ಯುವಶಕ್ತಿಯಿಂದ ಶೀಘ್ರದಲ್ಲೇ ದೊಡ್ಡ ಬದಲಾವಣೆಯಾಗಲಿದೆ: ಅಂಬೇಡ್ಕರ್‌ ಮರಿಮೊಮ್ಮಗ ಅಮನ್‌

Date:

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಮರಿಮೊಮ್ಮಗ ಅಮನ್ ಆನಂದರಾಜ್ ಅಂಬೇಡ್ಕರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಯುವಜನರು ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಶೀಘ್ರದಲ್ಲೇ ದೊಡ್ಡ ಬದಲಾವಣೆಗೆ ಕಾರಣವಾಗಬಹುದು ಎಂದು ಅವರು ಹೇಳಿದ್ದಾರೆ.

- Advertisement -

ಮಾಧ್ಯಮಗಳೊಂದಿಗೆ ಮಾತನಾಡಿದ ಅಮನ್, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಉಪವರ್ಗೀಕರಣದ ವಿಚಾರವನ್ನು ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

“ಮಹಾರಾಷ್ಟ್ರದಲ್ಲಿ ಏನಾಗುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಕರ್ನಾಟಕದಲ್ಲಿಯೂ ಉಪವರ್ಗೀಕರಣ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿಯೂ ಇದೇ ಪರಿಸ್ಥಿತಿ ಇದೆ. ನಾವು ಇದರ ವಿರುದ್ಧ ಹೋರಾಡುತ್ತಿದ್ದೇವೆ. ಭಾರತದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿವೆ. 20ರಿಂದ 60 ವರ್ಷದ ವಯೋಮಾನದ ಜನರು ಬೀದಿಗಿಳಿದಿದ್ದಾರೆ. ದೇಶದಲ್ಲಿ ಮುಂದೆ ಏನಾಗಲಿದೆ ಎಂಬುದು ತಿಳಿದಿಲ್ಲ. ಆದರೆ ಯುವಜನರು ಬದಲಾವಣೆ ತರಲಿದ್ದಾರೆ ಎಂಬ ಭರವಸೆ ನನಗಿದೆ. ಶೀಘ್ರದಲ್ಲೇ ದೊಡ್ಡ ಬದಲಾವಣೆ ಸಂಭವಿಸಲಿದೆ ಎಂದು ಆಶಿಸುತ್ತೇನೆ” ಎಂದು ಅವರು ಹೇಳಿದರು.

ಸಿಜೆಪಿ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ‘ಜಂತರ್ ಮಂತರ್ 2.0’ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಸುಮಾರು 1,000 ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನೆಗೆ ಅನುಮತಿ ನೀಡಲಾಗಿಲ್ಲ ಎಂದು ತಿಳಿಸಿದ ಬಳಿಕವೂ ಜಂತರ್ ಮಂತರ್ ಕಡೆಗೆ ಸಾಗಲು ಯತ್ನಿಸಿದವರನ್ನು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಮುಂಬೈನಿಂದ ದೆಹಲಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದಿದ್ದ ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ ಹಾಗೂ ಸಂಗಾತಿಗಳನ್ನು ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಇಳಿಯುತ್ತಿದ್ದಾಗಲೇ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: ಮುಂಬೈ | ಸಿಜೆಪಿ ಪ್ರತಿಭಟನೆಗೆ ಬೆಂಬಲ; ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿ 400ಕ್ಕೂ ಹೆಚ್ಚು ಮಂದಿ ವಶಕ್ಕೆ

ಈ ಕ್ರಮವನ್ನು ಟೀಕಿಸಿದ ದೀಪ್ಕೆ, “ಇದು ದೇಶ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ತೋರಿಸುತ್ತದೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿಯೂ ಇಂದಿರಾ ಗಾಂಧಿ ಇಂತಹ ಕ್ರಮ ಕೈಗೊಂಡಿರಲಿಲ್ಲ” ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ | ಸಿಜೆಪಿ ಪ್ರತಿಭಟನೆಗೆ ಬೆಂಬಲ; ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿ 400ಕ್ಕೂ ಹೆಚ್ಚು ಮಂದಿ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...