವಾಗುವಂತೆ ಕತಾರ್‍ನ ಅಮೀರ್ ಕೈಗೊಂಡ ನಿರ್ಧಾರವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶ್ಲಾಘಿಸಿದೆ.
#WATCH | Delhi: One of the Navy veterans who returned from Qatar says, “We waited almost for 18 months to be back in India. We are extremely grateful to the PM. It wouldn’t have been possible without his personal intervention and his equation with Qatar. We are grateful to the… pic.twitter.com/5DiBC0yZPd
— ANI (@ANI) February 12, 2024
ನೌಕಾಪಡೆಯ ಈ ನಿವೃತ್ತ ಅಧಿಕಾರಿಗಳ ಬಿಡುಗಡೆ ಮತ್ತು ಅವರು ಭಾರತಕ್ಕೆ ಮರಳಲು ಅನುಕೂಲ ಮಾಡಿಕೊಡುವಂತೆ ಈ ಅಧಿಕಾರಿಗಳ ಕುಟುಂಬಗಳು ನಿರಂತರವಾಗಿ ಮಾಡಿಕೊಂಡ ಮನವಿಯ ಹಿನ್ನೆಲೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ರಾಜತಾಂತ್ರಿಕ ಮಾರ್ಗವನ್ನು ಅನುಸರಿಸಿ, ಕಾನೂನು ನೆರವು ನೀಡುವ ಭರವಸೆ ಕೊಟ್ಟಿತ್ತು. ಸೋಮವಾರ ಎಂಟು ಮಂದಿಯ ಪೈಕಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ಇದನ್ನು ಓದಿದ್ದೀರಾ? ರಾಜ್ಯಸಭೆ ಚುನಾವಣೆ : ಕರ್ನಾಟಕದ ಒಬ್ಬರು ಸೇರಿ 14 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ
ದೇಶದ ಸಬ್‌ಮರೈನ್ ಯೋಜನೆಯ ಬಗ್ಗೆ ಇಸ್ರೇಲ್‌ಗೆ ಗೂಢಚರ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಈ ಎಂಟು ಮಂದಿ ನಿವೃತ್ತ ಅಧಿಕಾರಿಗಳಾದ ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬಿರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಠ್, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಕರ್ ಪಕಲ, ಕಮಾಂಡರ್ ಸಂಜೀವ್ ಗುಪ್ತಾ ಮತ್ತು ಸೈಲರ್ ರಾಗೇಶ್ ಎಂಬುವವರನ್ನು 2022ರ ಅಕ್ಟೋಬರ್ ವೇಳೆ ಕತಾರ್ ನಲ್ಲಿ ಬಂಧಿಸಲಾಗಿತ್ತು. ಆ ಬಳಿಕ ಕತಾರ್ ನ್ಯಾಯಾಲಯ ಇವರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು.
ಇದು ದೊಡ್ಡ ಚರ್ಚೆಗೆ ಕಾರಣವಾದ ಕಾರಣವಾದ ಬೆನ್ನಲ್ಲೇ ಭಾರತ ಸರ್ಕಾರ ಮಧ್ಯಪ್ರವೇಶಿಸಿತ್ತು. ಆ ಬಳಿಕ ಕೊನೆಗೆ ಇದನ್ನು ಸುದೀರ್ಘ ಅವಧಿಯ ಜೈಲು ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು. ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಈ ಮಾಜಿ ಅಧಿಕಾರಿಗಳ ಬಿಡುಗಡೆ ವಿಚಾರವನ್ನು ಇಂದು ಮುಂಜಾನೆಯಷ್ಟೇ ಭಾರತ ಸರ್ಕಾರ ಘೋಷಣೆ ಮಾಡಿತ್ತು.