ಹೈದರಾಬಾದ್‌ನ ಚಾರ್​ಮಿನಾರ್ ಬಳಿ ಭಾರಿ ಬೆಂಕಿ ಅವಘಡ; ಕನಿಷ್ಠ 17 ಮಂದಿ ಸಾವು

Date:

ಹೈದರಾಬಾದ್‌ನ ಚಾರ್​ಮಿನಾರ್ ಬಳಿಯ ಗುಲ್ಜಾರ್ ಹೌಸ್‌ ಸಮೀಪದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಬೆಂಕಿ ನಿಯಂತ್ರಿಸಲು ಸ್ಥಳಕ್ಕೆ ಒಟ್ಟು 11 ಅಗ್ನಿಶಾಮಕ ವಾಹನಗಳು ದೌಡಾಯಿಸಿ, ಕಾರ್ಯಾಚರಣೆ ನಡೆಸಿದ್ದಾರೆ. ಸಿಬ್ಬಂದಿಯು ಒಬ್ಬ ಮಹಿಳೆ ಸೇರಿದಂತೆ ಹಲವರನ್ನು ರಕ್ಷಿಸಲಾಗಿದೆ. ಆದರೆ 8 ಜನರು ಬೆಂಕಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಉಸ್ಮಾನಿಯಾ, ಹೈದರ್‌ಗುಡ ಮತ್ತು ಡಿಆರ್‌ಡಿಒ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಬೆಂಕಿ ನಂದಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಂತಿ ಬಯಸುವುದು ದೇಶದ್ರೋಹವಲ್ಲ!

ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂಬ ಶಂಕೆ ಇದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಕಿ ಅವಘಡದಿಂದ ಸ್ಥಳೀಯರು ಕೆಲಕಾಲ ತೀವ್ರ ಆತಂಕಗೊಂಡಿದ್ದರು.

ಹೈದರಾಬಾದ್‌ನಲ್ಲಿ ಇತ್ತೀಚೆಗೆ ಮೇ 14ರಂದು ಸಂಭವಿಸಿದ್ದ ಮತ್ತೊಂದು ಘಟನೆಯಲ್ಲಿ, ಬೇಗಂ ಬಜಾರ್‌ನಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...