ಕರ್ನಾಟಕದ `ಶಕ್ತಿ ಯೋಜನೆ’ಯಂತೆ ಆಂಧ್ರ ಪ್ರದೇಶ ಸರ್ಕಾರ ಇತ್ತೀಚೆಗೆ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸಲು ನಿರ್ಧರಿಸಿದೆ. ಈ ಯೋಜನೆಯನ್ನು ಆಗಸ್ಟ್ 15, ಸ್ವಾತಂತ್ರ್ಯ ದಿನಾಚರಣೆಯಿಂದ ‘ಸ್ತ್ರೀ ಶಕ್ತಿ’ ಹೆಸರಿನಲ್ಲಿ ಪ್ರಾರಂಭಿಸಲಾಗುವುದು.
ಸೋಮವಾರ ಎಪಿಆರ್‌ಟಿಸಿ ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾರಿಗೆ ಪ್ರಧಾನ ಕಾರ್ಯದರ್ಶಿ ಕಾಂತಿಲಾಲ್ ದಂಡೆ ಈ ಆದೇಶಗಳನ್ನು ಹೊರಡಿಸಿದ್ದಾರೆ. ಈ ಯೋಜನೆ ಮಹಿಳೆಯರು, ಶಾಲಾಕಾಲೇಜು ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಅನ್ವಯಿಸುತ್ತದೆ. ಪ್ರಯಾಣಿಸುವ ಮೊದಲು ಮಾನ್ಯ ಗುರುತಿನ ಚೀಟಿಯನ್ನು ತೋರಿಸುವುದು ಕಡ್ಡಾಯವಾಗಿದೆ. ಪ್ರಸ್ತುತ, ರಾಜ್ಯಾದ್ಯಂತ 5 ವಿಧದ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಲಾಗುವುದು.
ಈ ಯೋಜನೆ ರಾಜ್ಯಾದ್ಯಂತ ಆ.15ರಂದು ಜಾರಿಯಾಗಲಿದ್ದು, ಎಪಿಎಸ್‌ಆರ್‌ಟಿಸಿಯ ಸಾಮಾನ್ಯ ಬಸ್‌ಗಳಿಗೆ ಮಾತ್ರ ಅನ್ವಯವಾಗುತ್ತದೆ. ಎಸಿ ಸೇರಿ ವಿವಿಧ ಐಷಾರಾಮಿ ಬಸ್ಸುಗಳಿಗೆ ಅನ್ವಯವಾಗುವುದಿಲ್ಲ ಎಂದಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ ಕೇಸ್‌ನಲ್ಲಿ ಮುಸ್ಲಿಂ, ಕಮ್ಯುನಿಸ್ಟರ ಹೆಸರು ತಂದು ದಿಕ್ಕು ತಪ್ಪಿಸುವುದು ಅಕ್ಷಮ್ಯ
ಇನ್ನೂ ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದೆ. ಅದಲ್ಲದೇ ಬಸ್ ನಿಲ್ದಾಣಗಳಲ್ಲಿ ಫ್ಯಾನ್, ಕುರ್ಚಿ, ಕುಡಿಯುವ ನೀರು ಮತ್ತು ಶೌಚಾಲಯಗಳ ಸೌಲಭ್ಯ ದೊರೆಯಲಿದೆ.
ಈ ಯೋಜನೆಗೆ ವಾರ್ಷಿಕವಾಗಿ 1,942 ಕೋಟಿ ರೂ. ಹಾಗೂ ತಿಂಗಳಿಗೆ ಸುಮಾರು 162 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಮೂಲಕ ಶಿಕ್ಷಣ, ಉದ್ಯೋಗ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ಬಸ್‌ಗಳಲ್ಲಿ ಹೆಚ್ಚುತ್ತಿರುವ ದಟ್ಟಣೆಯಿಂದಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಸೂಕ್ತ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಎಲ್ಲ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಮತ್ತು ಕಂಡಕ್ಟರ್‌ಗಳಿಗೆ ಬಾಡಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ದೇಶನ ನೀಡಿದೆ. ಬಸ್ ನಿಲ್ದಾಣಗಳಲ್ಲಿ ಅಗತ್ಯ ಮೂಲಸೌಕರ್ಯ ಸೌಲಭ್ಯಗಳನ್ನು ಒದಗಿಸುವಂತೆ ಎಪಿಆರ್‌ಟಿಸಿ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದೆ.