ಬಾಲಕಿ ಮೇಲೆ ಅತ್ಯಾಚಾರ: ಇಬ್ಬರು ಕಾಮುಕರಿಗೆ ಜೀವಾವಧಿ ಶಿಕ್ಷೆ

Date:

2016ರಲ್ಲಿ ತಲೆಗಾಂವ್ ರೈಲು ನಿಲ್ದಾಣದಿಂದ 18 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರಿಬ್ಬರಿಗೆ ಪುಣೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಎಂ. ತಪ್ಕಿರೆ ಸೋಮವಾರ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

- Advertisement -

ಅಪರಾಧಿಗಳನ್ನು ಛತ್ರಪತಿ ಸಂಭಾಜಿನಗರದ ಶರದ್ ಮುರಳೀಧರ್ ಸಾಲ್ವೆ (30) ಮತ್ತು ಪುಣೆಯ ರಾವೆಟ್ ನ ಅಂಕಿತ್ಸಿಂಗ್ ಬಿಸ್ತಾ ಅಲಿಯಾಸ್ ಕಾಂಚ (30) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದನ್ನೂ ಓದಿ: ಭೂ ವಿವಾದದಲ್ಲಿ ಸಹೋದರರ ಹತ್ಯೆ; ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

2016ರ ಜನವರಿ 25ರಂದು ಬಾರಾಮತಿಯಿಂದ ಪ್ರಯಾಣಿಸಿ ತಲೆಗಾಂವ್ ರೈಲು ನಿಲ್ದಾಣಕ್ಕೆ ಸಂತ್ರಸ್ತೆ ಬಂದಿಳಿದಾಗ ಈ ಇಬ್ಬರು ಆಕೆಯ ಬಳಿಗೆ ಬಂದಿದ್ದಾರೆ. ಬಾಲಕಿ ಆ ಸಂದರ್ಭದಲ್ಲಿ ಹಸಿದಿದ್ದಳು. ಆಕೆಗೆ ಆಹಾರ ನೀಡುವ ನೆಪದಲ್ಲಿ ಆಕೆಯನ್ನು ತಲೆಗಾಂವ್ ರೈಲು ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿರುವ ಟಿನ್ ಶೆಡ್‌ಗೆ ಕರೆದೊಯ್ದು ಪದೇ ಪದೇ ಅತ್ಯಾಚಾರ ಎಸಗಿದ್ದಾರೆ. ಅಷ್ಟು ಮಾತ್ರವಲ್ಲದೆ ಆಕೆಯ ಅಶ್ಲೀಲ ಫೋಟೋಗಳನ್ನು ಈ ದುಷ್ಕರ್ಮಿಗಳು ತೆಗೆದುಕೊಂಡಿದ್ದರು.

ರೈಲ್ವೆ ನಿಲ್ದಾಣದಲ್ಲಿ ಬಾಲಕಿ ಅಳುತ್ತಿರುವುದನ್ನು ನೋಡಿದ ಪೌರ ಕಾರ್ಮಿಕೆಯೊಬ್ಬರು ಆಕೆಯನ್ನು ಪೊಲೀಸರ ಬಳಿ ಕರೆದೊಯ್ದಿದ್ದಾರೆ. 2026ರ ಜನವರಿ 27ರಂದು ಪುಣೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಸಂತ್ರಸ್ತೆಯ ಬಳಿ ಆರೋಪಿಗಳಲ್ಲಿ ಒಬ್ಬನ ಮೊಬೈಲ್ ಫೋನ್ ಸಂಖ್ಯೆ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಂದರೆ ಅವರು ಪರಿಚಯಸ್ಥರು ಆದ್ದರಿಂದ ಅವರನ್ನು ಈ ಬಾಲಕಿ ನಂಬಿದ್ದಳು.

ತನಿಖೆಯ ಸಮಯದಲ್ಲಿ ಸಿಕ್ಕ ಸುಳಿವುಗಳ ಆಧಾರದ ಮೇಲೆ, ಪೊಲೀಸರು ಈ ಪ್ರಕರಣದಲ್ಲಿ ಆರೋಪಿಗಳಾದ ಶರದ್ ಸಾಲ್ವೆ ಮತ್ತು ಕಾಂಚನನ್ನು ಬಂಧಿಸಿದ್ದಾರೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶಂಶುದ್ದೀನ್ ಶೇಖ್ ನೇತೃತ್ವದ ತಂಡವು ಪ್ರಕರಣದ ತನಿಖೆ ನಡೆಸಿ 2016ರ ಏಪ್ರಿಲ್ 30ರಂದು ಚಾರ್ಜ್‌ಶೀಟ್ ಸಲ್ಲಿಸಿತ್ತು.

ವಿಶೇಷ ಸಾರ್ವಜನಿಕ ಅಭಿಯೋಜಕ ಎಸ್‌ಎ ಕ್ಷೀರಸಾಗರ್ ವಿಚಾರಣೆಯ ಸಮಯದಲ್ಲಿ ಅಪರಾಧದ ಸಮಯದಲ್ಲಿ ನಡೆದ ಘಟನೆಗೆ ಸಂಬಂಧಿಸಿ 12 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದಾರೆ. ನ್ಯಾಯಾಲಯವು ಇಬ್ಬರನ್ನೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) (ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗುವುದು) ಮತ್ತು 34 ರ ಅಡಿಯಲ್ಲಿ ತಪ್ಪಿತಸ್ಥರೆಂದು ಘೋಷಿಸಿದೆ. ಕಠಿಣ ಜೀವಾವಧಿ ಶಿಕ್ಷೆ ಮತ್ತು ತಲಾ 25,000 ರೂ.ಗಳ ದಂಡವನ್ನು ವಿಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...