₹227 ಕೋಟಿ ವನ್ಯಜೀವಿ ಶುಲ್ಕವನ್ನು ₹2.27 ಕೋಟಿಗೆ ಇಳಿಸಿದ್ದ ಅದಾನಿ ಯೋಜನೆಗೆ ಬ್ರೇಕ್!

Date:

ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಸಂಸ್ಥೆಯ ‘ತಾರಲಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆ’ಯ ಕಾಮಗಾರಿಯನ್ನು ಮಹಾರಾಷ್ಟ್ರ ಅರಣ್ಯ ಇಲಾಖೆಯು ತಕ್ಷಣವೇ ಸ್ಥಗಿತಗೊಳಿಸುವಂತೆ ಆದೇಶಿಸಿದೆ. ವನ್ಯಜೀವಿ ಸಂರಕ್ಷಣಾ ನಿಧಿಯ ಪಾವತಿಯನ್ನು ತಪ್ಪಿಸಿಕೊಳ್ಳಲು ಯೋಜನೆಯ ಒಟ್ಟು ವೆಚ್ಚವನ್ನು ಬರೋಬ್ಬರಿ ಶೇ. 99ರಷ್ಟು ಕಡಿಮೆ ತೋರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದ ಬಳಿಕ ಈ ಬೆಳವಣಿಗೆ ನಡೆದಿದೆ.

- Advertisement -

ರಾಷ್ಟ್ರೀಯ ಪತ್ರಿಕೆ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ನವೆಂಬರ್ 13ರಂದು ಈ ಕುರಿತು ವಿಶೇಷ ತನಿಖಾ ವರದಿಯನ್ನು ಪ್ರಕಟಿಸಿತ್ತು. ಅದಾನಿ ಸಂಸ್ಥೆಯು ತನ್ನ 1,500 ಮೆಗಾವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಯ ವೆಚ್ಚವನ್ನು ₹5,675 ಕೋಟಿಯಿಂದ ಕೇವಲ ₹56.75 ಕೋಟಿಗೆ ಇಳಿಸಿ ಅಫಿಡವಿಟ್ ಸಲ್ಲಿಸಿದೆ. ಆ ಮೂಲಕ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪಾವತಿಸಬೇಕಿದ್ದ ₹227 ಕೋಟಿ ವನ್ಯಜೀವಿ ಸಂರಕ್ಷಣಾ ಶುಲ್ಕವನ್ನು ₹2.27 ಕೋಟಿಗೆ ಇಳಿಸಿಕೊಂಡಿದೆ ಎಂದು ಪತ್ರಿಕೆ ದಾಖಲೆಗಳ ಸಮೇತ ವರದಿ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಂಘೈ ಕೌಶಲ್ಯ ಶೃಂಗಸಭೆಯಲ್ಲಿ ಮಿಂಚಿದ ಕರ್ನಾಟಕದ ಪ್ರತಿಭೆಗಳು…ಪದಕಗಳ ಸೂರೆ

ಚೀನಾದ ಶಾಂಘೈನಲ್ಲಿ ನಡೆದ ಜಾಗತಿಕ 'ಕೌಶಲ್ಯ ಒಲಿಂಪಿಕ್ಸ್' ವೇದಿಕೆಯಲ್ಲಿ ನಮ್ಮ ಕರುನಾಡಿನ ಯುವಪ್ರತಿಭೆಗಳು ಹೊಸ ಇತಿಹಾಸ ಬರೆದಿದ್ದಾರೆ. ಕೇವಲ ಕನಸುಗಳನ್ನಷ್ಟೇ ಹೊತ್ತೊಯ್ದಿದ್ದ ನಮ್ಮ ನಾಡಿನ ಪ್ರತಿಭೆಗಳು, ತಮ್ಮ ಬೆವರು, ಕಠಿಣ ಪರಿಶ್ರಮ ಹಾಗೂ...

ಗಾಂಧೀಜಿ ತತ್ವಗಳ ಪ್ರಸ್ತುತತೆ: ಸಮಾನತೆಯ ಸಮಾಜಕ್ಕೆ ಶ್ರಮದ ಘನತೆಯೇ...

ಸರ್ವಜನರ ಹಿತ, ಎಲ್ಲ ಕೆಲಸಗಳಿಗೂ ಸಮಾನ ಗೌರವ ಮತ್ತು ಶಾರೀರಿಕ ಶ್ರಮದ ಘನತೆ-ಗಾಂಧೀಜಿ ಪ್ರತಿಪಾದಿಸಿದ ಈ ಮೂರು ಮೌಲ್ಯಗಳು ಇಂದಿನ ಅಸಮಾನತೆಯ ಸಮಾಜದಲ್ಲಿ ಹೆಚ್ಚು ಪ್ರಸ್ತುತವಾಗಿವೆ. ಆದರೆ ಅವುಗಳನ್ನು ವೈಯಕ್ತಿಕ ಬದುಕು, ಸಾಮಾಜಿಕ...

ಜಿಡಿಪಿ ಅಂಕಿಅಂಶಗಳ ಆಚೆಗಿನ ವಾಸ್ತವ: ಭಾರತದ ಆರ್ಥಿಕ ಸವಾಲುಗಳ...

ಜಾಗತಿಕ ಆರ್ಥಿಕತೆಯು ಭೌಗೋಳಿಕ-ರಾಜಕೀಯ ಸಂಘರ್ಷಗಳು ಮತ್ತು ತಂತ್ರಜ್ಞಾನದ ಕ್ಷಿಪ್ರ ಬದಲಾವಣೆಗಳ ನಡುವೆ ತೊಳಲಾಡುತ್ತಿರುವ ಹೊತ್ತಿನಲ್ಲಿ, ಭಾರತದ ಆರ್ಥಿಕತೆಯ ನಿಜವಾದ ಸ್ಥಿತಿಗತಿ ಏನು? ನಾವು ಸಾಗುತ್ತಿರುವ ಹಾದಿ ನಮ್ಮನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸಬಲ್ಲದೇ? ಈ...

ಇದ್ನನೂ ಓದಿ: ಹಸಿರು ಉಸಿರು ಕಸಿದ ‘ವಿಕಾಸ’: ಅದಾನಿ ಸಾಮ್ರಾಜ್ಯ ವಿಸ್ತರಣೆಗೆ ಬಲಿಯಾಗುತ್ತಿರುವ ಅರಣ್ಯ ಮತ್ತು ಪ್ರಜಾಪ್ರಭುತ್ವ

ಈ ವರದಿ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಮಹಾರಾಷ್ಟ್ರ ಅರಣ್ಯ ಇಲಾಖೆಯು, ರಾಷ್ಟ್ರೀಯ ವನ್ಯಜೀವಿ ಮಂಡಳಿಯ (ಎನ್‌ಬಿಡಬ್ಲ್ಯೂಎಲ್) ಅಂತಿಮ ಅನುಮೋದನೆ ಇಲ್ಲದಿರುವುದನ್ನು ಉಲ್ಲೇಖಿಸಿ ಯೋಜನೆಯ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿದೆ.

ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಪಠಾಣ್ ತಾಲೂಕಿನ ತಾರಲಿ ಅಣೆಕಟ್ಟು ಜಲಾಶಯದ ಬಳಿ ಅದಾನಿ ಗ್ರೀನ್ ಎನರ್ಜಿ ಸಂಸ್ಥೆಯು 1,500 ಮೆಗಾವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ವಿದ್ಯುತ್ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಯು ಕೊಯ್ನಾ ವನ್ಯಜೀವಿ ಅಭಯಾರಣ್ಯದ 10 ಕಿ.ಮೀ ವ್ಯಾಪ್ತಿಯ ‘ಪರಿಗಣಿತ ಪರಿಸರ ಸೂಕ್ಷ್ಮ ವಲಯ’ದ ಒಳಗೆ ಬರುತ್ತದೆ ಎಂದು ಅರಣ್ಯ ಇಲಾಖೆಯ ದಾಖಲೆಗಳು ತಿಳಿಸಿವೆ.

ನಿಯಮಗಳ ಪ್ರಕಾರ, ಇಂತಹ ಸೂಕ್ಷ್ಮ ವಲಯಗಳಲ್ಲಿ ಕೈಗೊಳ್ಳುವ ಖಾಸಗಿ ಯೋಜನೆಗಳ ಒಟ್ಟು ವೆಚ್ಚದ ಶೇ. 4ರಷ್ಟನ್ನು ವನ್ಯಜೀವಿ ಸಂರಕ್ಷಣೆಗಾಗಿ ಠೇವಣಿ ಇಡಬೇಕು. 2025ರ ಫೆಬ್ರವರಿಯಲ್ಲಿ ಕೇಂದ್ರ ಪರಿಸರ ಸಚಿವಾಲಯಕ್ಕೆ ಸಲ್ಲಿಸಿದ್ದ ದಾಖಲೆಗಳಲ್ಲಿ ಯೋಜನೆಯ ಒಟ್ಟು ವೆಚ್ಚವನ್ನು ₹5,675 ಕೋಟಿ ಎಂದು ನಮೂದಿಸಲಾಗಿತ್ತು. ಅದರಂತೆ, 2026ರ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಮಹಾರಾಷ್ಟ್ರ ರಾಜ್ಯ ವನ್ಯಜೀವಿ ಮಂಡಳಿ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಪಿಸಿಸಿಎಫ್) ಒಟ್ಟು ವೆಚ್ಚದ ಶೇ. 4ರಷ್ಟು, ಅಂದರೆ ₹227 ಕೋಟಿ ಪಾವತಿಸುವಂತೆ ಕಂಪನಿಗೆ ಸೂಚಿಸಿದ್ದರು.

ಇದನ್ನೂ ಓದಿ: ಉದ್ಯಾನ ಪರಭಾರೆ: ಅರಸು ಮಾಡಿದ್ದೇನು, ಡಿಕೆ ಮಾಡುತ್ತಿರುವುದೇನು?

ಆದರೆ, 2026ರ ಸೆಪ್ಟೆಂಬರ್ 8ರಂದು ಅದಾನಿ ಗ್ರೀನ್ ಎನರ್ಜಿ ಸಂಸ್ಥೆಯು ನೋಟರಿ ಮಾಡಿಸಿದ ಅಫಿಡವಿಟ್ ಸಲ್ಲಿಸಿ, ಯೋಜನೆಯ ವೆಚ್ಚವನ್ನು ಕೇವಲ ₹56.75 ಕೋಟಿ (ಮೂಲ ವೆಚ್ಚದ ನೂರನೇ ಒಂದು ಭಾಗ) ಎಂದು ಪರಿಗಣಿಸುವಂತೆ ಕೋರಿತ್ತು. ಅಕ್ಟೋಬರ್ 12ರಂದು ಅರಣ್ಯ ಇಲಾಖೆಯು ಈ ಪರಿಷ್ಕೃತ ಅಂದಾಜನ್ನು ಒಪ್ಪಿಕೊಂಡಿದ್ದು, ಮೊದಲ ಕಂತಾಗಿ ಶೇ. 1ರಷ್ಟು (₹56.75 ಲಕ್ಷ) ಠೇವಣಿಯನ್ನು ಕಂಪನಿ ಪಾವತಿಸಿತ್ತು.

ಯೋಜನೆಯ ವೆಚ್ಚವನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ಘೋಷಿಸಲಾಗಿದೆ ಎಂದು ಆರೋಪಿಸಿ ಸತಾರಾದ ಗೌರವ ವನ್ಯಜೀವಿ ವಾರ್ಡನ್ ರೋಹನ್ ಭಾಟೆ ಅವರು ಅಕ್ಟೋಬರ್ 30ರಂದು ಪ್ರಧಾನ ಮಂತ್ರಿಗಳ ಕುಂದುಕೊರತೆ ಪೋರ್ಟಲ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು (MoEFCC) ನವೆಂಬರ್ 6ರಂದು ಮಹಾರಾಷ್ಟ್ರ ಅರಣ್ಯ ಇಲಾಖೆಗೆ ಪತ್ರ ಬರೆದು, ಈ ಪ್ರಕರಣದ ಕುರಿತು ಆದ್ಯತೆಯ ಮೇರೆಗೆ ತನಿಖೆ ನಡೆಸುವಂತೆ ನಿರ್ದೇಶನ ನೀಡಿತ್ತು. ಅಲ್ಲದೆ, ಕಾಂಗ್ರೆಸ್ ಈ ವಿಚಾರವಾಗಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಆಗ್ರಹಿಸಿತ್ತು.

ಈ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಅದಾನಿ ಸಮೂಹದ ವಕ್ತಾರರು, ಶಾಸನಬದ್ಧ ಶುಲ್ಕವನ್ನು ತಪ್ಪಿಸಿಕೊಳ್ಳಲು ಯೋಜನಾ ವೆಚ್ಚವನ್ನು ಕಡಿಮೆ ಮಾಡಲಾಗಿದೆ ಎಂಬ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಆದರೆ, ಮಹಾರಾಷ್ಟ್ರ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪರಿಷ್ಕೃತ ವೆಚ್ಚಕ್ಕೆ ಸಂಬಂಧಿಸಿದಂತೆ ಪೂರಕ ದಾಖಲೆಗಳು ಮತ್ತು ಸ್ಪಷ್ಟನೆ ನೀಡುವಂತೆ ಕಂಪನಿಗೆ ನೋಟಿಸ್ ನೀಡಿದ್ದು, ಸದ್ಯಕ್ಕೆ ಎಲ್ಲಾ ರೀತಿಯ ಕಾಮಗಾರಿಗಳನ್ನು ಸ್ಥಗಿತಗೊಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್ ಪ್ರಧಾನಿ ಪಟ್ಟಕ್ಕೇರಲು ಗಾಡಿ ಐಸೆನ್ಕೋಟ್ ಮಾಡಿಕೊಳ್ಳಬೇಕಾದ ಪ್ರಮುಖ ರಾಜಿಗಳೇನು?

ಇಸ್ರೇಲ್‌ನ ಚುನಾವಣೆ ಮುಗಿದ್ದು, ಅತಂತ್ರ ಪರಿಸ್ಥಿತಿ ಇದೆ. ಹೊಸ ಸರ್ಕಾರ ರಚನೆಗೆ...

ಯಲ್ಲಾಪುರ | ಚೆಕ್‌ಡ್ಯಾಮ್‌ನಲ್ಲಿ ಸ್ನಾನಕ್ಕೆ ಇಳಿದ ವ್ಯಕ್ತಿ ಮುಳುಗಿ ಸಾವು

ಕುಟುಂಬದವರೊಂದಿಗೆ ಪ್ರವಾಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಚೆಕ್‌ಡ್ಯಾಮ್‌ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ನೀರಿನಲ್ಲಿ...

ಗುರುಪುರ | ನೂತನ ಕಾರ್ಮಿಕ ಸಂಹಿತೆ ರದ್ದತಿಗೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಸಂಘದಿಂದ ಪ್ರತಿಭಟನೆ

ಕೇಂದ್ರ ಸರಕಾರ ಜಾರಿಗೊಳಿಸಿರುವ ನೂತನ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ...