ಅತ್ಯಾಚಾರ ಸಂತ್ರಸ್ತೆಗೆ ಸಹಾಯ ಮಾಡಿದ್ದ ಶಿಕ್ಷಕನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ; ಬಂಧನ

Date:

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಗೆ ಆಶ್ರಮದ ಶಿಕ್ಷಕರೊಬ್ಬರು ಸಹಾಯ ಮಾಡಿದ್ದರು. ಇದೀಗ, ಅವರ ವಿರುದ್ಧ ಆಶ್ರಮದಲ್ಲಿ ಕನಿಷ್ಠ ಮೂವರು ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ.

21 ವರ್ಷದ ಶಿಕ್ಷಕ ರಾಹುಲ್ ಶರ್ಮಾ ಮತ್ತು ಆಶ್ರಮದ ಉಸ್ತುವಾರಿ ಅಜಯ್ ಠಾಕೂರ್ ವಿರುದ್ಧ ಐಪಿಸಿ ಸೆಕ್ಷನ್‌ಗಳು ಮತ್ತು ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಇಬ್ಬರನ್ನೂ ಬಂಧಿಸಿದ್ದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಇಲ್ಲಿಯವರೆಗೆ ಮೂವರು ಮಕ್ಕಳು ಮುಂದೆ ಬಂದು ತಮ್ಮ ಮೇಲಾದ ದೌರ್ಜನ್ಯಗಳ ಬಗ್ಗೆ ಆರೋಪ ಮಾಡಿದ್ದಾರೆ. ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದೇವೆ” ಎಂದು ಉಜ್ಜಯಿನಿ ಎಸ್‌ಪಿ ಪ್ರದೀಪ್ ಶರ್ಮಾ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2023ರ ಸೆಪ್ಟೆಂಬರ್‌ನಲ್ಲಿ, ಅಪ್ರಾಪ್ತ ಬಾಲಕಿಯ ಮೇಲೆ ಆಟೋರಿಕ್ಷಾ ಚಾಲಕ ಅತ್ಯಾಚಾರ ಎಸಗಿದ್ದ. ಆಕೆ ಹರಿದ ಬಟ್ಟೆಗಳಲ್ಲಿಯೇ ಸುಮಾರು ಒಂದು ಗಂಟೆ ಸಹಾಯಕ್ಕಾಗಿ ಸುತ್ತಾಡಿದರೂ, ಯಾರೂ ಆಕೆಗೆ ಸಹಾಯಕ್ಕೆ ಮುಂದಾಗಿರಲಿಲ್ಲ. ಆಕೆ ಆಶ್ರಮದ ಹೊರಗಿದ್ದನ್ನು ಕಂಡ ಆಶ್ರಮ ಶಿಕ್ಷಕ ಶರ್ಮಾ ಆಕೆಗೆ ಸಹಾಯ ಮಾಡಿದ್ದರು.

ಆಗ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಶರ್ಮಾ, “ಇದು ಪವಿತ್ರ ಪಟ್ಟಣ. ಇಲ್ಲಿ ಜನರು ಸಹಾಯಕರಾಗಿರಬೇಕು. ಆದರೆ ಯಾರೂ ಆಕೆಗೆ ಸಹಾಯ ಮಾಡಲಿಲ್ಲ. ಮಾನವೀಯತೆ ತೋರಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದರು.

ಇದೀಗ, ಅದೇ ಶಿಕ್ಷಕ ವಿರುದ್ಧ ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಸುಮಾರು 10 ದಿನಗಳ ಹಿಂದೆ, ಆಶ್ರಮದ ಉಸ್ತುವಾರಿ ಠಾಕೂರ್ ನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಅಪ್ರಾಪ್ತ ಬಾಲಕ ಪ್ರಕರಣದ ಬಗ್ಗೆ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದ. ಬಳಿಕ, ಬಾಲಕನ ಪೋಷಕರು ಆಶ್ರಮಕ್ಕೆ ಬಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆಗ ಠಾಕೂರ್‌ನನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂತರದಲ್ಲಿ, ಹಲವಾರು ಪೋಷಕರು ಆಶ್ರಮಕ್ಕೆ ಬಂದು ಶಿಕ್ಷಕ ಶರ್ಮಾ ವಿರುದ್ಧ ಆರೋಪ ಮಾಡಿದ್ದು, ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಆರೋಪಗಳನ್ನು ಆಶ್ರಮದ ಅಧಿಕಾರಿಗಳು ತಳ್ಳಿ ಹಾಕಿದ್ದಾರೆ. ಆರೋಪಿಗಳು ಸುಳ್ಳು ಎಂದು ಹೇಳಿದ್ದಾರೆ.

“ಆಶ್ರಮದಲ್ಲಿ ಪರಿಶೀಲಿಸಿದಾಗ ದೌರ್ಜನ್ಯ ಪ್ರಕರಣ ನಡೆದಿದೆ ಎಂಬುದು ಕಂಡುಬಂದಿದೆ. ಪ್ರಕರಣದಲ್ಲಿ ಇನ್ನೂ ಅನೇಕ ಸಂತ್ರಸ್ತರಿದ್ದು, ಪ್ರಕರಣ ದಾಖಲಿಸುವಂತೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಹಿಂದೂಯೇತರರು, ರೋಹಿಂಗ್ಯಾ ಮುಸ್ಲಿಮರಿಗೆ ಪ್ರವೇಶ ನಿಷೇಧ; ಗ್ರಾಮಗಳಲ್ಲಿ ಫಲಕ ಅಳವಡಿಕೆ!

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಹಲವಾರು ಗ್ರಾಮಗಳ ಹೊರಭಾಗದಲ್ಲಿ ಹಿಂದೂಯೇತರರಿಗೆ, ರೋಹಿಂಗ್ಯಾ ಮುಸ್ಲಿಮರಿಗೆ...

ಭಾರತದಲ್ಲಿ ಶಂಕಿತ ಮಂಕಿಪಾಕ್ಸ್ ವೈರಸ್ ಪ್ರಕರಣ ಪತ್ತೆ

ಇತ್ತೀಚೆಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ (ಎಂಪಾಕ್ಸ್) ಬಂದಿದೆ...

ಬಿಹಾರ | ಯೂಟ್ಯೂಬ್ ವಿಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ: ಬಾಲಕ ಸಾವು

ನಕಲಿ ವೈದ್ಯನೊಬ್ಬ ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿ ಸರ್ಜರಿ ಮಾಡಿದ ಪರಿಣಾಮ...

ಕೋಲ್ಕತ್ತಾ ವೈದ್ಯೆ ಅತ್ಯಾಚಾರ ವಿರೋಧಿಸಿ ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ವಿರೋಧಿಸಿ ಟಿಎಂಸಿಗೆ ಸಂಸದ ಜವಾಹರ್...