ತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಸಾವು; ಜಾರ್ಖಂಡ್, ಮಹಾರಾಷ್ಟ್ರದ ದುರಂತಗಳಲ್ಲಿ 10 ಮೃತ

Date:

ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಎಂಟು ಜನರು ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿದ್ದಾರೆ.

- Advertisement -

ಶನಿವಾರ ಮುಂಜಾನೆ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿದ್ದು ಸಮೀಪದ ಹೋಟೆಲ್ ಕಟ್ಟಡ ಕುಸಿದು ಉಳಿದ ನಾಲ್ಕು ಕಟ್ಟಡಗಳು ಭಾಗಶಃ ಹಾನಿಯಾಗಿವೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಗಂಭೀರವಾಗಿ ಗಾಯಗೊಂಡಿರುವ 12 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಖಂಡ್‌: ಮೊಹರಂ ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್‌ ಸ್ಪರ್ಶದಿಂದ 4 ಸಾವು

ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಮೊಹರಂ ಮೆರವಣಿಗೆಗೆ ತಯಾರಿ ನಡೆಸುತ್ತಿದ್ದಾಗ ಹೈಟೆನ್ಷನ್ ತಂತಿಯ ಸ್ಪರ್ಶದಿಂದ ನಾಲ್ವರು ಮೃತಪಟ್ಟು, 10 ಮಂದಿ ಗಾಯಗೊಂಡಿದ್ದಾರೆ.

ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 80 ಕಿಮೀ ದೂರದಲ್ಲಿರುವ ಪೆಟಾರ್‌ವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಖೆಟ್ಕೊ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮೆರವಣಿಗೆಯಲ್ಲಿ ಕಬ್ಬಿಣದಿಂದ ಮಾಡಲ್ಪಟ್ಟ ಧಾರ್ಮಿಕ ಧ್ವಜವು 11,000 ವೋಲ್ಟ್‌ಗಳ ಹೈಟೆನ್ಷನ್ ತಂತಿಗೆ ತಗುಲಿ ದುರಂತ ಸಂಭವಿಸಿದೆ ಎಂದು ಬೊಕಾರೊ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ತಿಳಿಸಿದ್ದಾರೆ.

ಎಲ್ಲ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಭಾರತದ ಅಕ್ಕಿ ರಫ್ತು ನಿಷೇಧ ಮತ್ತು ಜಾಗತಿಕ ಪರಿಣಾಮಗಳು

ಮಹಾರಾಷ್ಟ್ರದಲ್ಲಿ ಬಸ್‌ಗಳ ಡಿಕ್ಕಿಯಿಂದ 6 ಸಾವು

ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ನಿನ್ನೆ(ಜುಲೈ 29) ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ಮಲ್ಕಾಪುರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 53ರ ನಂದೂರ್ ನಾಕಾ ಮೇಲ್ಸೇತುವೆಯ ಬಳಿ ಬೆಳಗಿನ ಜಾವ 2.30ರ ಸುಮಾರಿಗೆ ಮುಂದೆ ಹೋಗುತ್ತಿದ್ದ ಬಸ್‌ಗೆ ಹಿಂದೆ ಬರುತ್ತಿದ್ದ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಬಾಲಾಜಿ ಟ್ರಾವೆಲ್ಸ್ ಹೆಸರಿನ ಕಂಪನಿಯ ಒಡೆತನದ ಬಸ್‌ಗಳಲ್ಲಿ ಒಂದು ಅಮರನಾಥ ಯಾತ್ರೆಯಿಂದ ಹಿಂಗೋಲಿ ಜಿಲ್ಲೆಗೆ ಮರಳುತ್ತಿದ್ದರೆ, ಇನ್ನೊಂದು ರಾಯಲ್ ಟ್ರಾವೆಲ್ಸ್ ಕಂಪನಿಯ ಮಾಲೀಕತ್ವದ ಬಸ್‌ ನಾಸಿಕ್‌ಗೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಸ್‌ ಇನ್ನೊಂದನ್ನು ಹಿಂದಿಕ್ಕುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಗಾಯಗೊಂಡಿರುವ ಸುಮಾರು 20 ಮಂದಿಯನ್ನು ಬುಲ್ಧಾನಾದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗಳಾದ 32 ಪ್ರಯಾಣಿಕರಿಗೆ ಸಮೀಪದ ಗುರುದ್ವಾರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...