ಸತೀಶ್ ಆಚಾರ್ಯ, ಮಂಜುಲ್ ಕಾರ್ಟೂನ್‌ಗಳಿಂದ ಭಾರತದ ಕಾನೂನು ಉಲ್ಲಂಘನೆ: ಮುಂಬೈ ಪೊಲೀಸರಿಂದ ನೋಟಿಸ್

Date:


ಕಳೆದ ವಾರ ಭಾರತೀಯ ವ್ಯಂಗ್ಯಚಿತ್ರಕಾರರಾದ ಸತೀಶ್ ಆಚಾರ್ಯ ಮತ್ತು ಮಂಜುಲ್ ಅವರಿಗೆ ತಮ್ಮ ವ್ಯಂಗ್ಯ ಚಿತ್ರಗಳು ಭಾರತದ ಮಾಹಿತಿ ತಂತ್ರಜ್ಞಾನದ ಕಾನೂನುಗಳನ್ನು ಉಲ್ಲಂಘಿಸುತ್ತವೆ ಎಂದು ತಿಳಿಸಲಾಗಿದೆ.

- Advertisement -

ವಾಷಿಂಗ್ಟನ್‌ ಪೋಸ್ಟ್ ನ ಮಾಲೀಕ ಜೆಫ್ ಬೆಜೋಸ್ ಮತ್ತು ಬಿಲಿಯನರ್ ಮಾರ್ಕ್ ಝುಕರ್ಬರ್ಗ್ ಟ್ರಂಪ್ ಗೆ ತಲೆಬಾಗುವ ತನ್ನ ವ್ಯಂಗ್ಯಚಿತ್ರವನ್ನು ವಾಷಿಂಗ್ಟನ್‌ ಪೋಸ್ಟ್ ತಿರಸ್ಕರಿಸಿದ ಬೆನ್ನಲ್ಲೇ ಪುಲಿಟ್ಜರ್ ವಿಜೇತ ವ್ಯಂಗ್ಯಚಿತ್ರಕಾರ್ತಿ ಆನ್ ಟೆಲ್ನೇಸ್ ರಾಜೀನಾಮೆ ಘೋಷಿಸಿದ್ದರು. ಇದರ ಬೆನ್ನಲ್ಲೇ ಭಾರತದಲ್ಲಿ ಈ ಬೆಳವಣಿಗೆ ಬೆಳಕಿಗೆ ಬಂದಿದೆ ಎಂದು ಟೆಲಿಗ್ರಾಪ್‌ ಇಂಡಿಯಾ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ವೇದಿಕೆ ʼಎಕ್ಸ್ʼ ಭಾರತೀಯ ವ್ಯಂಗ್ಯಚಿತ್ರಕಾರರಾದ ಸತೀಶ್ ಆಚಾರ್ಯ ಮತ್ತು ಮಂಜುಲ್ ಅವರಿಗೆ ತಮ್ಮ ವ್ಯಂಗ್ಯ ಚಿತ್ರಗಳಿಗೆ ಮುಂಬೈನ ಪೊಲೀಸರಿಂದ ಆಕ್ಷೇಪಣೆ ಬಂದಿದೆ ಎಂದು ತಿಳಿಸಿದೆ.

ವ್ಯಂಗ್ಯ ಚಿತ್ರಕಾರ ಸತೀಶ್ ಆಚಾರ್ಯ ತನಗೆ ಎಕ್ಸ್ ನಿಂದ ಬಂದ ನೋಟಿಸ್ ಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರು ಸಾಮಾಜಿಕ ಮಾಧ್ಯಮಗಳಲ್ಲಿ ನೋಟಿಸ್‌ನ ಸ್ಕ್ರೀನ್ ಶಾಟ್‌ಗಳನ್ನು ಕೂಡ ಪೋಸ್ಟ್ ಮಾಡಿದ್ದಾರೆ.

ʼನಿಮ್ಮ ಎಕ್ಸ್ ಖಾತೆ @safishacharya ಭಾರತದ ಮಾಹಿತಿ ತಂತ್ರಜ್ಞಾನ ಕಾಯ್ದೆಯನ್ನು ಉಲ್ಲಂಘಿಸುತ್ತದೆ ಎಂದು ಮುಂಬೈ ಪೊಲೀಸರು ನಮಗೆ ಮಾಹಿತಿ ನೀಡಿದ್ದಾರೆ. ಖಾತೆಯಿಂದ ವಿಷಯವನ್ನು ತೆಗೆದುಹಾಕಲು ಕಾನೂನು ಜಾರಿ ಅಥವಾ ಸರ್ಕಾರಿ ಸಂಸ್ಥೆಗಳಿಂದ ಸೂಚನೆ ಸ್ವೀಕರಿಸಿದರೆ ನಮ್ಮ ಬಳಕೆದಾರರಿಗೆ ತಿಳಿಸುವುದು ನಮ್ಮ ನೀತಿಯಾಗಿದೆ. ಈ ರೀತಿಯ ಸೂಚನೆಯನ್ನು ಸ್ವೀಕರಿಸುವುದರಿಂದ ನಿಮಗೆ ಗೊಂದಲದ ಅನುಭವವಾಗಿರಬಹುದು. ನಿಮ್ಮ ಹಿತಾಸಕ್ತಿಗಳನ್ನು ಕಾಪಾಡಲು ನೀವು ಪರ್ಯಾಯ ಹಾದಿಯನ್ನು ಕಂಡುಕೊಳ್ಳಬಹುದು. ನ್ಯಾಯಾಲಯದಲ್ಲಿ ಸೂಚನೆಯನ್ನು ಪ್ರಶ್ನಿಸಬಹುದು, ನಾಗರಿಕ ಸಮಾಜ ಸಂಸ್ಥೆಗಳನ್ನು ಸಂಪರ್ಕಿಸಬಹುದು. ವಿಷಯವನ್ನು ಸ್ವಯಂಪ್ರೇರಣೆಯಿಂದ ಅಳಿಸಬಹುದು ಅಥವಾ ಬೇರೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಬಹುದಾಗಿದೆ’ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

ಮಂಜುಲ್ ಅವರಿಗೆ ಕೂಡ ಇದೇ ರೀತಿಯ ನೋಟಿಸ್ ನೀಡಲಾಗಿದೆ. ಸತೀಶ್ ಆಚಾರ್ಯ ಅಥವಾ ಮಂಜುಲ್ ವಿರುದ್ಧ ಈ ಬಗ್ಗೆ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ. ಅವರ ಪೋಸ್ಟ್ ಹೇಗೆ ಕಾನೂನುಗಳನ್ನು ಉಲ್ಲಂಘಿಸಿದೆ ಎಂಬುದನ್ನು ತಿಳಿಯಲು ಎಕ್ಸ್ ಅನ್ನು ಕೂಡ ಅವರು ಸಂಪರ್ಕಿಸಿಲ್ಲ. ಆದರೆ, ಇಬ್ಬರೂ ನಾವು ಈ ಬಗ್ಗೆ ಭಯಪಡುವುದಿಲ್ಲಎಂದು ಹೇಳಿರುವುದಾಗಿ ಟೆಲಿಗ್ರಾಪ್ ವರದಿ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ, ಭಾರತದ ಸಂವಿಧಾನವು ವ್ಯಂಗ್ಯಚಿತ್ರಗಳ ಮೂಲಕ ಪ್ರಚಲಿತ ವಿದ್ಯಮಾನಗಳ ಬಗ್ಗೆ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕನ್ನು ನನಗೆ ನೀಡಿದೆ. ಅಧಿಕಾರದಲ್ಲಿರುವ ಜನರು ಕಾರ್ಟೂನ್ ಗಳನ್ನು ಒಪ್ಪಬಹುದು ಅಥವಾ ಒಪ್ಪದಿರಬಹುದು. ಆದರೆ, ಅವರು ವ್ಯಂಗ್ಯಚಿತ್ರಕಾರರ ಪ್ರಶ್ನಿಸುವ, ವಿಮರ್ಶೆಯ ಹಕ್ಕನ್ನು
ಕಸಿದುಕೊಳ್ಳಲು ಸಾಧ್ಯವಿಲ್ಲ ಮತ್ತು ಕಾರ್ಟೂನ್‌ ಗಳ ಮೂಲಕ ಅಭಿಪ್ರಾಯ ವ್ಯಕ್ತಪಡಿಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪತ್ರಕರ್ತರು, ವ್ಯಂಗ್ಯಚಿತ್ರಕಾರರು ಆಕ್ಷೇಪಣೆಗಳನ್ನು ಎದುರಿಸುವುದು ಸರ್ವೆ ಸಾಮಾನ್ಯವಾಗಿದೆ. ಸಂಪಾದಕೀಯ ವ್ಯಂಗ್ಯಚಿತ್ರಗಳ ಮೂಲಕ ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸುವ ವ್ಯಂಗ್ಯಚಿತ್ರಕಾರರ ಶ್ರೀಮಂತ ಪರಂಪರೆಯನ್ನು ಭಾರತ ಹೊಂದಿದೆ. ಸರ್ಕಾರ, ಸ್ಥಾಪನೆ, ನೀತಿಗಳನ್ನು, ನಾಯಕರನ್ನು ಪ್ರಶ್ನಿಸುವುದು ವ್ಯಂಗ್ಯಚಿತ್ರಕಾರನ ಕೆಲಸ ಮತ್ತು ಕರ್ತವ್ಯ. ವೃತ್ತಿಪರ ವ್ಯಂಗ್ಯಚಿತ್ರಕಾರನಾಗಿ ಕಳೆದ ಎರಡು ದಶಕಗಳಿಂದ ನಾನು ಅದೇ ಕೆಲಸವನ್ನು ಮಾಡುತ್ತಿದ್ದೇನೆ. ಅಧಿಕಾರದಲ್ಲಿರುವ ಪಕ್ಷ, ಅಧಿಕಾರದಲ್ಲಿರುವ ಜನರು ಬದಲಾಗಬಹುದು. ಆದರೆ ಸರ್ಕಾರವನ್ನು ಪ್ರಶ್ನಿಸುವ ವ್ಯಂಗ್ಯಚಿತ್ರಕಾರನ ನಿಲುವು ಬದಲಾಗುವುದಿಲ್ಲ ಎಂದು ಸತೀಶ್ ಆಚಾರ್ಯ ಹೇಳಿದ್ದಾರೆ.

ವ್ಯಂಗ್ಯಚಿತ್ರಕಾರ ಮಂಜುಲ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾವು ಭಯಪಡುವುದಿಲ್ಲ. ಈ ಸೂಚನೆಯು ಪಾರದರ್ಶಕತೆ ಮತ್ತು ಪ್ರಕ್ರಿಯೆಯ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ. ಇಂತಹ ಸೂಚನೆಗಳು ಮುಕ್ತ ವಾಕ್ ಸ್ವಾತಂತ್ರ್ಯ ಮತ್ತು ಪತ್ರಿಕೋದ್ಯಮದ ಮೇಲೆ ಪರಿಣಾಮ ಬೀರುತ್ತದೆ. ಅನೇಕ ವ್ಯಂಗ್ಯಚಿತ್ರ ರಚನೆಕಾರರು ಮತ್ತು ಪತ್ರಕರ್ತರು ಸೂಕ್ಷ್ಮ ವಿಷಯಗಳಿಂದ ದೂರ ಸರಿಯುತ್ತಾರೆ. ಸೂಕ್ಷ್ಮ ವಿಷಯಗಳಿಂದಾಗುವ ಪರಿಣಾಮಗಳ ಬಗ್ಗೆ ಭಯಪಡುತ್ತಾರೆ ಎಂದು ಮಂಜುಲ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...