ಮುಂಬೈನ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ; 9 ಮಂದಿಗೆ ಗಾಯ

Date:

ಮಹಾರಾಷ್ಟ್ರ ರಾಜಧಾನಿ ನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್​ಫಾರ್ಮ್​ವೊಂದರಲ್ಲಿ ಜನರ ನೂಕುನುಗ್ಗಲಿಂದ ಸಂಭವಿಸಿದ ಕಾಲ್ತುಳಿತದ ದುರ್ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

- Advertisement -

ಸದ್ಯ, ಗಾಯಾಳುಗಳನ್ನು ಬಾಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂದ್ರಾ ಟರ್ಮಿನಸ್​ನ ಒಂದನೇ ಪ್ಲಾಟ್​ಫಾರ್ಮ್​ನಲ್ಲಿ ಈ ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಮುಂಬೈ ಮಹಾನಗರ ಪಾಲಿಕೆ ವತಿಯಿಂದ ಬಂದ ಮಾಹಿತಿ ಪ್ರಕಾರ, ಬಾಂದ್ರಾ ಟರ್ಮಿನಸ್​ನ ಪ್ಲಾಟ್​ಫಾರ್ಮ್ 1ರಲ್ಲಿ ಬಾಂದ್ರಾ ಗೋರಖ್​ಪುರ್ ಎಕ್ಸ್​ಪ್ರೆಸ್ ರೈಲಿಗಾಗಿ ದೊಡ್ಡ ಸಂಖ್ಯೆಯಲ್ಲಿ ಜನರು ಕಾಯುತ್ತಿದ್ದರು.

ದೀಪಾವಳಿ ಆದ ಕಾರಣ ಊರುಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲ್ವೆ ಸ್ಟೇಷನ್​ನಲ್ಲಿ ಇದ್ದರು. ರೈಲು ಹತ್ತುವಾಗ ನೂಕುನುಗ್ಗುಲು ತೀವ್ರಗೊಂಡು ಕಾಲ್ತುಳಿತವಾಗಿದೆ. ಇವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ಗಾಯಾಳುಗಳನ್ನು ಶಬೀರ್ ಅಬ್ದುಲ್ ರೆಹಮಾನ್ (40), ಪರಮೇಶ್ವರ್ ಸುಖದರ್ ಗುಪ್ತಾ (28), ರವೀಂದ್ರ ಹರಿಹರ್ ಚುಮಾ (30), ರಾಮಸೇವಕ್ ರವೀಂದ್ರ ಪ್ರಸಾದ್ ಪ್ರಜಾಪತಿ (29), ಸಂಜಯ್ ತಿಲಕ್​ರಾಮ್ ಕಂಗಯ್ (27), ದಿವ್ಯಾಂಶು ಯೋಗೇಂದ್ರ ಯಾದವ್ (18), ಮೊಹಮ್ಮದ್ ಶರೀಫ್ ಶೇಖ್ (25), ಇಂದ್ರಜಿತ್ ಸಹಾನಿ (19), ಮತ್ತು ನೂರ್ ಮೊಹಮ್ಮದ್ ಶೇಖರ್ (18) ಎಂದು ಗುರುತಿಸಲಾಗಿದೆ.

ಬಾಂದ್ರಾದಿಂದ ಗೋರಖ್​ಪುರಕ್ಕೆ ತೆರಳುತ್ತಿದ್ದ 22921 ಸಂಖ್ಯೆಯ ರೈಲಿನಲ್ಲಿ ಅವಘಡ ಸಂಭವಿಸಿದ ದೃಶ್ಯ ಹರಿದಾಡುತ್ತಿದೆ. ಒಂದನೇ ಪ್ಲಾಟ್​ಫಾರ್ಮ್​ನ ನೆಲದ ಮೇಲೆ ರಕ್ತದ ಕಲೆಗಳು ಕಾಣಸಿಗುತ್ತಿವೆ. ರೈಲ್ವೆ ಪೊಲೀಸ್ ಮತ್ತು ಇತರ ಪ್ರಯಾಣಿಕರು ಗಾಯಾಳುಗಳಿಗೆ ನೆರವಾಗುತ್ತಿರುವುದನ್ನು ದೃಶ್ಯಗಳಲ್ಲಿ ಕಂಡುಬಂದಿವೆ.

ಮುಂಬೈನ ರೈಲು ನಿಲ್ದಾಣಗಳು ಕಾಲ್ತುಳಿತ ಘಟನೆಗಳಿಗೆ ಕುಖ್ಯಾತಿ ಪಡೆದಿವೆ. ಅಲ್ಲಿಯ ಹೆಚ್ಚಿನ ರೈಲುಗಳು ಸದಾ ಕಿಕ್ಕಿರಿದಿರುತ್ತವೆ. 2017ರ ಘಟನೆಯಲ್ಲಿ 23 ಮಂದಿ ಅಸುನೀಗಿದ್ದರು. ಎಲ್ಫಿನ್​ಸ್ಟೋನ್ ರೋಡ್ ರೈಲ್ವೆ ನಿಲ್ದಾಣದ ಕಾಲ್ಸೇತುವೆಯೊಂದರಲ್ಲಿ ನೂಕುನುಗ್ಗಲಿನಿಂದ ಕಾಲ್ತುಳಿತವಾಗಿ 23 ಮಂದಿ ಪ್ರಾಣ ಕಳೆದುಕೊಂಡು, 39 ಮಂದಿಗೆ ಗಾಯಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ದೇಶದ್ರೋಹಿ; ಕೂಡಲೇ ರಾಜೀನಾಮೆ ನೀಡಲಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅತಿ ದೊಡ್ಡ ದೇಶದ್ರೋಹಿ ಎಂಬುದು ಬಹಿರಂಗವಾಗಿದೆ....

ಗ್ಯಾನೇಶ್‌ ಕುಮಾ‌ರ್ – ಮೇಧಾ ರೂಪಂ: ತಪ್ಪು ಕಾರಣಗಳಿಗಾಗಿ ಸುದ್ದಿಯ ಸುಳಿಯಲ್ಲಿ ಐಎಎಸ್ ಅಪ್ಪ-ಮಗಳ ಜೋಡಿ

ಉನ್ನತ ಸಾಂವಿಧಾನಿಕ ಹಾಗೂ ಆಡಳಿತಾತ್ಮಕ ಹುದ್ದೆಗಳನ್ನು ಅಲಂಕರಿಸಿರುವ ಐಎಎಸ್ ಅಧಿಕಾರಿಗಳಾದ ಅಪ್ಪ–ಮಗಳ...

IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ಆತ್ಮಹತ್ಯೆ ಪ್ರಕರಣ | ಪೋಷಕರ ಬೆಂಬಲಕ್ಕೆ ನಿಂತ ರಾಹುಲ್‌ ಗಾಂಧಿ

IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ವಕೋಡೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌...

EC ಒಳಜಗಳ | ಗ್ಯಾನೇಶ್‌ ಕುಮಾರ್‌ ಎಡವಟ್ಟುಗಳಿಗೆ ಆಕ್ಷೇಪಗಳ ಸರಮಾಲೆ

SIR ವಿಚಾರದಲ್ಲಿ ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯ ಬಹಿರಂಗಗೊಂಡ ಬೆನ್ನಲ್ಲೇ, ಮುಖ್ಯ ಚುನಾವಣಾ...