ಕೇರಳ | ಶೇ.70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಪ್ರಕರಣ: ಅರ್ಧಕ್ಕಿಂತ ಅಧಿಕ ಮಂದಿ ಕೋಟ್ಯಧಿಪತಿಗಳು!

Date:

ಕೇರಳದಲ್ಲಿ ಹಾಲಿ ಶಾಸಕರಲ್ಲಿ ಶೇಕಡ 70ರಷ್ಟು ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಘೋಷಿಸಿಕೊಂಡಿದ್ದಾರೆ. ಅರ್ಧಕ್ಕಿಂತ ಅಧಿಕ ಮಂದಿ ಕೋಟ್ಯಧಿಪತಿಗಳಾಗಿದ್ದಾರೆ ಎಂದು ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಮಾಡಿದೆ.

- Advertisement -

ಎಡಿಆರ್ 132 ಶಾಸಕರ ಅಫಿಡವಿಟ್‌ಗಳನ್ನು ವಿಶ್ಲೇಷಿಸಿದ್ದು, ಈ ಪೈಕಿ 92 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ತಿಳಿಸಿದೆ. ಈ ಪೈಕಿ 33 ಶಾಸಕರು ಅಂದರೆ ಶೇ.25ರಷ್ಟು ಮಂದಿ ಕೊಲೆ ಮತ್ತು ಕೊಲೆ ಯತ್ನದಂತಹ ಅಪರಾಧಗಳು ಸೇರಿದಂತೆ ಗಂಭೀರ ಆರೋಪಗಳನ್ನು ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ನಾಲ್ವರ ಪೈಪೋಟಿ; ಹಿಂದೆ ಸರಿಯುವ ಮಾತೇ ಇಲ್ಲ!

ಇಬ್ಬರು ಶಾಸಕರು ಸೆಕ್ಷನ್ 302 (ಕೊಲೆ) ಅಡಿಯಲ್ಲಿ ತಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಘೋಷಿಸಿದ್ದರೆ, ಮೂವರು ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಮೂವರು ಶಾಸಕರ ಮೇಲೆ ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಿವೆ. ಇದರಲ್ಲಿ ಅತ್ಯಾಚಾರವೂ ಸೇರಿದೆ.

ಸಿಪಿಐ(ಎಂ)ನ 58 ಶಾಸಕರಲ್ಲಿ 43 ಮಂದಿ (74%) ವಿರುದ್ದ ಕ್ರಿಮಿನಲ್ ಪ್ರಕರಣಗಳಿವೆ. ಆದರೆ ಕಾಂಗ್ರೆಸ್ 21 ಶಾಸಕರಲ್ಲಿ 19 ಮಂದಿ (90%) ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ. ಶೇ.44 ರಷ್ಟು ಸಿಪಿಐ ಶಾಸಕರು, ಶೇ.86ರಷ್ಟು ಐಯುಎಂಎಲ್ ಶಾಸಕರ ವಿರುದ್ಧ ಪ್ರಕರಣಗಳಿವೆ.

ಹೆಚ್ಚಿನ ಪ್ರಕರಣಗಳು ರಾಜಕೀಯ ಮೆರವಣಿಗೆಗಳು, ಸಾರ್ವಜನಿಕ ಪ್ರತಿಭಟನೆಗಳು ಮತ್ತು ಇತರೆ ಹೋರಾಟದ ಸಂದರ್ಭದಲ್ಲಿ ದಾಖಲಾಗಿರುವಂತದ್ದು ಎಂದು ಹೇಳಲಾಗಿದೆ. ಒಟ್ಟು ಪ್ರಕರಣಗಳಲ್ಲಿ ಕೊಲೆ, ಅತ್ಯಾಚಾರದಂತಹ ಗಂಭೀರ ಸ್ವರೂಪದ ಪ್ರಕರಣಗಳು ಸುಮಾರು ಶೇ. 25-27ರಷ್ಟಿದ್ದು ಉಳಿದವು ಸಾಧಾರಣ ರಾಜಕೀಯ ಸಂಘರ್ಷಕ್ಕೆ ಸಂಬಂಧಿಸಿವೆ ಎಂದು ವರದಿ ಹೇಳಿದೆ.

ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಕ್ರೈಸ್ತ ಸಮುದಾಯದ ಮತಗಳು ‘ಗೇಮ್‌ ಚೇಂಜರ್’ ಆಗಬಹುದೇ?

ಅರ್ಧಕ್ಕಿಂತ ಅಧಿಕ ಶಾಸಕರು ಕೋಟ್ಯಧಿಪತಿಗಳು

ಇನ್ನು ಅರ್ಧಕ್ಕಿಂತ ಅಧಿಕ ಶಾಸಕರು ಕೋಟ್ಯಧಿಪತಿಗಳಾಗಿದ್ದಾರೆ. 72 ಶಾಸಕರು (55%) 1 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಎಲ್ಲಾ ಶಾಸಕರ ಒಟ್ಟು ಆಸ್ತಿ ಒಟ್ಟು 363.78 ಕೋಟಿ ರೂ. ಆಗಿದೆ. ಪ್ರತಿ ಶಾಸಕರ ಸರಾಸರಿ ಆಸ್ತಿ 2.75 ಕೋಟಿ ರೂ. ಆಗಿದೆ.

ಕೇರಳ ಕಾಂಗ್ರೆಸ್ (ಎಂ), ಜೆಡಿ(ಎಸ್), ಎನ್‌ಸಿಪಿ ಮತ್ತು ಕೇರಳ ಕಾಂಗ್ರೆಸ್‌ನ ಎಲ್ಲಾ ಶಾಸಕರು 1 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ. ಐಯುಎಂಎಲ್ ಶಾಸಕರಲ್ಲಿ ಶೇ.86ರಷ್ಟು ಮಂದಿ ಕೋಟ್ಯಧಿಪತಿಗಳಾಗಿದ್ದಾರೆ. ಕಾಂಗ್ರೆಸ್ (62%) ಮತ್ತು ಸಿಪಿಐ(ಎಂ) (40%) ಶಾಸಕರು ಕೋಟ್ಯಧಿಪತಿಗಳಾಗಿದ್ದಾರೆ.

ಕಾಂಗ್ರೆಸ್‌ನ ಮ್ಯಾಥ್ಯೂ ಕುಝಲ್ನಾದನ್ ಅತ್ಯಂತ ಶ್ರೀಮಂತ ಶಾಸಕರಾಗಿದ್ದಾರೆ. 34 ಕೋಟಿ ರೂ.ಗೂ ಹೆಚ್ಚು ಆಸ್ತಿ ಹೊಂದಿದ್ದಾರೆ. ಸ್ವತಂತ್ರ ಶಾಸಕ ಮಣಿ ಸಿ ಕಪ್ಪೆನ್ 27 ಕೋಟಿ ರೂ.ಗೂ ಅಧಿಕ ಆಸ್ತಿ, ಕೇರಳ ಕಾಂಗ್ರೆಸ್ (ಬಿ) ನ ಕೆ.ಬಿ. ಗಣೇಶ್ ಕುಮಾರ್ 19 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿರುವುದಾಗಿ ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ. ಮತ್ತೊಂದೆಡೆ, ಸಿಪಿಐ(ಎಂ) ಶಾಸಕ ಪಿ.ಪಿ. ಸುಮೋದ್ ಸುಮಾರು ರೂ.9 ಲಕ್ಷ ಆಸ್ತಿಯನ್ನು ಘೋಷಿಸಿದ್ದಾರೆ.

ಶೇಕಡ 61ರಷ್ಟು ಶಾಸಕರು ಪದವೀಧರರು

ಶೇಕಡ 61ರಷ್ಟು ಶಾಸಕರು ಪದವೀಧರರು ಅಥವಾ ಅದಕ್ಕಿಂತ ಅಧಿಕ ಓದಿದವರಾಗಿದ್ದಾರೆ. ಶೇ. 36 ರಷ್ಟು ಶಾಸಕರು 5 ರಿಂದ 12 ನೇ ತರಗತಿಯ ನಡುವೆ ಓದಿದ್ದಾರೆ. ಮಹಿಳೆಯರ ಪ್ರಾತಿನಿಧ್ಯ ಇನ್ನೂ ಕಡಿಮೆಯಾಗಿದೆ. ವಿಧಾನಸಭೆಯಲ್ಲಿ ಕೇವಲ ಶೇ. 8 ಅಂದರೆ 11 ಶಾಸಕಿಯರು ಇದ್ದಾರೆ. ಶೇ. 70 ರಷ್ಟು ಶಾಸಕರು 51 ರಿಂದ 80 ವರ್ಷ ವಯಸ್ಸಿನವರಾಗಿದ್ದರೆ, ಉಳಿದ ಶೇ. 30 ರಷ್ಟು ಶಾಸಕರು 25–50 ವರ್ಷ ವಯಸ್ಸಿನವರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ ʼನೀರೋʼ; ಭಾರತ ಉರಿಯುತ್ತಿರುವಾಗ ಭಜನೆ ಮಾಡಿದ ʼಮೋದಿʼ!

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...