ಮಹಾರಾಷ್ಟ್ರ | ಭಾರೀ ಮಳೆ, ಬಿರುಗಾಳಿಗೆ ಧರೆಗುರುಳಿದ ಶತಮಾನದ ಹಳೆಯ ಮರ; 7 ಮಂದಿ ಸಾವು

Date:

  • ಮಹಾರಾಷ್ಟ್ರ ಪರಾಸ್‌ ಗ್ರಾಮದ ಬಾಬುಜಿ ದೇವಾಲಯದಲ್ಲಿ ಘಟನೆ
  • ಮೃತರಿಗೆ ಡಿಸಿಎಂ ದೇವೇಂದ್ರ ಫಡ್ನಾವಿಸ್ ಆರ್ಥಿಕ ನೆರವು ಘೋಷಣೆ

ಮಹಾರಾಷ್ಟ್ರದಲ್ಲಿ ಭಾನುವಾರ (ಏಪ್ರಿಲ್ 9) ಬೀಸಿದ ಗಾಳಿ ಸಹಿತ ಭಾರೀ ಮಳೆಗೆ ಅಕೋಲ ಜಿಲ್ಲೆಯ ದೇವಾಲಯವೊಂದರ ಆವರಣದಲ್ಲಿದ್ದ ಟಿನ್ ಶೆಡ್ ಮೇಲೆ ಶತಮಾನದ ಹಳೆಯ ಬೃಹತ್ ಮರವೊಂದು ಉರುಳಿ ಬಿದ್ದು, ಶೆಡ್‌ನಲ್ಲಿ ಆಶ್ರಯ ಪಡೆದಿದ್ದ 7 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಲಾಪುರ್ ತಾಲೂಕಿನ ಪರಾಸ್ ಗ್ರಾಮದ ಬಾಬುಜಿ ಮಹಾರಾಜ್ ದೇವಾಲಯದಲ್ಲಿ ಭಾನುವಾರ ರಾತ್ರಿ 7.30ರ ಹೊತ್ತಿಗೆ ಧಾರ್ಮಿಕ ಕಾರ್ಯಕ್ರಮವೊಂದು ಜರುಗಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ಈ ಬಗ್ಗೆ ಸ್ಥಳೀಯ ಆಡಳಿತ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

ಪೂಜಾ ಕಾರ್ಯಕ್ರಮದ ಸಲುವಾಗಿ ಜನರು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ದೇವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ಭಾರೀ ಗಾಳಿ ಸಹಿತ ಮಳೆ ಸುರಿದಿದೆ. ಪರಿಣಾಮ ಶತಮಾನದಷ್ಟು ಹಳೆಯ ಬೃಹತ್ ಬೇವಿನ ಮರ ಟಿನ್ ಶೆಡ್ ಮೇಲೆ ಉರುಳಿದೆ.

ಸುಮಾರು 35ರಿಂದ 40 ಜನರು ಶೆಡ್‌ನಲ್ಲಿ ಆಶ್ರಯ ಪಡೆದಿದ್ದರು. ಈ ಪೈಕಿ 7 ಮಂದಿ ಮೃತಪಟ್ಟಿದ್ದಾರೆ. 23 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಮ್ಮು ಮತ್ತು ಕಾಶ್ಮೀರ | ಪಾಕಿಸ್ತಾನ ಗಡಿಯಲ್ಲಿ ಒಳ ನುಸುಳುಕೋರನ ಹತ್ಯೆ

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಅಕೋಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಅವರು ಮೃತರಿಗೆ ಸಂತಾಪ ಸೂಚಿಸಿದರು. ಮೃತರ ಕುಟುಂಬಕ್ಕೆ ಹಣಕಾಸಿನ ನೆರವು ನೀಡುವ ಭರವಸೆ ನೀಡಿದರು.

ಮಾಹಿತಿ ದೊರೆತ ಕೂಡಲೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದರು. ಪರಿಸ್ಥಿತಿ ಮೇಲೆ ನಿಗಾ ಇರಿಸುವಂತೆ ಪೊಲೀಸರಿಗೆ ನಿರ್ದೇಶಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅವಶೇಷಗಳು ಸುರಂಗದೊಳಗೆ ಬಿದ್ದಾಗ ಏನಾಯಿತು?: ಘಟನೆ ಬಿಚ್ಚಿಟ್ಟ ಸಿಲುಕಿಕೊಂಡಿದ್ದ ಕಾರ್ಮಿಕ

ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಿಲ್ಕ್ಯಾರಾದಲ್ಲಿ ಸುರಂಗ ಕುಸಿದು ಆತಂಕ ಸೃಷ್ಟಿಯಾಗಿದ್ದು ಕೊನೆಗೂ ನಿವಾರಣೆಯಾಗಿದೆ....

17 ದಿನಗಳ ಕಾರ್ಯಾಚರಣೆ ಯಶಸ್ವಿ: ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರ ರಕ್ಷಣೆ

ಕಳೆದ 17 ದಿನಗಳಿಂದ ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾದ ಸುರಂಗದಲ್ಲಿ...

ಮಣಿಪುರ ಫೈಲ್ಸ್ ಲೇಖಕ ಪ್ರಣಬಾನಂದ ದಾಸ್ ವಿರುದ್ಧ ಎಫ್ಐಆರ್ ದಾಖಲು

ಈಶಾನ್ಯ ರಾಜ್ಯದಲ್ಲಿನ ಜನಾಂಗೀಯ ಹಿಂಸಾಚಾರವನ್ನು ಆಧರಿಸಿದ 'ಮಣಿಪುರ ಫೈಲ್ಸ್' ಕೃತಿಯ ಮೂಲಕ...

ಚಂದ್ರಬಾಬು ನಾಯ್ಡು ಜಾಮೀನು ಷರತ್ತು ಸಡಿಲಿಸಿದ ಸುಪ್ರೀಂ; ರ‍್ಯಾಲಿ, ಸಭೆಗಳಲ್ಲಿ ಭಾಗವಹಿಸಲು ಅನುಮತಿ

ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಹಗರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಷರತ್ತಾಗಿ ಸಾರ್ವಜನಿಕ...