ಎಂಬಿಬಿಎಸ್ ಇಂಟರ್ನ್‌ಗಳಿಗೆ ರೂ. 25 ಸಾವಿರ ಶಿಷ್ಯವೇತನ ಪಾವತಿಸಲು ಎನ್ಎಂಸಿಗೆ ಸುಪ್ರೀಂ ನಿರ್ದೇಶನ

Date:

ಶೇ.70 ರಷ್ಟು ವೈದ್ಯಕೀಯ ಕಾಲೇಜುಗಳು ಎಂಬಿಬಿಎಸ್‌ ಇಂಟರ್ನ್‌ಶಿಪ್ ಮಾಡುತ್ತಿರುವ ವೈದ್ಯರಿಗೆ ಯಾವುದೇ ಶಿಷ್ಯವೇತನ ನೀಡುತ್ತಿಲ್ಲ ಅಥವಾ ಕನಿಷ್ಠ ಶಿಷ್ಯವೇತನ ಪಾವತಿಸುತ್ತಿಲ್ಲ ಎಂಬ ದೂರಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 15) ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ನಿರ್ದೇಶನ ನೀಡಿದೆ.

- Advertisement -

ಆರ್ಮಿ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ (ಎಸಿಎಂಎಸ್) ಶಿಷ್ಯ ವೇತನ ಪಾವತಿಸಲು ಕೋರಿ ವೈದ್ಯಕೀಯ ಇಂಟರ್ನಿಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ವಿಚಾರಣೆ ನಡೆಸುತ್ತಿದ್ದ ವೇಳೆ ಈ ಬೆಳವಣಿಗೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಎಸಿಎಂಎಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ನಿವೃತ್ತ ಕರ್ನಲ್ ಆರ್ ಬಾಲಸುಬ್ರಮಣ್ಯಂ ಅವರು, ಸಶಸ್ತ್ರ ಸಿಬ್ಬಂದಿಯ ಮಕ್ಕಳಿಗೆ ಸೇವೆ ಸಲ್ಲಿಸುವ ಉದ್ದೇಶದಿಂದ ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ (ಎಡಬ್ಲ್ಯೂಇಎಸ್) ಸಂಸ್ಥೆಯು ಯಾವುದೇ ಲಾಭರಹಿತ ಆಧಾರದ ಮೇಲೆ ಕಾಲೇಜುಗಳನ್ನು ನಡೆಸುತ್ತಿದೆ. ಸಂಸ್ಥೆಯು ಯಾವುದೇ ಸರ್ಕಾರಿ ನೆರವು ಪಡೆಯುತ್ತಿಲ್ಲ ಎಂದು ನ್ಯಾಯಾಲಯದ ಗಮನ ಸೆಳೆದರು.

ಈ ಸುದ್ದಿ ಓದಿದ್ದೀರಾ? ದಾಭೋಲ್ಕರ್ ಹತ್ಯೆ ಪ್ರಕರಣ: ಅಂತಿಮ ವರದಿಯಲ್ಲಿ ಮೂವರು ಆರೋಪಿಗಳ ಬಿಡುಗಡೆಗೆ ಸಿಬಿಐ ಶಿಫಾರಸ್ಸು

ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಪ್ರೀಂ ಕೋರ್ಟ್, ನಾವು ಲಾಭರಹಿತವಾಗಿರುವುದರಿಂದ ಸಫಾಯಿ ಕರ್ಮಚಾರಿಗಳಿಗೆ ಹಣ ನೀಡುವುದಿಲ್ಲ ಎಂದು ನೀವು ಹೇಳಬಹುದೆ? ಇದು ನಿಮಗೆ ಲಾಭ ಆದರೆ ಅವರಿಗೆ ಜೀವನಾಧಾರವಾಗಿದೆ. ನಾವು ಶಿಕ್ಷಕರಿಗೆ ವೇತನ ನೀಡುವುದಿಲ್ಲ ಎಂದು ನೀವು ಹೇಳಬಹುದೇ? ಎಲ್ಲರಿಗೂ ಪೋಷಕರ ಬೆಂಬಲ ಇಲ್ಲದಿರಬಹುದು. ಕಾನೂನು ಗುಮಾಸ್ತರಿಗೆ ಮಾಸಿಕ 80,000 ರೂ.ಗಳನ್ನು ಸುಪ್ರೀಂ ಕೋರ್ಟ್ ಪಾವತಿಸುತ್ತದೆ ಎಂದು ಸೂಚಿಸಿದ ಮುಖ್ಯ ನ್ಯಾಯ ಮೂರ್ತಿಗಳು ಎಸಿಎಂಎಸ್ ಕನಿಷ್ಠ 1 ಲಕ್ಷ ರೂ. ಪಾವತಿಸಬೇಕು ಎಂದು ಕೇಳಿದರು.

ಈ ಹಂತದಲ್ಲಿ ಪೀಠವು ಇತರ ಸರ್ಕಾರಿ ಕಾಲೇಜುಗಳಲ್ಲಿ ಪಾವತಿಸುವ ಶಿಷ್ಯವೇತನ ದರವನ್ನು ಹೋಲಿಸಿತು ಮತ್ತು ಅರ್ಜಿದಾರರಿಗೆ ಅವರು ಎಷ್ಟು ನಿರೀಕ್ಷಿಸುತ್ತಿದ್ದಾರೆ ಎಂದು ಕೇಳಿತು. ಅರ್ಜಿದಾರರ ಪರ ವಕೀಲ ಚಾರು ಮಾಥುರ್, 25,000 ರೂ. ಎಂದು ಹೇಳಿದರು.

ನಂತರದಲ್ಲಿ ಪೀಠವು ಪ್ರಸ್ತುತ ನೂರು ಇಂಟರ್ನಿಗಳಿದ್ದು ವೈದ್ಯಕೀಯ ಇಂಟರ್ನ್‌ಗಳಿಗೆ ಶಿಷ್ಯ ವೇತನವಾಗಿ ತಿಂಗಳಿಗೆ ರೂ.25,000 ಪಾವತಿಸಲು ಎಸಿಎಂಎಸ್‌ಗೆ ಸೂಚಿಸಿತು.

“ಇಂಟರ್ನ್‌ಶಿಪ್ ಅವಧಿಯಲ್ಲಿ ಇಂಟರ್ನ್‌ಗಳಿಗೆ ಶಿಷ್ಯವೇತನ ಪಾವತಿಸಬೇಕಾಗುತ್ತದೆ. ಎನ್‌ಎಂಸಿ ಅಳವಡಿಸಿಕೊಂಡಿರುವ ನಿಯಮಾವಳಿಗಳ ಆದೇಶವನ್ನು ಉಲ್ಲಂಘಿಸಲಾಗುವುದಿಲ್ಲ” ಎಂದು ಪೀಠವು ತನ್ನ ತನ್ನ ಆದೇಶದಲ್ಲಿ ಹೇಳಿದೆ.

ಈ ಹಂತದಲ್ಲಿ ವಕೀಲ ವೈಭವ್ ಗಗ್ಗರ್ ಅವರು ಶೇ. 70 ರಷ್ಟು ಕಾಲೇಜುಗಳು ಶಿಷ್ಯ ವೇತನ ಪಾವತಿಸುತ್ತಿಲ್ಲ ಎಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಕೋರ್ಟ್ ಅಫಿಡವಿಟ್ ಸಲ್ಲಿಸುವಂತೆ ಎನ್‌ಎಂಸಿ ಪರ ವಕೀಲ ಗೌರವ್ ಶರ್ಮಾ ಅವರಿಗೆ ಸೂಚಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...