ಕರ್ನಾಟಕದಂತೆ ಆಂಧ್ರ ಪ್ರದೇಶದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

Date:

ಕರ್ನಾಟಕದ `ಶಕ್ತಿ ಯೋಜನೆ’ಯಂತೆ ಆಂಧ್ರ ಪ್ರದೇಶ ಸರ್ಕಾರ ಇತ್ತೀಚೆಗೆ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸಲು ನಿರ್ಧರಿಸಿದೆ. ಈ ಯೋಜನೆಯನ್ನು ಆಗಸ್ಟ್ 15, ಸ್ವಾತಂತ್ರ್ಯ ದಿನಾಚರಣೆಯಿಂದ ‘ಸ್ತ್ರೀ ಶಕ್ತಿ’ ಹೆಸರಿನಲ್ಲಿ ಪ್ರಾರಂಭಿಸಲಾಗುವುದು.

- Advertisement -

ಸೋಮವಾರ ಎಪಿಆರ್‌ಟಿಸಿ ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾರಿಗೆ ಪ್ರಧಾನ ಕಾರ್ಯದರ್ಶಿ ಕಾಂತಿಲಾಲ್ ದಂಡೆ ಈ ಆದೇಶಗಳನ್ನು ಹೊರಡಿಸಿದ್ದಾರೆ. ಈ ಯೋಜನೆ ಮಹಿಳೆಯರು, ಶಾಲಾಕಾಲೇಜು ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಅನ್ವಯಿಸುತ್ತದೆ. ಪ್ರಯಾಣಿಸುವ ಮೊದಲು ಮಾನ್ಯ ಗುರುತಿನ ಚೀಟಿಯನ್ನು ತೋರಿಸುವುದು ಕಡ್ಡಾಯವಾಗಿದೆ. ಪ್ರಸ್ತುತ, ರಾಜ್ಯಾದ್ಯಂತ 5 ವಿಧದ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಯೋಜನೆ ರಾಜ್ಯಾದ್ಯಂತ ಆ.15ರಂದು ಜಾರಿಯಾಗಲಿದ್ದು, ಎಪಿಎಸ್‌ಆರ್‌ಟಿಸಿಯ ಸಾಮಾನ್ಯ ಬಸ್‌ಗಳಿಗೆ ಮಾತ್ರ ಅನ್ವಯವಾಗುತ್ತದೆ. ಎಸಿ ಸೇರಿ ವಿವಿಧ ಐಷಾರಾಮಿ ಬಸ್ಸುಗಳಿಗೆ ಅನ್ವಯವಾಗುವುದಿಲ್ಲ ಎಂದಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ ಕೇಸ್‌ನಲ್ಲಿ ಮುಸ್ಲಿಂ, ಕಮ್ಯುನಿಸ್ಟರ ಹೆಸರು ತಂದು ದಿಕ್ಕು ತಪ್ಪಿಸುವುದು ಅಕ್ಷಮ್ಯ

ಇನ್ನೂ ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದೆ. ಅದಲ್ಲದೇ ಬಸ್ ನಿಲ್ದಾಣಗಳಲ್ಲಿ ಫ್ಯಾನ್, ಕುರ್ಚಿ, ಕುಡಿಯುವ ನೀರು ಮತ್ತು ಶೌಚಾಲಯಗಳ ಸೌಲಭ್ಯ ದೊರೆಯಲಿದೆ.

ಈ ಯೋಜನೆಗೆ ವಾರ್ಷಿಕವಾಗಿ 1,942 ಕೋಟಿ ರೂ. ಹಾಗೂ ತಿಂಗಳಿಗೆ ಸುಮಾರು 162 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಮೂಲಕ ಶಿಕ್ಷಣ, ಉದ್ಯೋಗ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಬಸ್‌ಗಳಲ್ಲಿ ಹೆಚ್ಚುತ್ತಿರುವ ದಟ್ಟಣೆಯಿಂದಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಸೂಕ್ತ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಎಲ್ಲ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಮತ್ತು ಕಂಡಕ್ಟರ್‌ಗಳಿಗೆ ಬಾಡಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ದೇಶನ ನೀಡಿದೆ. ಬಸ್ ನಿಲ್ದಾಣಗಳಲ್ಲಿ ಅಗತ್ಯ ಮೂಲಸೌಕರ್ಯ ಸೌಲಭ್ಯಗಳನ್ನು ಒದಗಿಸುವಂತೆ ಎಪಿಆರ್‌ಟಿಸಿ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...