ದಶಕದಲ್ಲಿ ಬಾಗಿಲು ಮುಚ್ಚಿದವು 93 ಸಾವಿರ ಸರ್ಕಾರಿ ಶಾಲೆಗಳು; ​ಯುಪಿ, ಮಧ್ಯಪ್ರದೇಶದ್ದೇ ಸಿಂಹಪಾಲು

Date:

ದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಮತ್ತು ‘ಎಲ್ಲರಿಗೂ ಶಿಕ್ಷಣ’ ಎಂಬ ಘೋಷಣೆಗಳ ನಡುವೆಯೇ, ಕಳೆದ ಹತ್ತು ವರ್ಷಗಳಲ್ಲಿ ಬರೋಬ್ಬರಿ 93 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚಿವೆ ಎಂಬ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. ಈ ಪೈಕಿ ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳದ್ದೇ ಸಿಂಹಪಾಲಾಗಿದೆ.

- Advertisement -

ರಾಜಸ್ಥಾನದ ಸೀಕರ್ ಲೋಕಸಭಾ ಕ್ಷೇತ್ರದ ಸಿಪಿಐಎಂ ಸಂಸದ ಅಮರಾ ರಾಮ್ ಅವರು ಕೇಳಿದ ಪ್ರಶ್ನೆಗೆ, ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ಅವರು ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಈ ಅಂಕಿ-ಅಂಶಗಳು ಬಹಿರಂಗಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಒದಗಿಸಲಾದ ಮಾಹಿತಿಯ ಪ್ರಕಾರ, 2014-15 ರಿಂದ 2024-25ರ ನಡುವಿನ ದಶಕದಲ್ಲಿ ದೇಶಾದ್ಯಂತ ಒಟ್ಟು 93,000 ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. ಈ ಪೈಕಿ ಮೊದಲ ಆರು ವರ್ಷಗಳಲ್ಲಿಯೇ (2014-15 ರಿಂದ 2019-20) ಅತಿ ಹೆಚ್ಚು, ಅಂದರೆ ಸುಮಾರು 70,000 ಶಾಲೆಗಳು ಸ್ಥಗಿತಗೊಂಡಿವೆ. ಈ ಅವಧಿಯಲ್ಲಿ ಉತ್ತರ ಪ್ರದೇಶವೊಂದರಲ್ಲೇ ದಾಖಲೆಯ 24,590 ಶಾಲೆಗಳು ಮುಚ್ಚಲ್ಪಟ್ಟರೆ, ಮಧ್ಯಪ್ರದೇಶದಲ್ಲಿ 22,438 ಶಾಲೆಗಳಿಗೆ ಬೀಗ ಜಡಿಯಲಾಗಿದೆ. ಈ ಎರಡು ರಾಜ್ಯಗಳೇ ಒಟ್ಟು ಮುಚ್ಚಲ್ಪಟ್ಟ ಶಾಲೆಗಳಲ್ಲಿ ಅರ್ಧದಷ್ಟು ಪಾಲನ್ನು ಹೊಂದಿವೆ. ಉಳಿದಂತೆ ಜಾರ್ಖಂಡ್, ಒಡಿಶಾ ಮತ್ತು ಮಹಾರಾಷ್ಟ್ರದಲ್ಲಿಯೂ ಸಾವಿರಾರು ಶಾಲೆಗಳು ಮುಚ್ಚಲ್ಪಟ್ಟಿವೆ.

ಇದನ್ನು ಒದಿದ್ದೀರಾ? ಈ ದಿನ ಸಂಪಾದಕೀಯ | ಜನಪ್ರತಿನಿಧಿಗಳ ಘನತೆ ಇಲ್ಲದ ಮಾತಿಗೆ ಲಗಾಮು ಬೀಳಬೇಕು

2020-21 ರಿಂದ 2024-25ರ ಅವಧಿಯಲ್ಲಿಯೂ ಈ ಪ್ರವೃತ್ತಿ ಮುಂದುವರಿದಿದ್ದು, ದೇಶಾದ್ಯಂತ ಮತ್ತೆ 18,727 ಶಾಲೆಗಳನ್ನು ಮುಚ್ಚಲಾಗಿದೆ. ಈ ಐದು ವರ್ಷಗಳ ಅವಧಿಯಲ್ಲಿಯೂ ಮಧ್ಯಪ್ರದೇಶವೇ ಅಗ್ರಸ್ಥಾನದಲ್ಲಿದ್ದು (6,972 ಶಾಲೆಗಳು), ನಂತರದ ಸ್ಥಾನಗಳಲ್ಲಿ ಜಮ್ಮು-ಕಾಶ್ಮೀರ ಮತ್ತು ಒಡಿಶಾ ರಾಜ್ಯಗಳಿವೆ.

ಕಡಿಮೆ ದಾಖಲಾತಿ ಮತ್ತು ಸಂಪನ್ಮೂಲಗಳ ಕ್ರೋಢೀಕರಣದ ನೆಪದಲ್ಲಿ ಶಾಲೆಗಳನ್ನು ಹತ್ತಿರದ ದೊಡ್ಡ ಶಾಲೆಗಳೊಂದಿಗೆ ‘ವಿಲೀನ’ ಗೊಳಿಸಿರುವುದೇ ಈ ಬೃಹತ್ ಸಂಖ್ಯೆಯ ಶಾಲೆಗಳ ಮುಚ್ಚುವಿಕೆಗೆ ಪ್ರಮುಖ ಕಾರಣ ಎಂದು ಸರ್ಕಾರ ಸಮಜಾಯಿಷಿ ನೀಡಿದೆ. ಶಿಕ್ಷಣವು ಸಂವಿಧಾನದ ಸಮವರ್ತಿ ಪಟ್ಟಿಯಲ್ಲಿರುವುದರಿಂದ, ಶಾಲೆಗಳನ್ನು ತೆರೆಯುವ ಅಥವಾ ಮುಚ್ಚುವ ನಿರ್ಧಾರ ಆಯಾ ರಾಜ್ಯ ಸರ್ಕಾರಗಳಿಗೆ ಸೇರಿದ್ದು ಎಂದು ಕೇಂದ್ರ ಸಚಿವರು ಸ್ಪಷ್ಟಪಡಿಸಿದ್ದಾರೆ.

ಆದರೆ, ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಹತ್ತಿರದ ಶಾಲೆಯೇ ಆಸರೆಯಾಗಿದ್ದು, ವಿಲೀನದ ಹೆಸರಿನಲ್ಲಿ ಶಾಲೆಗಳು ದೂರವಾದರೆ ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆಯಾಗಲಿದೆ ಎಂಬ ಕಳವಳವನ್ನು ಶಿಕ್ಷಣ ತಜ್ಞರು ವ್ಯಕ್ತಪಡಿಸಿದ್ದಾರೆ. ಹತ್ತು ವರ್ಷಗಳಲ್ಲಿ ಸುಮಾರು ಒಂದು ಲಕ್ಷದಷ್ಟು ಸರ್ಕಾರಿ ಶಾಲೆಗಳು ಕಣ್ಮರೆಯಾಗಿರುವುದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಭವಿಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3 ದಿನಗಳ ಬ್ಯಾಂಕ್ ಮುಷ್ಕರ ವಾಪಸ್: ವಾರಕ್ಕೆ 5 ದಿನ ಕೆಲಸದ ಪರಿಶೀಲನೆಗೆ ಸಮಿತಿ

ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ಒಕ್ಕೂಟವು (ಯುಎಫ್‌ಬಿಯು) ಸೋಮವಾರದಿಂದ ಹಮ್ಮಿಕೊಂಡಿದ್ದ ಮೂರು...

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...