ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

Date:

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ ವರ್ಷಗಳೇ ಕಳೆದರೂ ತಮ್ಮ ಹೊಲಗಳಿಗೆ ನೀರು ಸಿಗದ ನೋವು ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ತುಳಸಿ ಗ್ರಾಮದ ರೈತರನ್ನು ಕಾಡುತ್ತಿದೆ. ಕೊನೆಗೆ ತಮ್ಮ ಅಸಹಾಯಕತೆ, ಆಕ್ರೋಶ ಮತ್ತು ನೋವನ್ನು ವ್ಯಂಗ್ಯದ ಮೂಲಕ ಹೊರಹಾಕಿರುವ ಗ್ರಾಮಸ್ಥರು, ‘ಈ ಗ್ರಾಮ ಮಾರಾಟಕ್ಕಿದೆ’ ಎಂಬ ಪೋಸ್ಟರ್ ಹಾಕಿದ್ದಾರೆ.

- Advertisement -

ಸಾಮಾನ್ಯವಾಗಿ ಕಾಣುವ ಈ ಪೋಸ್ಟರ್ ಹಿಂದೆ ತುಳಸಿ ಗ್ರಾಮಸ್ಥರ 25 ವರ್ಷಗಳ ನೋವು ಮತ್ತು ನೀರಿಗಾಗಿ ನಡೆಸಿದ ಹೋರಾಟ ಇದೆ. “ನಮ್ಮ ಗ್ರಾಮವನ್ನು ಖರೀದಿಸಲು ಯಾರಾದರೂ ಬಯಸಿದರೆ ಮುಂದೆ ಬರಬಹುದು” ಎಂದು ಗ್ರಾಮದ ಸರಪಂಚ ಶರದ್ ಮೋರೆ ವ್ಯಂಗ್ಯವಾಗಿ ಹೇಳಿದ್ದಾರೆ. ಕಳೆದ 25 ವರ್ಷಗಳಿಂದ ಸರ್ಕಾರ ನಮ್ಮನ್ನು ಮೂರ್ಖರನ್ನಾಗಿ ಮಾಡುತ್ತಿದೆ. ಈ ಪೋಸ್ಟರ್ ಅದರ ವಿರುದ್ಧದ ನಮ್ಮ ಆಕ್ರೋಶ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ತುಳಸಿ ಗ್ರಾಮವು 2000ರಲ್ಲಿ ಆರಂಭವಾದ ಸೀನಾ-ಮಾಧಾ ಲಿಫ್ಟ್ ನೀರಾವರಿ ಯೋಜನೆಯಿಂದ ಕೇವಲ 9 ಕಿ.ಮೀ. ದೂರದಲ್ಲಿದೆ. ಆದರೂ ಯೋಜನೆಯ ನೀರು ಮಾತ್ರ ಗ್ರಾಮಕ್ಕೆ ತಲುಪಿಲ್ಲ. ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಿನ ಅಗತ್ಯ ಹೆಚ್ಚಿರುವ ನಗದು ಬೆಳೆಗಳನ್ನು ಬೆಳೆಯಲಾಗುತ್ತಿದ್ದರೆ, ತುಳಸಿ ರೈತರು ಮಾತ್ರ ಮಳೆಯನ್ನೇ ನಂಬಿ ಕೃಷಿ ಮಾಡಬೇಕಾದ ಪರಿಸ್ಥಿತಿ ಇದೆ.

ಈ ವರ್ಷವೂ ಪರಿಸ್ಥಿತಿ ಭಿನ್ನವಾಗಿಲ್ಲ. ಮಾಧಾ ತಾಲೂಕಿನ ಹಲವು ಗ್ರಾಮಗಳಲ್ಲಿ ಕಳೆದ 45 ದಿನಗಳಿಂದ ಮಳೆಯೇ ಆಗಿಲ್ಲ. ತುಳಸಿಯ ಜಲಾಶಯಗಳಲ್ಲಿ ನೀರು ಬಹುತೇಕ ಇಲ್ಲ. ಬಾವಿಗಳು, ನೀರು ಇಂಗಿಸುವ ಪರ್ಕೊಲೇಷನ್ ಕೆರೆಗಳೂ ಒಣಗಿ ಹೋಗಿವೆ.

“ಜುಲೈನಿಂದಲೇ ನಮಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂಗಾರು ಮುಗಿದ ಬಳಿಕ ಸುಮಾರು 2,700 ಹೆಕ್ಟೇರ್ ಕೃಷಿ ಭೂಮಿ ಬಂಜರಾಗುವ ಸಾಧ್ಯತೆಯಿದೆ” ಎಂದು ಶರದ್ ಮೋರೆ ಆತಂಕ ವ್ಯಕ್ತಪಡಿಸಿದ್ದಾರೆ.

ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗಣೇಶ ಚತುರ್ಥಿಯಂದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ, ಸಮಸ್ಯೆ ಬಗೆಹರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದರು. ಜೊತೆಗೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿಯೂ ಎಚ್ಚರಿಸಿದ್ದರು. ನಂತರ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಮಾತುಕತೆಯ ಬಳಿಕ ಶುಕ್ರವಾರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಇದನ್ನೂ ಓದಿ: ಕೇಂದ್ರ ನೀರಾವರಿ ಅಭಿವೃದ್ಧಿ ಪ್ರಾಧಿಕಾರ

ಈ ನಡುವೆ ಸೋಲಾಪುರ ಜಿಲ್ಲಾಧಿಕಾರಿ ಎಸ್. ಕಾರ್ತಿಕೇಯನ್, ನೀರಾವರಿ ಇಲಾಖೆ ತುಳಸಿ ಗ್ರಾಮದ ಜಲವಿಜ್ಞಾನ ಸಮೀಕ್ಷೆ ನಡೆಸಿದೆ ಎಂದು ತಿಳಿಸಿದ್ದಾರೆ. ಸಮೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಗ್ರಾಮಕ್ಕೆ ಕಾಲುವೆ ಜಾಲ ನಿರ್ಮಿಸುವ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಆದರೆ, ವರ್ಷಗಳಿಂದ ನೀರಿಗಾಗಿ ಕಾಯುತ್ತಿರುವ ತುಳಸಿ ಗ್ರಾಮಸ್ಥರಿಗೆ ಈ ಭರವಸೆ ಎಷ್ಟು ಬೇಗ ನೀರಾಗಿ ತಲುಪಲಿದೆ ಎಂಬುದೇ ಈಗಿನ ಪ್ರಶ್ನೆ. ನೀರಾವರಿ ಯೋಜನೆಯ ನೆರಳಲ್ಲೇ ನೀರಿಲ್ಲದೆ ನರಳುತ್ತಿರುವ ರೈತರ ವ್ಯಥೆ, ‘ಗ್ರಾಮ ಮಾರಾಟಕ್ಕಿದೆ’ ಎಂಬ ಒಂದೇ ಪೋಸ್ಟರ್‌ನಲ್ಲಿ ವ್ಯಂಗ್ಯವಾಗಿ ಹೊರಬಿದ್ದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...

ದೆಹಲಿ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ‘ನಿರ್ಭಯಾ ಪ್ರಕರಣವನ್ನು ನೆನಪಿಸುವ ಭೀಕರತೆ’ ಎಂದ ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಭೀಕರ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...