76ನೇ ಗಣರಾಜ್ಯೋತ್ಸವಕ್ಕೆ 10,000 ಗಣ್ಯರಿಗೆ ಆಹ್ವಾನ: ಮೆರವಣಿಗೆಯಲ್ಲಿ ರಾಜ್ಯದ ಲಕ್ಕುಂಡಿ ಶಿಲ್ಪಕಲೆಯ ಸ್ತಬ್ಧಚಿತ್ರ ಭಾಗಿ

Date:

Advertisements

ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲೂ ಸಂಭ್ರಮ, ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.

ಇಂದು ದೆಹಲಿಯ ಕರ್ತವ್ಯ ಪಥದಲ್ಲಿ ಆಕರ್ಷಕ ಪಥ ಸಂಚಲನ ನಡೆಯಲಿದೆ. 76ನೇ ಗಣರಾಜೋತ್ಸವದ ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣ ಆಗಲಿದೆ. ಕರ್ನಾಟಕದ ಲಕ್ಕುಂಡಿ ಶಿಲ್ಪಕಲೆಯ ಸ್ತಬ್ಧಚಿತ್ರ ಕೂಡ ಮೆರವಣಿಗೆಯಲ್ಲಿ ಕಾಣಿಸಿಕೊಳ್ಳಲಿದೆ.

ಈ ಬಾರಿ ಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿ ಘೋಷಣೆಯೊಂದಿಗೆ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರು ಭಾಗಿಯಾಗಲಿದ್ದಾರೆ. 10,000 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಜೊತೆಗೆ ಇದೇ ಮೊದಲಬಾರಿಗೆ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಗುತ್ತಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

ಪರೇಡ್‌ನಲ್ಲಿ 15 ರಾಜ್ಯಗಳು, ಕೇಂದ್ರಾಳಿತ ಪ್ರದೇಶಗಳು ಹಾಗೂ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಂದ ಸ್ತಬ್ಧಚಿತ್ರ ಪ್ರದರ್ಶನ, ಹತ್ತು ಸಾವಿರಕ್ಕೂ ಅಧಿಕ ವಿಶೇಷ ಅತಿಥಿಗಳು, ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಹಾಗಾಗಿ ಕರ್ತವ್ಯ ಪಥದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, 15,000ಕ್ಕೂ ಅಧಿಕ ಪೊಲೀಸರು, 70 ಪ್ಯಾರಾ ಮಿಲಿಟರಿ ಕಂಪನಿಗಳ ನಿಯೋಜನೆ ಮಾಡಲಾಗಿದೆ.

ಒಟ್ಟು 6 ಹಂತಗಳಲ್ಲಿ ಭದ್ರತೆಯನ್ನು ಮಾಡಿಕೊಳ್ಳಲಾಗಿದ್ದು, ಎಲ್ಲ ಕಡೆಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾ, 500 ಎಐ ಕ್ಯಾಮೆರಾಗಳ ಅಳವಡಿಸಲಾಗಿದೆ. 40 ಅಧಿಕ ಕಂಟ್ರೋಲ್ ರೂಂಗಳಿಂದ ಇಡೀ ಕಾರ್ಯಕ್ರಮದ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ.

ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 76ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದರು. ಬೆಂಗಳೂರಿನ ಮಾಣಿಕ್‌ ಶಾ ಪರೇಡ್‌ನಲ್ಲಿ ಮಾತನಾಡಿದ ಅವರು “ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ಗಣರಾಜ್ಯೋತ್ಸವವನ್ನು ನಾವು ಆಚರಿಸುತ್ತಿದ್ದೇವೆ. ಇದು ಗತವೈಭವದಲ್ಲಿ ಮೈಮರೆಯದೆ ವರ್ತಮಾನದ ವಾಸ್ತವಗಳಿಗೆ ಮುಖಾಮುಖಿಯಾಗುವ ಕಾಲ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಸಂವಿಧಾನದ ಮೂರು ಮುಖ್ಯ ಆಧಾರ ಸ್ಥಂಭಗಳು ಭದ್ರವಾಗಿದ್ದು ಆರೋಗ್ಯಕರವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸಂವಿಧಾನದ ಪಾಲನೆಯಾಗುತ್ತಿದೆ ಮತ್ತು ಪ್ರಜಾಪ್ರಭುತ್ವ ಸುರಕ್ಷಿತವಾಗಿದೆ” ಎಂದು ಅರ್ಥ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X