ಇಂಡೋನೇಷ್ಯಾದಲ್ಲಿ ನಿಂತು ಗಣಿತದ ಪಾಠ; ನಗೆಪಾಟಲಿಗೀಡಾದ ಮೋದಿಯವರ ಬಾಲಿಶ ಭಾಷಣ

Date:

ಭಾರತದ ಪ್ರಧಾನಿ ಹುದ್ದೆ ಎಂದರೆ ದೇಶದ ಘನತೆ, ಗಾಂಭೀರ್ಯ ಮತ್ತು ಬೌದ್ಧಿಕ ಪ್ರಬುದ್ಧತೆಯ ಸಂಕೇತ. ಆದರೆ, ನಿನ್ನೆ (ಜು.7) ಇಂಡೋನೇಷ್ಯಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿ, ಮಾಡಿತ ಅಂಕಗಣಿತದ ಪಾಠ ಸಾಮಾಜಿಕ ಜಾಲತಾಣದಲ್ಲಿ ಭಾರೀ ನಗೆಪಾಟಲಿಗೀಡಾಗಿದೆ.

- Advertisement -

ಅಂತಾರಾಷ್ಟ್ರೀಯ ವೇದಿಕೆಯ ಮೇಲೆ ಗಂಭೀರ ವಿಷಯಗಳ ಬಗ್ಗೆ ಚರ್ಚಿಸಬೇಕಿದ್ದ ಪ್ರಧಾನಿಯವರು, ಭಾರತದ ಗಣರಾಜ್ಯೋತ್ಸವದ ದಿನಾಂಕ (26=2+6=8) ಎರಡರ ಮೊತ್ತ 8 ಬರುತ್ತದೆ. ಇಂಡೋನೇಷ್ಯಾದ ಅಧ್ಯಕ್ಷ ಪ್ರಬೊವೊ ಸುಬಿಯಾಂತೊ ಅವರ ಜನ್ಮದಿನ 17 (17=1+7=8) ಇದೂ ಕೂಡ ಎಂಟೇ ಬರುತ್ತದೆ ಎಂದು ಅತ್ಯುತ್ಸಾಹದಿಂದ ವಿವರಿಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ತಮ್ಮ ಈ ‘ಅಪೂರ್ವ ಆವಿಷ್ಕಾರ’ವನ್ನು ಕಂಡು ಪ್ರಧಾನಿಯವರೇ ಮುಗುಳ್ನಗುತ್ತಿರುವಂತೆ ವಿಡಿಯೋದಲ್ಲಿ ಕಾಣುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣ X ನಲ್ಲಿ ಭಾರೀ ಟ್ರೋಲ್‌ ಆಗುತ್ತಿದೆ. ವಿಡಿಯೋ ಹಂಚಿಕೊಂಡು, ‘ಇವರು ನಮ್ಮ ದೇಶದ ಪ್ರಧಾನಿಯೇ?’ ಇಂತಹ ಹಾಸ್ಯಾಸ್ಪದ ಪ್ರದರ್ಶನ ನೀಡುತ್ತಿರುವವರು ದೇಶದ ಪ್ರಧಾನಿ ಎಂದು ನಂಬಲು ಸಾಧ್ಯವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಹಲವರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಗಣಿತಶಾಸ್ತ್ರಜ್ಞರೇ ತಲೆಕೆಡಿಸಿಕೊಳ್ಳುವ ‘ಮೋದಿನಾಮಿಕ್ಸ್’! ಎಂದು ಹಾಸ್ಯ ಮಾಡಿದ್ದಾರೆ. ಜೊತೆಗೆ ಅವರ ಜನಪ್ರಿಯ a^+2ab ಸೂತ್ರದ ವಿಡಿಯೋ, ಪೆಹಲ್ಗಾಗ್‌ ಅಟ್ಯಾಕ್‌, ಅಮೆರಿಕದ ನೆಲದಲ್ಲಿ ನಿಂತು ಆಡಿದ ಮೆಗಾ, ಮಿಗಾ ಮತ್ತು ಮೆಗಾ, ಇಸ್ರೇಲ್‌ನಲ್ಲಿ ಆಡಿದ ಮದರ್‌ ಲ್ಯಾಂಡ್‌, ಫಾದರ್‌ ಲ್ಯಾಂಡ್‌ಗಳನ್ನು ಕಮೆಂಟ್‌ ಮಾಡಿ ಟೀಕಿಸುತ್ತಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ ಪ್ರಕರಣ: ಆರೋಪಿ ಅಥರ್ ಖಾನ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ದೇಶದಲ್ಲಿ ಮಳೆಯ ಅಸಮಾನ ಹಂಚಿಕೆ ಹೆಚ್ಚಾಗಿ ಒಂದು ಕಡೆ ಬರ ನಿರ್ಮಾಣವಾಗಿದ್ದರೆ, ಇನ್ನೊಂದು ಕಡೆ ಮಳೆ, ಪ್ರವಾಹ, ಭೂಕುಸಿತದಿಂದ ಹಲವಾರು ಜನ ಸಾವನ್ನಪ್ಪುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ದೇಶದ ಭವಿಷ್ಯದ ಬಗ್ಗೆ ಗಂಭೀರವಾಗಿ ಯೋಚಿಸುವುದು ಬಿಟ್ಟು, ಮೋದಿಯವರು ಇಂತಹ ಬಾಲಿಶ ವರ್ತನೆ ತೋರುತ್ತಿರುವುದು ಸರಿಯಲ್ಲ. ಪ್ರಧಾನಿ ಹುದ್ದೆಯ ಘನತೆ ಮರೆತು ಇಂತಹ ತಮಾಷೆಗಳಲ್ಲಿ ತೊಡಗುವುದು ನಿಜಕ್ಕೂ ದುರದೃಷ್ಟಕರ ಎಂದು ನೆಟ್ಟಿಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ....

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...

ತಲೆಮರೆಸಿಕೊಂಡಿದ್ದ ಬಿಜೆಪಿ ಕೌನ್ಸಿಲರ್ ಹಾಜರಾತಿ ರಿಜಿಸ್ಟರ್‌ನಲ್ಲಿ ನಕಲಿ ಸಹಿ: ತನಿಖೆಗೆ ಮುಂದಾದ ಕೇರಳ ಪೊಲೀಸ್

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆಯ ಹಾಜರಾತಿ ಪುಸ್ತಕದಲ್ಲಿ ಬಿಜೆಪಿ ಕೌನ್ಸಿಲರ್ ಆರ್...