ನೀಟ್- ಯುಜಿ ಮರುಪರೀಕ್ಷೆ| 1,563 ವಿದ್ಯಾರ್ಥಿಗಳಲ್ಲಿ 750 ಗೈರು: ಎನ್‌ಟಿಎ

Date:

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಭಾನುವಾರ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಆರು ಕೇಂದ್ರಗಳಲ್ಲಿ 1,563 ಅಭ್ಯರ್ಥಿಗಳಿಗೆ ಕೈಗೊಳ್ಳಲಾಗಿದ್ದ ನೀಟ್‌ – ಯುಜಿ ಮರುಪರೀಕ್ಷೆಯಲ್ಲಿ 813 ಅಭ್ಯರ್ಥಿಗಳು ಹಾಜರಾಗಿದ್ದರೆ, 750 ಅಭ್ಯರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ ಎಂದು ಎನ್‌ಟಿಎ ಪರೀಕ್ಷಾ ಮಂಡಳಿ ತಿಳಿಸಿದೆ.

- Advertisement -

ಇಂದು ನೀಟ್‌ – ಯುಜಿ ಮರುಪರೀಕ್ಷೆ ಪಡೆಯಲು ನಿರ್ಧರಿಸಲಾಗಿದ್ದ ಶೇಕಡಾ 48 ರಷ್ಟು ವಿದ್ಯಾರ್ಥಿಗಳು ಹಾಜರಾಗಲಿಲ್ಲ ಎಂದು ಎನ್‌ಟಿಎ ಹೇಳಿಕೆಯಲ್ಲಿ ತಿಳಿಸಿದೆ. ಎನ್‌ಟಿಎ ಛತ್ತೀಸ್‌ಗಢ, ಗುಜರಾತ್, ಹರಿಯಾಣ, ಮೇಘಾಲಯ ಮತ್ತು ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದಲ್ಲಿ ಏಳು ಪರೀಕ್ಷಾ ಕೇಂದ್ರಗಳನ್ನು ತೆರೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ

ಈ ನಡುವೆ ಮೇ 5 ರಂದು ಬಿಹಾರದ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಿದ್ದ 17 ನೀಟ್‌ ಯುಜಿ ಅಭ್ಯರ್ಥಿಗಳನ್ನು ಅವ್ಯವಹಾರ ಪತ್ತೆಯಾದ ನಂತರ ಡಿಬಾರ್ ಮಾಡಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ.

ಮೇ 5 ರಂದು ನಡೆದ ನೀಟ್‌ ಯುಜಿ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ ದಿನದಂದು ಮರುಪರೀಕ್ಷೆ ನಡೆಸಲಾಗಿತ್ತು. ಗುಜರಾತ್ ಮತ್ತು ಬಿಹಾರದಲ್ಲಿ ಪೊಲೀಸರು ದಾಖಲಿಸಿರುವ ಪ್ರಕರಣಗಳ ತನಿಖೆಯನ್ನು ಸಿಬಿಐ ವಹಿಸಿಕೊಳ್ಳಲಿದೆ.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...