ಶೇಕಡ 70ರಷ್ಟು ಭಾರತೀಯರಲ್ಲಿ ಆರೋಗ್ಯ ವಿಮೆಯಿಲ್ಲ: ಲ್ಯಾನ್ಸೆಟ್ ಅಧ್ಯಯನ ವರದಿ

Date:

ಆರೋಗ್ಯ ವಿಮಾ ರಕ್ಷಣೆಯನ್ನು ವಿಸ್ತರಿಸುವಲ್ಲಿ ಭಾರತವು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಆರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಎರಡನೇ ಸ್ಥಾನದಲ್ಲಿ ಭಾರತವಿದೆ. ಮೊದಲ ಸ್ಥಾನದಲ್ಲಿ ಇಂಡೋನೇಷ್ಯಾ ಇದೆ ಎಂದು ಲ್ಯಾನ್ಸೆಟ್‌ನಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನವು ತಿಳಿಸಿದೆ. ಆದರೆ ಶೇಕಡ 70ರಷ್ಟು ಭಾರತೀಯರಲ್ಲಿ ಆರೋಗ್ಯ ವಿಮೆಯಿಲ್ಲ ಎಂದೂ ಹೇಳಿದೆ.

- Advertisement -

ದಿ ಲ್ಯಾನ್ಸೆಟ್ ಅಧ್ಯಯನದ ಪ್ರಕಾರ, ದೇಶದಲ್ಲಿ 15–49 ವರ್ಷ ವಯಸ್ಸಿನ 29.8% ಮಹಿಳೆಯರು ಮತ್ತು 33.3% ಪುರುಷರು ವಿವಿಧ ರೀತಿಯ ಆರೋಗ್ಯ ವಿಮೆಯನ್ನು ಹೊಂದಿದ್ದಾರೆ. ಆದರೆ ಒಂದು ದೊಡ್ಡ ಭಾಗವು ವಿಮೆಯಿಲ್ಲದೆ ಉಳಿದಿದೆ ಎಂದು ಅಧ್ಯಯನ ವರದಿ ಒತ್ತಿಹೇಳುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಆರೋಗ್ಯ ವಿಮೆ, ಜೀವ ವಿಮೆ ಮೇಲಿನ ಜಿಎಸ್‌ಟಿ ತೆರವಿಗೆ ಒತ್ತಾಯಿಸಿ ‘ಇಂಡಿಯಾ’ ಪ್ರತಿಭಟನೆ

‘ಆಗ್ನೇಯ ಏಷ್ಯಾ ಪ್ರದೇಶದ (2015–2022) ಆರು ದೇಶಗಳಲ್ಲಿ ಪುರುಷರು ಮತ್ತು ಮಹಿಳೆಯರಲ್ಲಿ ಆರೋಗ್ಯ ವಿಮಾ ರಕ್ಷಣೆ’ ಎಂಬ ಅಧ್ಯಯನವು ಭಾರತದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-NFHS (2019–21) ಡೇಟಾವನ್ನು ವಿಶ್ಲೇಷಿಸಿದೆ. ಬಾಂಗ್ಲಾದೇಶ, ಇಂಡೋನೇಷ್ಯಾ, ಮ್ಯಾನ್ಮಾರ್, ಮಾಲ್ಡೀವ್ಸ್ ಮತ್ತು ನೇಪಾಳ – ಆರು ಆಗ್ನೇಯ ಏಷ್ಯಾದ ದೇಶಗಳ ಆರೋಗ್ಯ ಡೇಟಾವನ್ನು ವಿಶ್ಲೇಷಿಸಲಾಗಿದೆ.

ವರದಿ ಪ್ರಕಾರ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ (RSBY) ಮತ್ತು ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ನಂತಹ ಉಪಕ್ರಮಗಳು ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಆರ್ಥಿಕ ರಕ್ಷಣೆಯನ್ನು ಸುಧಾರಿಸುವಲ್ಲಿ ಪಾತ್ರ ವಹಿಸಿದೆ. ಆದರೆ ದೇಶದಲ್ಲಿ ಆರೋಗ್ಯ ರಕ್ಷಣೆಗೆ ಆರ್ಥಿಕ ದುರ್ಬಲತೆ ಮುಂದುವರೆದಿದೆ. ಇನ್ನು ಮಧ್ಯಮ ವರ್ಗಕ್ಕೂ ಈ ಆರೋಗ್ಯ ವಿಮೆ ಸೌಲಭ್ಯವಿಲ್ಲ. ಇನ್ನು ಸರ್ಕಾರಿ ಯೋಜನೆಗೆ ಒಳಪಡದವರು ಖಾಸಗಿ ವಿಮೆಯನ್ನು ಪಡೆಯಲು ಸಾಧ್ಯವಾಗದ ಆರ್ಥಿಕ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದೆ.

ಆರೋಗ್ಯ ವಿಮೆ ವಿಚಾರದಲ್ಲೂ ಲಿಂಗ ಅಸಮಾನತೆ ಮುಂದುವರೆದಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭಿಗಳು ಆಗದಿರುವುದೇ ಮಹಿಳೆಯರು ಹೆಚ್ಚು ವಿಮೆ ಪಡೆಯದಿರಲು ಕಾರಣವಾಗಿರಬಹುದು ಎಂದು ಅಧ್ಯಯನ ಹೇಳುತ್ತದೆ.

ಹಾಗೆಯೇ ಆರೋಗ್ಯ ವಿಮೆಯನ್ನು ಕೈಗೆಟುಕುವಂತೆ ಮಾಡಲು ಖಾಸಗಿ ಆರೋಗ್ಯ ವಿಮಾ ಪ್ರೀಮಿಯಂಗಳ ಮೇಲಿನ ಶೇಕಡ 18ರಷ್ಟು ಜಿಎಸ್‌ಟಿಯನ್ನು ಕಡಿಮೆ ಮಾಡುವಂತಹ ತೆರಿಗೆ ನೀತಿ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಶೋಧಕರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...