ನಾಗ್ಪುರ ಬಳಿಯ ಆಯುಧ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮಹಾರಾಷ್ಟ್ರದ ಭಂಡಾರಾದಲ್ಲಿರುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಸ್ಪೋಟದ ತೀವ್ರತೆ 5 ಕಿ.ಮೀ ದೂರದವರೆಗೂ ಕೇಳಿಬಂದಿದೆ. ಸ್ಫೋಟ ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ
ಬೆಳಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸದ್ಯ ರಕ್ಷಣಾ ತಂಡಗಳು ಬದುಕುಳಿದವರಿಗಾಗಿ ಶೋಧ ನಡೆಸುತ್ತಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಗೊಂಡವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೋಲ್ಟೆ ತಿಳಿಸಿದ್ದಾರೆ.
ಸ್ಫೋಟದ ಸಮಯದಲ್ಲಿ ಛಾವಣಿ ಕುಸಿದಿದ್ದು ಅದರ ಅಡಿಯಲ್ಲಿ 12 ಮಂದಿ ಸಿಲುಕಿದ್ದರು. ಅವರಲ್ಲಿ ಇಬ್ಬರನ್ನು ಮಾತ್ರ ರಕ್ಷಿಸಲಾಗಿದೆ. ಉಳಿದವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿಯಾಗಿದೆ.
