ಪ್ರಜಾಪ್ರಭುತ್ವದ ಅಣಕ: ಪಕ್ಷಾಂತರಕ್ಕಾಗಿ ಶಾಸಕರ ರಾಜೀನಾಮೆ ಮತ್ತು ಮರು ಸ್ಪರ್ಧೆಗೆ ಮದ್ರಾಸ್ ಹೈಕೋರ್ಟ್ ಕಿಡಿ

Date:

ಚುನಾವಣೆಯಲ್ಲಿ ಗೆದ್ದ ಕೆಲವೇ ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷಾಂತರಗೊಂಡು ಅದೇ ಕ್ಷೇತ್ರದಲ್ಲಿ ಮರುಚುನಾವಣೆಗೆ ಸ್ಪರ್ಧಿಸುವ ರಾಜಕೀಯ ಶೈಲಿಯ ವಿರುದ್ಧ ಮದ್ರಾಸ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಂತಹ ನಡವಳಿಕೆಯು ‘ಪ್ರಜಾಪ್ರಭುತ್ವದ ಅಣಕ’ ಮತ್ತು ಮತದಾರರಿಗೆ ಎಸಗುವ ಮಹಾ ದ್ರೋಹ ಎಂದು ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ತಮಿಳುನಾಡಿನ ಆಡಳಿತಾರೂಢ ಟಿವಿಕೆ ಪಕ್ಷವು ಇತ್ತೀಚೆಗೆ ಎಐಎಡಿಎಂಕೆ ತೊರೆದು ಬಂದಿದ್ದ ಇಬ್ಬರು ಮಾಜಿ ಶಾಸಕರಾದ ಮರಗತಂ ಕುಮಾರವೇಲ್ ಮತ್ತು ಪಿ. ಸತ್ಯಭಾಮ ಅವರಿಗೆ ಉಪಚುನಾವಣೆಯಲ್ಲಿ ಟಿಕೆಟ್ ಘೋಷಿಸಿತ್ತು. ಮಧುರಾಂತಕಂ ಮತ್ತು ಧಾರಾಪುರಂ ಕ್ಷೇತ್ರಗಳಿಗೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಟಿವಿಕೆ ಸೇರಿದ್ದ ಈ ಇಬ್ಬರೂ ನಾಯಕರು, ಅದೇ ಕ್ಷೇತ್ರಗಳಿಂದ ಮರುಸ್ಪರ್ಧೆಗೆ ಇಳಿದಿರುವುದನ್ನು ಪ್ರಶ್ನಿಸಿ ಪಿಐಎಲ್‌ ಸಲ್ಲಿಸಲಾಗಿತ್ತು. ಆ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ನ್ಯಾಯಮೂರ್ತಿಗಳಾದ ಎಸ್.ಎಂ. ಸುಬ್ರಮಣ್ಯಂ ಮತ್ತು ಕೆ. ಗೋವಿಂದರಾಜನ್ ಅವರನ್ನೊಳಗೊಂಡ ಪೀಠವು, “ಶಾಸಕರು ಜನಪ್ರತಿನಿಧಿಗಳಾಗಿ ಆಯ್ಕೆಯಾಗುವುದು ಜನರ ನಂಬಿಕೆಯ ಆಧಾರದ ಮೇಲೆ. ಅಧಿಕಾರಕ್ಕೆ ಬಂದ ತಕ್ಷಣ ರಾಜೀನಾಮೆ ನೀಡಿ, ಮತ್ತೆ ಅದೇ ಜನರೆದುರು ವೋಟಿಗಾಗಿ ನಿಲ್ಲುವುದು ಮತದಾರರಿಗೆ ಮಾಡುವ ಅಪಮಾನ” ಎಂದು ಹೇಳಿದೆ.

ಇಂತಹ ಪ್ರವೃತ್ತಿಗೆ ಕಡಿವಾಣ ಹಾಕಲು ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನವನ್ನೂ ನೀಡಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಸುಧನ್, “ರಾಜಕೀಯ ಲಾಭಕ್ಕಾಗಿ ಶಾಸಕರು ನೀಡುವ ದಿಢೀರ್ ರಾಜೀನಾಮೆಗಳಿಂದಾಗಿ ಮರುಚುನಾವಣೆ ನಡೆಸಲು ತೆರಿಗೆದಾರರ ಹಣ ವ್ಯರ್ಥವಾಗುತ್ತಿದೆ. ಹೀಗೆ ರಾಜೀನಾಮೆ ನೀಡುವ ಜನಪ್ರತಿನಿಧಿಗಳಿಗೆ ಚುನಾವಣಾ ವೆಚ್ಚದ ದಂಡ ವಿಧಿಸಬೇಕು. ನಿರ್ದಿಷ್ಟ ಅವಧಿಯವರೆಗೆ ಸ್ಪರ್ಧಿಸದಂತೆ ನಿಷೇಧ ಹೇರಬೇಕು” ಎಂದು ಮನವಿ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ ಅಮೆರಿಕ

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ...

ಈ ದಿನ ಸಂಪಾದಕೀಯ | ಹಬ್ಬ-ಆಚರಣೆಗಳೇ ಬಿಜೆಪಿಯ ದ್ವೇಷದ ಅಸ್ತ್ರ; ಜನತೆ ಎಚ್ಚೆತ್ತುಕೊಳ್ಳಲಿ!

ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಧಾರ್ಮಿಕ ಆಚರಣೆಗಳ ಪಾವಿತ್ರ್ಯವನ್ನು ಹಾಳುಗೆಡವುವ, ಹಬ್ಬಗಳನ್ನು...

ಸುದ್ದಿ ನೋಡಿದ ತಕ್ಷಣ ಪಿಐಎಲ್ ಹಾಕ್ತೀರಾ? – ನಕಲಿ ವೈದ್ಯಕೀಯ ಪದವಿ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ಚರ್ಚೆಯಾಗುವ ಸುದ್ದಿಗಳ ಆಧಾರದ ನಿಯಮಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌)...

ಕರ್ನಾಟಕ SIR: ಹಿರಿಯರು, ಅನಾರೋಗ್ಯ ಪೀಡಿತರಿಗೆ ಮನೆಬಾಗಿಲಲ್ಲೇ ಪರಿಶೀಲನೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಣೆಗೆ ಹಾಜರಾಗಲು ಸೂಚನೆ...