ಛತ್ತೀಸ್‌ಗಢ | 10 ಪೊಲೀಸರು ಮೃತಪಟ್ಟಿದ್ದ ಸ್ಫೋಟ ಪ್ರಕರಣದಲ್ಲಿ 8 ಮಾವೋವಾದಿಗಳ ಬಂಧನ

Date:

Advertisements
  • ಛತ್ತೀಸ್‌ಗಢ ದಾಂತೇವಾಡದಲ್ಲಿ ಪೊಲೀಸರ ವಾಹನ ಸ್ಫೋಟ
  • 8 ಮವೋವಾದಿಗಳ ಬಂಧನದ ಮೂಲಕ ಬಂಧಿತರ ಸಂಖ್ಯೆ 17 ಕ್ಕೆ ಏರಿಕೆ

ಛತ್ತೀಸ್‌ಗಢ ರಾಜ್ಯದ ದಾಂತೇವಾಡ ಜಿಲ್ಲೆಯಲ್ಲಿ ಕಳೆದ ತಿಂಗಳು 10 ಪೊಲೀಸ್ ಸಿಬ್ಬಂದಿ ಹಾಗೂ ನಾಗರಿಕ ಮೃತಪಟ್ಟಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಬಾಲಕ ಸೇರಿ ಎಂಟು ಮಾವೋವಾದಿಗಳನ್ನು ಬಂದಿರುವುದಾಗಿ ಪೊಲೀಸರು ಶನಿವಾರ (ಮೇ 20) ಹೇಳಿದ್ದಾರೆ.

ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರಾಗಿರುವ ನಕ್ಸಲರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

8 ಮಾವೋವಾದಿಗಳ ಪೈಕಿ ಐವರನ್ನು ಬುಧವಾರ (ಮೇ 17) ಬಂಧಿಸಲಾಗಿದ್ದು ಶುಕ್ರವಾರ ( ಮೇ 19) ಛತ್ತೀಸ್‌ಗಢ ಅರನ್ಪುರ್ ಪೊಲೀಸ್ ಠಾಣೆ ಪ್ರದೇಶ ಮತ್ತು ನೆರೆಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬಾಲಕ ಸೇರಿದಂತೆ ಇತರ ಮೂವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Advertisements

ಮಾಸಾ ಕವಾಸಿ, ಕೋಸ ಮಾಂಡವಿ, ಅರ್ಜುನ್ ಕುಂಜಮ್, ದೇವಾ ಮದ್ವಿ, ಬಂಡಿ ಮದ್ವಿ, ಮುಯಾ ಕೊವಾಸಿ ಮತ್ತು ಗಂಗಾ ಮದ್ವಿ ಎಂಬ ಪೆಡ್ಕಾ ಗ್ರಾಮದ ನಕ್ಸಲರನ್ನು ಬಂಧಿಸಲಾಗಿದೆ.

ಸ್ಥಳೀಯ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿದೆ. ನಕ್ಸಲರನ್ನು ಮೂರು ದಿನಗಳ ಕಾಲ ಪೊಲೀಸ್ ಬಂಧನಕ್ಕೆ ನೀಡಲಾಗಿದೆ. ಅಪ್ರಾಪ್ತನನ್ನು ಬಾಲ ಅಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಛತ್ತೀಸ್‌ಗಢ ದಾಂತೇವಾಡದಲ್ಲಿ ಏಪ್ರಿಲ್ 26 ರಂದು ರಾಜ್ಯ ಪೊಲೀಸ್ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ತಂಡದ ವಾಹನದ ಮೇಲೆ ನಕ್ಸಲರು ಐಇಡಿ (ಸುಧಾರಿತ ಸ್ಪೋಟಕ ಸಾಧನ) ಸ್ಪೋಟಿಸಿದ್ದರು.

ಘಟನೆಯಲ್ಲಿ ವಾಹನ ಚಾಲಕ ಹಾಗೂ 10 ಮಂದಿ ಪೊಲೀಸರು ಮೃತಪಟ್ಟಿದ್ದರು.

ದಾಂತೇವಾಡದ ಅರನ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಮಾವೋವಾದಿಗಳ ಇರುವಿಕೆಯ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ಡಿಆರ್ಜಿ ತಂಡವನ್ನು ಕಳುಹಿಸಲಾಗಿತ್ತು.

ಕಾರ್ಯಾಚರಣೆ ಮುಗಿಸಿ ತಂಡ ವಾಪಸಾಗುತ್ತಿದ್ದಾಗ ನಕ್ಸಲರು ಐಇಡಿ ಸ್ಫೋಟಿಸಿದ್ದರು. ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯು ಈ ಪ್ರದೇಶದಲ್ಲಿ ಎಡಪಂಥೀಯ ಭಯೋತ್ಪಾದಕತೆಯನ್ನು ಎದುರಿಸಲು ರಚಿಸಲಾದ ಛತ್ತೀಸಗಢದ ಪೊಲೀಸರ ಘಟಕಗಳಲ್ಲಿ ಒಂದು ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಸುಬ್ರಮಣ್ಯನ್ ಸ್ವಾಮಿ ಎಂಬ ಅತೃಪ್ತ ಆತ್ಮದ ಚೀರಾಟ

ಛತ್ತೀಸ್‌ಗಢ ರಾಜ್ಯದಲ್ಲಿ ಕೆಲದಿನಗಳ ಹಿಂದೆ ಘಟನೆಗೆ ಸಂಬಂಧಿಸಿ ಮೂವರು ಅಪ್ರಾಪ್ತರು ಸೇರಿದಂತೆ ಒಂಬತ್ತು ಮಾವೋವಾದಿಗಳನ್ನು ಬಂಧಿಸಲಾಗಿತ್ತು.

ಇವರ ವಿಚಾರಣೆಯು ಹೆಚ್ಚಿನ ನಕ್ಸಲರನ್ನು ಬಂಧಿಸಲು ಪೊಲೀಸರಿಗೆ ಸಹಾಯ ಮಾಡಿತು ಎಂದು ಅಧಿಕಾರಿಗಳು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X