ಮದುವೆಯಾಗುವುದಾಗಿ ನಂಬಿಸಿ 77 ಮಹಿಳೆಯರಿಗೆ ವಂಚನೆ; ದುಷ್ಕರ್ಮಿ ಬಂಧನ

Date:

ಮದುವೆಯಾಗುವುದಾಗಿ ನಂಬಿಸಿ 10 ವರ್ಷಗಳಲ್ಲಿ 77 ಮಹಿಳೆಯರಿಗೆ ವಂಚಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ದೋಚಿದ್ದ ದುಷ್ಕರ್ಮಿಯನ್ನು ಒರಿಸ್ಸಾ ಪೊಲೀಸರು ಬಂಧಿಸಿದ್ದಾರೆ.

- Advertisement -

ಆರೋಪಿಯನ್ನು ಒರಿಸ್ಸಾದ ಅಂಗುಲ್‌ ಜಿಲ್ಲೆಯ ಚೆಂಡಿಪಾಡಾ ಮೂಲದ ಬಿರಂಚಿ ನಾರಾಯಣನಾಥ್ ಎಂದು ಗುರುತಿಸಲಾಗಿದೆ. ಆರೋಪಿ ಸುಮಾರು 7 ರಾಜ್ಯಗಳಲ್ಲಿ ಮಹಿಳೆಯನ್ನು ವಂಚಿಸಿದ್ದಾನೆ. ಆತನ ಮೊಬೈಲ್‌ಅನ್ನು ವಶಕ್ಕೆ ಪಡೆದಿರುವ ಪೊಲೀಸರು, ಆರೋಪಿಯು ಮಹಿಳೆಯರೊಂದಿಗೆ ನಿಕಟವಾಗಿ ತೆಗೆದುಕೊಂಡಿರುವ 300ಕ್ಕೂ ಹೆಚ್ಚು ಫೋಟೋಗಳನ್ನು ಕಂಡುಕೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆರೋಪಿ ಬಿರಂಚಿ 2013ರಿಂದಲೂ ಇಂತಹ ವಂಚನೆಗಳನ್ನು ಮಾಡುತ್ತಿದ್ದಾನೆ. ಒರಿಸ್ಸಾ ಮಾತ್ರವಲ್ಲದೆ ರಾಜಸ್ಥಾನ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಹಾಗೂ ದೆಹಲಿಯಲ್ಲಿ ಮಹಿಳೆಯರಿಗೆ ವಂಚಿಸಿದ್ದಾನೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಅಲ್ಲದೆ, ಹಲವಾರು ಮಹಿಳೆಯರನ್ನು ಮದುವೆಯಾಗಿ, ಅವರಿಂದ ಹಣ ಹಾಗೂ ಚಿನ್ನಾಭರಣೆ ಸುಲಿಗೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆತನ ವಿರುದ್ಧ ಒರಿಸ್ಸಾದ ಬೈದ್ಯನಾಥಪುರ, ಜರ್ಪದ, ಬಾಲಸೋರ್ ಸದರ್, ಛೇಂಡ್, ಧೆಂಕನಲ್ ಟೌನ್, ನಯಾಪಲ್ಲಿ, ಬಲಿಪಟ್ನಾ ಹಾಗೂ ಅಂಗುಲ್ ಟೌನ್ ಪೊಲೀಸ್ ಠಾಣೆಗಳಲ್ಲಿ ಕನಿಷ್ಠ 9 ಪ್ರಕರಣಗಳು ದಾಖಲಾಗಿದ್ದವು. ಆ ಪ್ರಕರಣಗಳಲ್ಲಿ ಮೂರಕ್ಕೂ ಹೆಚ್ಚು ಬಾರಿ ಆತ ಜೈಲು ಶಿಕ್ಷೆ ಅನುಭವಿಸಿದ್ದಾನೆ ಎಂದು ವರದಿಯಾಗಿದೆ.

ನಾಲ್ಕು ಭಾಷೆಗಳಲ್ಲಿ ಸ್ಪಷ್ಟ ಮತ್ತು ನಿರರ್ಗಳವಾಗಿ ಮಾತನಾಡುವ ಆರೋಪಿ, ವಿವಾಹ ಸಂಬಂಧಿತ ಸೈಟ್‌ಗಳಲ್ಲಿ ಮಧ್ಯವಯಸ್ಸಿನ ಮಹಿಳೆಯರು, ವಿಚ್ಛೇದನ ಪಡೆದ ಮಹಿಳೆಯರು ಹಾಗೂ ವಿಧವೆಯನ್ನು ಗುರಿಯಾಗಿಸಿಕೊಂಡಿದ್ದ. ಅವರನ್ನು ಪರಿಚಯ ಮಾಡಿಕೊಂಡು, ಸಲುಗೆ ಬೆಳೆಸಿ, ವಿವಾಹವಾಗುವುದಾಗಿ ನಂಬಿಸಿ ಸುಲಿಗೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...