ಒಬ್ಬ ರಾವಣ ಮತ್ತೊಬ್ಬ ರಾವಣನ ಮೇಲೆ ಬಾಣ ಬಿಡುವ ನಾಟಕ: ಮೋದಿ ವಿರುದ್ಧ ಧೃವ್ ರಾಠಿ ವ್ಯಂಗ್ಯ

Date:

ದೆಹಲಿಯಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾವಣನ ಪ್ರತಿಕೃತಿಗೆ ಸಾಂಕೇತಿಕವಾಗಿ ಬಾಣ ಬಿಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೋದಿ ಕೂಡ ತಮ್ಮ ಖಾತೆಗಳಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ಕಮೆಂಟ್‌ ಮಾಡಿರುವ ಖ್ಯಾತ ಯೂಟ್ಯೂಬರ್ ಧೃವ್ ರಾಠಿ, ಒಬ್ಬ ರಾವಣ ಮತ್ತೊಬ್ಬ ರಾವಣನ ಮೇಲೆ ಬಾಣ ಬಿಡುವ ನಾಟಕ ಮಾಡುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

- Advertisement -

ಅಕ್ಟೋಬರ್ 20ರಂದು ನವದೆಹಲಿಯ ಐಪಿ ಎಕ್ಸ್‌ಟೆನ್ಷನ್‌ನ ಡಿಡಿಎ ಉತ್ಸವ ಮೈದಾನದಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಗವಾನ್ ರಾಮನ ಆದರ್ಶಗಳು, ರಾಮರಾಜ್ಯದ ಪರಿಕಲ್ಪನೆ, ಸಾಮಾಜಿಕ ನ್ಯಾಯ, ರಾಷ್ಟ್ರೀಯ ಏಕತೆ ಮತ್ತು ವಿಕಸಿತ ಭಾರತದ ನಿರ್ಮಾಣದ ಅಗತ್ಯತೆಗಳ ಕುರಿತು ಭಾಷಣ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಇದೇ ವೇಳೆ, ಬಿಲ್ಲು ಹಿಡಿದು ರಾವಣನ ಪ್ರತಿಕೃತಿಯತ್ತ ಬಾಣ ಬಿಟ್ಟಿದ್ದಾರೆ. ಆ ಸಂದರ್ಭದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ‘ಸೀತಾ ಸಮೇತ ಶ್ರೀರಾಮನಿಗೆ ಜಯವಾಗಲಿ!’ ಎಂದು ಹಿಂದಿಯಲ್ಲಿ ಬರೆದುಕೊಡಿದ್ದಾರೆ.

Advertisements

ಈ ಲೇಖನ ಓದಿದ್ದೀರಾ?: ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ ನಡುವೆ ಟ್ರಂಪ್‌ಗೆ ಅಗ್ನಿಪರೀಕ್ಷೆ!

ಇದೇ ವಿಡಿಯೋಗೆ ಕಮೆಂಟ್‌ ಮಾಡಿರುವ ಧೃವ್ ರಾಠಿ, “Ek Ravan dusre Ravan par teer fekne ki acting kar raha hai, aur wo teer bhi wahin gir gaya” ಅಂದರೆ, ‘ಒಬ್ಬ ರಾವಣ ಮತ್ತೊಬ್ಬ ರಾವಣನ ಮೇಲೆ ಬಾಣ ಬಿಡುವ ನಾಟಕ ಮಾಡುತ್ತಿದ್ದಾನೆ. ಆದರೆ, ಆ ಬಾಣವೂ ಅಲ್ಲಿಯೇ ಬಿದ್ದುಹೋಯಿತು!’ ಎಂದು ವ್ಯಂಗ್ಯವಾಡಿದ್ದಾರೆ.

ಅಂದಹಾಗೆ, ಧೃವ್ ರಾಠಿ ಅವರು ಕೇಂದ್ರ ಸರ್ಕಾರದ ನೀತಿಗಳು, ಆಡಳಿತ ವೈಖರಿ ಹಾಗೂ ಮೋದಿಯವರ ಕಾರ್ಯಶೈಲಿಯನ್ನು ತೀಕ್ಷ್ಣವಾಗಿ ಪ್ರಶ್ನಿಸುವವರು. ಪ್ರಸ್ತುತ, ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ವಿರುದ್ಧ ಸಿಜೆಪಿ ಮತ್ತು ನಾಗರಿಕ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಲ್ಲೂ ಧೃವ್ ರಾಠಿ ಭಾಗವಹಿಸುತ್ತಿದ್ದಾರೆ. ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆದ ಪ್ರತಿಭಟನೆಯ ಸಮಯದಲ್ಲಿ ಅವರನ್ನು ಪ್ರತಿಭಟನೆಗೂ ಮುನ್ನವೇ ಪೊಲೀಸರು ಬಂಧಿಸಿದ್ದರು. ಇದನ್ನು, ಧೃವ್ ರಾಠಿ ‘ಅಪಹರಣ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಬ್ಬದಂದು 500ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳ ಪ್ರದರ್ಶಿಸಿದ ಉತ್ತರ ಪ್ರದೇಶದ ಶಾಸಕ

ಉತ್ತರ ಪ್ರದೇಶದ ಕುಂದಾ ಕ್ಷೇತ್ರದ 'ಜನಸತ್ತಾ ದಳ (ಲೋಕತಾಂತ್ರಿಕ)' ಪಕ್ಷದ ಪ್ರಭಾವಿ...

ಸಿಜೆಪಿಗೆ ಅಣ್ಣಾಮಲೈ ಬೆಂಬಲ: ‘ಬಂಧನವು ಅವರನ್ನು ಮತ್ತಷ್ಟು ಬಲಶಾಲಿಗಳನ್ನಾಗಿಸುತ್ತದೆ’ ಎಂದ ನಾಯಕ

ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು...

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...