ದಲಿತ ಬಾಲಕಿಯ ಮೇಲೆ ಅತ್ಯಾಚಾರ: 70 ವರ್ಷದ ಕಾಮುಕ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ

Date:

2022ರಲ್ಲಿ ಹತ್ತು ವರ್ಷದ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ 70 ವರ್ಷದ ವ್ಯಕ್ತಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ಉತ್ತರ ಪ್ರದೇಶದ ಝಾನ್ಸಿ ವಿಶೇಷ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.

- Advertisement -

ಝಾನ್ಸಿ ಜಿಲ್ಲೆಯ ತೋಡಿ ಫತೇಪುರ್ ಬಳಿ 2022ರ ಜುಲೈ 30ರಂದು ಘಟನೆ ನಡೆದಿತ್ತು. ಸಂತ್ರಸ್ತೆ ತನ್ನ ತಾಯಿ ಮತ್ತು ಸಹೋದರನೊಂದಿಗೆ ತೋಟಕ್ಕೆ ಹೋಗಿದ್ದರು. ಆಕೆಯ ತಾಯಿ ಕೆಲಸದಲ್ಲಿ ತೊಡಗಿದ್ದಾಗ, ಬಾಲಕಿ ಒಬ್ಬಳೇ ಆಟವಾಡುತ್ತಿದ್ದಳು. ಬಾಲಕಿ ಒಬ್ಬಂಟಿಯಾಗಿರುವುದನ್ನು ಕಂಡ ಆರೋಪಿ, ಆಕೆಯ ಮೇಲೆ ಸತ್ಯಾಚಾರ ಎಸಗಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಆರೋಪಿ ವಿರುದ್ದ ಐಪಿಸಿ ಸೆಕ್ಷನ್ 376 (ಎಬಿ), 5/6, ಪೋಕ್ಸೊ ಕಾಯ್ದೆ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿರುವ ವಿಶೇಷ ಪೋಕ್ಸೊ ಕಾಯ್ದೆಯ ನ್ಯಾಯಾಧೀಶ ಮೊಹಮ್ಮದ್ ನಿಯಾಜ್ ಅಹ್ಮದ್ ಅನ್ಸಾರಿ ಅವರು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿದ್ದಾರೆ. ಅಪರಾಧಿಗೆ ಇಪ್ಪತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ಸಂತ್ರಸ್ತೆಗೆ ನೀಡಬೇಕೆಂದು ಆದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...