ತಮಾಷೆ ಮಾಡಿದ್ದಕ್ಕೆ 9 ವರ್ಷದ ಬಾಲಕಿಯನ್ನು ಬಾವಿಗೆ ತಳ್ಳಿ ಹತ್ಯೆ

Date:

ತನ್ನ ಬಗ್ಗೆ ತಮಾಷೆ ಮಾಡಿದಳು ಎಂಬ ಕಾರಣಕ್ಕೆ 9 ವರ್ಷ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಬಾವಿಗೆ ತಳ್ಳಿ, ಆಕೆಯ ಮೇಲೆ ಕಲ್ಲೆಸೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

- Advertisement -

ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ದುರ್ಘಟನೆ ನಡೆದಿದೆ. ಹತ್ಯೆಗೆ ಬಲಿಯಾದ ಬಾಲಕಿಯನ್ನು ಮೋಹಿನಿ ಶ್ರೀವಾಸ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಬಾಲಕಿ ಮೋಹಿನಿ ಮತ್ತು ಆಕೆಯ ಅಣ್ಣ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ, ದುಷ್ಕರ್ಮಿ ದಾಳಿ ನಡೆಸಿದ್ದಾನೆ. ಬಾಲಕಿಯ ಅಣ್ಣನ ಮೇಲೂ ದಾಳಿ ನಡೆದಿದ್ದು, ಆತನಿಗೆ ಗಾಯಗಳಾಗಿವೆ. ದುಷ್ಕರ್ಮಿಯು ಬಾಲಕಿಯನ್ನು ಬಾವಿಗೆ ತಳ್ಳಿ, ಬಳಿಕ ಮೇಲಿನಿಂದ ಕಲ್ಲು ಹಾಕಿದ್ದಾನೆ ಎಂದು ವರದಿಯಾಗಿದೆ.

ಆರೋಪಿ ಗೋವರ್ಧನ್ ಪಟೇಲ್ ಮತ್ತು ಬಾಲಕಿ ಒಂದೇ ಗ್ರಾಮದವರಾಗಿದ್ದಾರೆ. ಈ ಹಿಂದೆ, ಆರೋಪಿಯ ಬಗ್ಗೆ ಬಾಲಕಿ ತಮಾಷೆ ಮಾಡಿದ್ದಳು. ಇದರಿಂದ ಕೋಪಕೊಂಡಿದ್ದ ದುಷ್ಕರ್ಮಿ ಆಕೆಯನ್ನು ಹತ್ಯೆಗೈದಿದ್ದಾನೆ ಎಂದು ವರದಿಯಾಗಿದೆ.

ಬಾಲಕಿಯ ಮೃತದೇಹವನ್ನು ಬಾವಿಯಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿಚಾರಣೆ ವೇಳೆ, ತಾನೇ ಹತ್ಯೆಗೈದಿದ್ದಾಗಿ ಗೋವರ್ಧನ್ ತಪ್ಪೊಪ್ಪಿಕೊಂಡಿದ್ದಾನೆ. ಬಾಲಿಯ ಸಹೋದರ ತಪ್ಪಿಸಿಕೊಳ್ಳದಿದ್ದರೆ, ಆತನನ್ನೂ ಕೊಲ್ಲುತ್ತಿದ್ದೆ ಎಂದು ಆರೋಪಿ ಹೇಳಿದ್ದಾನೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸಮಾಜಘಾತುಕರಲ್ಲ, ಅವರಿಗೆ ಹೋರಾಡುವ ಹಕ್ಕಿದೆ’: ಬಾಂಬೆ ಹೈಕೋರ್ಟ್

ಮಹಾರಾಷ್ಟ್ರ ಲೋಕಸೇವಾ ಆಯೋಗದ (ಎಂಪಿಎಸ್‌ಸಿ) ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ...

ಗುಜರಾತ್ | ʼಶುದ್ಧೀಕರಣʼ ಹೆಸರಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಅತ್ಯಾಚಾರ; 9 ಮಂದಿ ವಶಕ್ಕೆ

ಶುದ್ಧೀಕರಣ ವಿಧಿ (Purification Ritual) ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ, ಮನಬಂದಂತೆ...

ದೆಹಲಿಯಲ್ಲಿ ಮತ್ತೆ ನೆಲಕ್ಕುರುಳಿದ ಕಟ್ಟಡ; ಅವಶೇಷಗಳಡಿ ಜೀವಗಳಿಗಾಗಿ ಶೋಧ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಕಟ್ಟಡ ಕುಸಿತದ ಆತಂಕ ಎದುರಾಗಿದೆ. ಈಶಾನ್ಯ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ...