ಅಕ್ಟೋಬರ್​ 28ರ ರಾತ್ರಿ ಭಾಗಶಃ ಚಂದ್ರಗ್ರಹಣ; ಬರಿಗಣ್ಣಿನಲ್ಲಿ ಗ್ರಹಣ ವೀಕ್ಷಿಸಬಹುದು

Date:

Advertisements

ಈ ವರ್ಷದ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣ ಅ.28 ರಂದು ಸಂಭವಿಸಲಿದೆ. ಅಕ್ಟೋಬರ್ 14 ರಂದು ಸೂರ್ಯಗ್ರಹಣ ಸಂಭವಿಸಿತ್ತು. ಇದಾದ ಕೇವಲ 14 ದಿನಗಳ ನಂತರ ಭಾಗಶಃ ಚಂದ್ರಗ್ರಹಣ ಸಂಭವಿಸಲಿದೆ.

ವರ್ಷದ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28-29ರ ಮಧ್ಯರಾತ್ರಿ ಸಂಭವಿಸಲಿದೆ. ಭಾರತದ ಎಲ್ಲ ಸ್ಥಳಗಳಲ್ಲಿ ಗ್ರಹಣ ಗೋಚರಿಸುತ್ತದೆ. ಇದು ಭಾಗಶಃ ಚಂದ್ರಗ್ರಹಣವಾಗಿದೆ. ಅ.28 ರಾತ್ರಿ 11:30 ರಿಂದ ಮಧ್ಯರಾತ್ರಿ 3.36ಕ್ಕೆ ಗ್ರಹಣ ಕೊನೆಗೊಳ್ಳುತ್ತದೆ.

ಭಾಗಶಃ ಚಂದ್ರಗ್ರಹಣ ವೀಕ್ಷಿಸಲು ಗ್ರಹಣ ಕನ್ನಡಕಗಳಂತಹ ಅತ್ಯಾಧುನಿಕ ಉಪಕರಣಗಳನ್ನು ಹೊಂದುವ ಅಗತ್ಯವಿಲ್ಲ. ಇದನ್ನು ಬರಿಗಣ್ಣಿನಿಂದ ವೀಕ್ಷಿಸಬಹುದು. ಗ್ರಹಣ ವೀಕ್ಷಣೆಗೆ ನೆಹರು ತಾರಾಲಯದ ಯೂಟ್ಯೂಬ್​ನಲ್ಲಿ ಲೈವ್ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಮಧ್ಯರಾತ್ರಿ ಚಂದ್ರಗ್ರಹಣ ವೀಕ್ಷಣೆಗೂ ವ್ಯವಸ್ಥೆ ಮಾಡಲಾಗಿದೆ.

Advertisements

ಪಶ್ಚಿಮ ಪೆಸಿಫಿಕ್ ಮಹಾಸಾಗರ, ಆಸ್ಟ್ರೇಲಿಯಾ, ಏಷ್ಯಾ, ಯುರೋಪ್, ಆಫ್ರಿಕಾ, ಪೂರ್ವ ದಕ್ಷಿಣ ಅಮೆರಿಕ, ಈಶಾನ್ಯ ಉತ್ತರ ಅಮೆರಿಕ, ಅಟ್ಲಾಂಟಿಕ್ ಮಹಾಸಾಗರ, ಹಿಂದೂ ಮಹಾಸಾಗರ ಮತ್ತು ದಕ್ಷಿಣ ಪೆಸಿಫಿಕ್ ಮಹಾಸಾಗರದಲ್ಲಿ ಗ್ರಹಣ ಗೋಚರಿಸಲಿದೆ. ಭಾಗಶಃ ಚಂದ್ರಗ್ರಹಣವು ಮಧ್ಯರಾತ್ರಿಯ ಸುಮಾರಿಗೆ ಭಾರತದ ಎಲ್ಲ ಸ್ಥಳಗಳಲ್ಲಿ ಗೋಚರಿಸುತ್ತದೆ.

2025ರ ಸೆಪ್ಟೆಂಬರ್ 7 ರಂದು ಭಾರತದಲ್ಲಿ ಸಂಪೂರ್ಣ ಚಂದ್ರಗ್ರಹಣ ಗೋಚರವಾಗಲಿದೆ. ಇಡೀ ಚಂದ್ರನು ಭೂಮಿಯ ನೆರಳಿನಲ್ಲಿ ಬಂದಾಗ ಸಂಪೂರ್ಣ ಚಂದ್ರ ಗ್ರಹಣ ಸಂಭವಿಸುತ್ತದೆ. ಭಾರತದಲ್ಲಿ 2022 ರ ನವೆಂಬರ್ 8 ರಂದು ಕೊನೆಯ ಬಾರಿಗೆ ಪೂರ್ಣ ಚಂದ್ರ ಗ್ರಹಣ ಸಂಭವಿಸಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹5.50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಸಿಸಿಬಿ ಪೊಲೀಸರು; 10 ಡ್ರಗ್ ಪೆಡ್ಲರ್​ಗಳ ಬಂಧನ

ದೇವಸ್ಥಾನಗಳು ಬಂದ್

ಚಂದ್ರಗ್ರಹಣ ಇರುವ ಹಿನ್ನೆಲೆ, ಬಹುತೇಕ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X