ಹಾಡು ಹಾಡಿ ಸಂಚಾರ ನಿಯಮಗಳ ಜಾಗೃತಿ ಮೂಡಿಸುವ 10ರ ಬಾಲಕ!

Date:

ಮಧ್ಯಪ್ರದೇಶದ ಇಂದೋರ್‌ನಲ್ಲಿ ಆದಿತ್ಯ ತಿವಾರಿ ಎಂಬ 10 ವರ್ಷದ ಬಾಲಕ ತಾನೇ ಹಾಡು ಸಂಯೋಜನೆ ಮಾಡಿ ಆ ಹಾಡುಗಳನ್ನು ಹಾಡುವ ಮೂಲಕ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾನೆ.

- Advertisement -

ಟ್ರಾಫಿಕ್ ಸಿಗ್ನಲ್‌ನಲ್ಲಿಯೇ ನಿಂತು ಸಂಚಾರ ಪೊಲೀಸರಂತೆ ಓಡಾಡಿಕೊಂಡು, ಹಾಡುತ್ತಾ, ನಿಯಮ ಉಲ್ಲಂಘಿಸುವವರಿಗೆ ಬುದ್ದಿ ಹೇಳುತ್ತಾ ಜನರಿಗೆ ಸಂಚಾರ ನಿಯಮಗಳ ಬಗ್ಗೆ ಬಾಲಕ ಜಾಗೃತಿ ಮೂಡಿಸುತ್ತಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಿನಿಮಾ ಹಾಡುಗಳಿಗೆ ಸಂಚಾರ ನಿಯಮಕ್ಕೆ ಸಂಬಂಧಿಸಿದ ಸಾಹಿತ್ಯವನ್ನು ಸೇರಿಸಿ ಈ ಬಾಲಕ ಹಾಡುತ್ತಾನೆ. ಹಾಗೆಯೇ ಹೆಲ್ಮೆಟ್ ಧರಿಸದೆ ಸಂಚರಿಸುವವರ ಬಳಿ ಹೋಗಿ ಸಂಚಾರಿ ನಿಯಮ ಪಾಲಿಸುವಂತೆ ಮನವಿ ಮಾಡುವ ಚೀಟಿಯೊಂದನ್ನು ನೀಡುತ್ತಾನೆ. ಜೊತೆಗೆ ಚಾಕೊಲೇಟ್ ನೀಡಿ ನಿಯಮ ಪಾಲಿಸುವಂತೆ ಮನವಿ ಮಾಡುತ್ತಾನೆ ಈ ಬಾಲಕ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿದ ಆದಿತ್ಯ ತಿವಾರಿ, “ನಾನು ಕಳೆದ ಮೂರು ವರ್ಷಗಳಿಂದ ಟ್ರಾಫಿಕ್ ಅನ್ನು ನಿರ್ವಹಿಸುತ್ತಿದ್ದೇನೆ. ನನ್ನ ಸಹೋದರಿ ‘ನೋ ಸ್ಮೋಕಿಂಗ್’ ಅಭಿಯಾನವನ್ನು ನಡೆಸುತ್ತಿದ್ದಳು. ಅವಳನ್ನು ನೋಡಿ ನನಗೂ ದೇಶ ಸೇವೆ ಮಾಡುವ ಮನೋಭಾವ ಬಂದಿದೆ. ಅದರಿಂದಾಗಿ ನಾನು ರಸ್ತೆಗಳಿದು ಸಂಚಾರ ನಿಯಮ ಹೇಳುತ್ತಿದ್ದೇನೆ” ಎಂದು ತಿಳಿಸಿದ್ದಾನೆ.

ಇದನ್ನು ಓದಿದ್ದೀರಾ? ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ; ಮನೆಗೆ ಬರಲಿದೆ ನೋಟಿಸ್ ಜತೆಗೆ ಕ್ಯೂಆರ್‌ ಕೋಡ್‌

“ನಾನು ರಚಿಸಿದ ಹಾಡುಗಳನ್ನು ಹಾಡುವ ಮೂಲಕ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತೇನೆ. ಸ್ವಚ್ಛತೆಯಲ್ಲಿ ಇಂದೋರ್ ಮೊದಲ ಸ್ಥಾನದಲ್ಲಿದ್ದಂತೆ ಸಂಚಾರ ನಿಯಮಗಳ ಅನುಸರಣೆಯಲ್ಲಿ ಇಂದೋರ್ ಮೊದಲ ಸ್ಥಾನದಲ್ಲಿರಬೇಕೆಂದು ನಾನು ಬಯಸುತ್ತೇನೆ. ನಾನು ದೊಡ್ಡವನಾದಾಗ ಅಂತಹ ಸೈನಿಕನಾಗಲು ಬಯಸುತ್ತೇನೆ” ಎಂದು ಆದಿತ್ಯ ತಿವಾರಿ ಹೇಳಿದ್ದಾನೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...