2 ತಿಂಗಳಲ್ಲಿ 8 ಹುಲಿ ಸಾವು; ತನಿಖೆಗೆ ಕೋರಿ ಸಲ್ಲಿಕೆಯಾದ ಅರ್ಜಿಗೆ ವರದಿ ಕೇಳಿದ ಎಂಪಿ ಹೈಕೋರ್ಟ್

Date:

ಮಧ್ಯಪ್ರದೇಶದ ಪ್ರಸಿದ್ಧ ‘ಕನ್ಹಾ ರಾಷ್ಟ್ರೀಯ ಉದ್ಯಾನವನ’ದಲ್ಲಿ ಕೇವಲ 2 ತಿಂಗಳಲ್ಲಿ ಬರೋಬ್ಬರಿ 8 ಹುಲಿಗಳು ಸಾವನ್ನಪ್ಪಿರುವುದು ದೇಶಾದ್ಯಂತ ಆತಂಕ ಮೂಡಿಸಿದೆ. ಈ ಗಂಭೀರ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಮಧ್ಯಪ್ರದೇಶ ಹೈಕೋರ್ಟ್‌ನ ಜಬಲ್ಪುರ ಪೀಠವು, ಹುಲಿಗಳ ಸರಣಿ ಸಾವನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

- Advertisement -

‘ಸುಬಿತ್ ಚಕ್ರವರ್ತಿ vs ಯೂನಿಯನ್ ಆಫ್ ಇಂಡಿಯಾ’ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿವೇಕ್ ಜೈನ್ ಮತ್ತು ಅಜಯ್ ಕುಮಾರ್ ನಿರಂಖಾರಿ ಅವರಿದ್ದ ದ್ವಿಸದಸ್ಯ ಪೀಠವು ಈ ಆದೇಶ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮುಂಬೈ ಮೂಲದ ವಕೀಲ ಸುಬಿತ್ ಚಕ್ರವರ್ತಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರ ಸರ್ಕಾರ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA), ಮಧ್ಯಪ್ರದೇಶ ಸರ್ಕಾರ ಮತ್ತು ಹಿರಿಯ ಅರಣ್ಯ ಅಧಿಕಾರಿಗಳಿಗೆ ನೋಟಿಸ್ ನೀಡಿದೆ.

“ಕನ್ಹಾ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ಸಾವು ತಡೆಯಲು ಮತ್ತು ಈ ಕಾಯಿಲೆಗೆ ಚಿಕಿತ್ಸೆ ನೀಡಲು ಕೈಗೊಂಡಿರುವ ನಿರ್ದಿಷ್ಟ ಮುನ್ನೆಚ್ಚರಿಕಾ ಕ್ರಮಗಳ ವಿವರಗಳೊಂದಿಗೆ ಮುಂದಿನ ಎರಡು ವಾರಗಳಲ್ಲಿ ಉತ್ತರಿಸಬೇಕು,” ಎಂದು ಪೀಠವು ಆದೇಶ ನೀಡಿದೆ.

ಕಳೆದ ಏಪ್ರಿಲ್ ಮತ್ತು ಮೇ ತಿಂಗಳ ಅವಧಿಯಲ್ಲಿ ಕನ್ಹಾದಲ್ಲಿ 8 ಹುಲಿಗಳು ಸಾವನ್ನಪ್ಪಿವೆ. ಇದರಲ್ಲಿ ಅರಣ್ಯ ಪ್ರೇಮಿಗಳ ನೆಚ್ಚಿನ ಹುಲಿಗಳಾಗಿದ್ದ ಟಿ-122 (ಸುನೈನಾ), ಟಿ-141 (ಅಮಾಹಿ) ಮತ್ತು ಅದರ ನಾಲ್ಕು ಅರೆ-ವಯಸ್ಕ ಮರಿಗಳು, ‘ದಿಗ್ದೋಲಾ’ ಎಂದು ಕರೆಯಲ್ಪಡುವ ಗಂಡು ಹುಲಿ ಹಾಗೂ ಟಿ-220 (ಮಹಾವೀರ್) ಹುಲಿಗಳು ಸೇರಿವೆ.

ಅಧಿಕಾರಿಗಳ ಪ್ರಕಾರ, ಈ ಹುಲಿಗಳ ಸಾವಿಗೆ ಶ್ವಾಸಕೋಶದ ಸೋಂಕು ಅಥವಾ ನಾಯಿಗಳಿಂದ ಹರಡುವ ಮಾರಕ ‘ಕನೈನ್ ಡಿಸ್ಟೆಂಪರ್ ವೈರಸ್’ (Canine Distemper Virus – CDV) ಕಾರಣ ಇರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಸಮಸ್ಯೆಗೆ ಸ್ಪಂದಿಸುವ ಸ್ಥಳೀಯ ಸರ್ಕಾರವಿಲ್ಲ: ಮೂಲಸೌಕರ್ಯ ಮರೀಚಿಕೆ, ಸಿಗದ ಪಂಚಾಯತ್‌ ಯೋಜನೆ

ಹುಲಿಗಳು ಸಾವನ್ನಪ್ಪಿರುವ ಕನ್ಹಾದ ‘ಸರ್ಹಿ ವಲಯ’ವು ಹಲವು ಗ್ರಾಮಗಳ ಗಡಿಗೆ ಹೊಂದಿಕೊಂಡಿದೆ. ಈ ಸೂಕ್ಷ್ಮ ಪ್ರದೇಶಗಳಲ್ಲಿ ಹರಡುವ ರೋಗಗಳನ್ನು ತಡೆಯಲು ಮತ್ತು ಸ್ಥಳೀಯ ನಾಯಿಗಳಿಗೆ ಲಸಿಕೆ ಹಾಕುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಎನ್‌ಟಿಸಿಎಯ ಆನ್‌ಲೈನ್ ಡೇಟಾಬೇಸ್‌ನಲ್ಲಿ ಹುಲಿಗಳ ಸಾವಿನ ನಿಖರ ಮಾಹಿತಿ ಇಲ್ಲ. ಟಿ-141 ಹುಲಿ ಮತ್ತು ಅದರ ನಾಲ್ಕು ಮರಿಗಳ ಸಾವಿನ ಸರಣಿ ಪ್ರಕರಣವನ್ನು ಪಾರದರ್ಶಕವಾಗಿ ದಾಖಲಿಸಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಹೀಗಾಗಿ, ಹುಲಿಗಳ ಮರಣೋತ್ತರ ಪರೀಕ್ಷೆಯ ಸಂಪೂರ್ಣ ದಾಖಲೆಗಳನ್ನು ಸುರಕ್ಷಿತವಾಗಿಡಬೇಕು, ವೈರಸ್ ತಡೆಗಟ್ಟುವ ಕುರಿತು ಎನ್‌ಟಿಸಿಎ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಮತ್ತು ಈ ವೈಫಲ್ಯದ ತನಿಖೆಗಾಗಿ ಸ್ವತಂತ್ರ ಪರಿಣಿತರ ಸಮಿತಿಯನ್ನು ರಚಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...