ಒಂಬತ್ತು ವರ್ಷದ ಬಾಲಕನೊಬ್ಬ ಮತ್ತೊಬ್ಬ ಸಹಪಾಠಿಯ ಸಹಾಯ ಪಡೆದು ತನ್ನ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ.
ಈ ಬಗ್ಗೆ ಮಂಗಳವಾರ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಪೊಲೀಸರು, ಅಪರಾಧ ಎಸಗಿದ್ದಾನೆ ಎನ್ನಲಾದ ಆರೋಪಿ ಬಾಲಕ ಮತ್ತು 9 ವರ್ಷದ ಬಾಲಕಿಯನ್ನು ಬಂಧಿಸಿ ಬಾಲಾಪರಾಧ ಗೃಹಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕೇರಳ | ಬಾಲಕಿ ಮೇಲೆ 64 ಕಾಮುಕರಿಂದ ಲೈಂಗಿಕ ದೌರ್ಜನ್ಯ
ಈ ಘಟನೆ ಆಗಸ್ಟ್ 1ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 3ನೇ ತರಗತಿಯ ವಿದ್ಯಾರ್ಥಿಗಳಾಗಿದ್ದ 9 ವರ್ಷದ ಬಾಲಕರಿಬ್ಬರು 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಕೆಲವು ದಿನಗಳ ಹಿಂದೆ ಬಾಲಕಿ ಖಾಸಗಿ ಭಾಗಗಳಲ್ಲಿ ನೋವು ಕಾಣಿಸಿಕೊಂಡಿದ್ದು ತಾಯಿಗೆ ತಿಳಿಸಿದ್ದಾಳೆ. ತಾಯಿ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಖಾಸಗಿ ಭಾಗದಲ್ಲಿ ಗಾಯಗಳು ಕಾಣಿಸಿದೆ. ಬಳಿಕ ತಾಯಿ ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ತಮ್ಮ ಮಗಳ ತರಗತಿಯ ಬಾಲಕನೋರ್ವ ಶಾಲೆಯ ಶೌಚಾಲಯದಲ್ಲಿ ಮತ್ತೋರ್ವ ಬಾಲಕಿಯ ಸಹಾಯದಿಂದ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಾಯಿ ದೂರು ನೀಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
