ತಮಿಳುನಾಡು | ತಂದೆ-ಮಗನ ಕಸ್ಟಡಿ ಕೊಲೆ ಪ್ರಕರಣ: 9 ಪೊಲೀಸರಿಗೆ ಗಲ್ಲು ಶಿಕ್ಷೆ

Date:

ಆರು ವರ್ಷಗಳ ಹಿಂದೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ತೂತುಕುಡಿ ಜಿಲ್ಲೆಯ ವ್ಯಾಪಾರಿ ಪಿ ಜಯರಾಜ್ ಮತ್ತು ಅವರ ಮಗ ಜೆ ಬೆನಿಕ್ಸ್ ಕಸ್ಟಡಿ ಸಾವು ಪ್ರಕರಣದಲ್ಲಿ ತಮಿಳುನಾಡಿನ ಮಧುರೈ ಜಿಲ್ಲೆಯ ನ್ಯಾಯಾಲಯವು ಸೋಮವಾರ ಒಂಬತ್ತು ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಿದೆ.

- Advertisement -

2020ರ ಜೂನ್ 19ರಂದು ಕಸ್ಟಡಿ ಚಿತ್ರಹಿಂಸೆ ನೀಡಲಾಗಿತ್ತು. ಲಾಕ್‌ಡೌನ್ ಸಮಯದಲ್ಲಿ ಮೊಬೈಲ್ ಅಂಗಡಿಯನ್ನು ನಡೆಸುತ್ತಿದ್ದ ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಅವಧಿಗಿಂತ ಅಧಿಕ ಅಂಗಡಿ ತೆರೆದಿದ್ದಕ್ಕಾಗಿ ಬಂಧಿಸಲಾಗಿತ್ತು. ಆದರೆ ಈ ಆರೋಪ ಬಳಿಕ ಸುಳ್ಳೆಂದು ತಿಳಿದುಬಂದಿತ್ತು. ಇಬ್ಬರನ್ನು ಸಾಥನ್‌ಕುಲಂ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕೆಲವೇ ದಿನಗಳಲ್ಲಿ ಇಬ್ಬರೂ ಸಾವನ್ನಪ್ಪಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? 60ರ ವೃದ್ಧೆ ಮೇಲೆ ಅತ್ಯಾಚಾರ, ಕೊಲೆ: ಗಲ್ಲು ಶಿಕ್ಷೆಗೆ ಒಳಗಾಗಿದ್ದ ಆರೋಪಿ ಖುಲಾಸೆ

ಪೊಲೀಸ್ ಠಾಣೆಯಲ್ಲಿ ರಾತ್ರಿಯಿಡೀ ಇಬ್ಬರ ಮೇಲೆ ಹಲ್ಲೆ ನಡೆಸಿದ ಕಾರಣದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದರು. ಗುದನಾಳದಲ್ಲಿ ರಕ್ತಸ್ರಾವವಾಗುತ್ತಿತ್ತು. ತೀವ್ರ ದೈಹಿಕ ಕಿರುಕುಳ ನೀಡಿರುವುದನ್ನು ದೇಹದಲ್ಲಿರುವ ಇತರೆ ಗಾಯಗಳು ಸಾಬೀತುಪಡಿಸಿತ್ತು.

ಅದಾದ ಬಳಿಕ ಮದ್ರಾಸ್ ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯದ ಸಿಬಿ-ಸಿಐಡಿಯಿಂದ ತನಿಖೆಯನ್ನು ವಹಿಸಿಕೊಂಡ ಕೇಂದ್ರ ತನಿಖಾ ದಳ ಅಥವಾ ಸಿಬಿಐ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಪೊಲೀಸರನ್ನು ಬಂಧಿಸಿತ್ತು. ಬಂಧಿತರಲ್ಲಿ ಒಬ್ಬ ಇನ್‌ಸ್ಪೆಕ್ಟರ್, ಇಬ್ಬರು ಸಬ್-ಇನ್‌ಸ್ಪೆಕ್ಟರ್‌ಗಳು ಮತ್ತು ಹಲವಾರು ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ. ಈ ಪ್ರಕರಣದಲ್ಲಿ ಈ ಪೊಲೀಸರುಗಳು ಆರೋಪಿಗಳೆಂದು ಸಿಬಿಐ ಸಾಬೀತುಪಡಿಸಿದೆ.

ತನಿಖೆಯ ಸಮಯದಲ್ಲಿ, ತಂದೆ ಮತ್ತು ಮಗನ ಮೇಲೆ ರಾತ್ರಿಯಿಡೀ ಹಲ್ಲೆ ನಡೆಸಲಾಗಿದೆ ಎಂದು ಮಹಿಳಾ ಕಾನ್‌ಸ್ಟೆಬಲ್ ಸಾಕ್ಷ್ಯ ನುಡಿದಿದ್ದರು. ಠಾಣೆಯಲ್ಲಿ ಟೇಬಲ್‌ಗಳು ಮತ್ತು ಲಾಠಿಗಳಲ್ಲಿ ರಕ್ತದ ಕಲೆಗಳಿವೆ ಎಂಬುದು ತನಿಖಾಧಿಕಾರಿಗಳಿಗೆ ತಿಳಿದುಬಂದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...