ಉತ್ತರ ಪ್ರದೇಶ | ಕಾಲೇಜಿನಲ್ಲಿ ಟೋಪಿ ಧರಿಸಿದ್ದಕ್ಕಾಗಿ ಮುಸ್ಲಿಂ ಯುವಕನಿಗೆ ಥಳಿತ

Date:

ಟೋಪಿ ಧರಿಸಿದ್ದ ಮುಸ್ಲಿಂ ಸಮುದಾಯದ ಯುವಕನೊಬ್ಬನಿಗೆ ಇತರ ಸಮುದಾಯದ ವಿದ್ಯಾರ್ಥಿಗಳ ಗುಂಪು ಥಳಿಸಿದ ಘಟನೆ ಉತ್ತರ ಪ್ರದೇಶ ಮೀರತ್‌ನ ಎನ್ಎಎಸ್ ಕಾಲೇಜಿನ ಆವರಣದಲ್ಲಿ ಸೆ.26ರಂದು ನಡೆದಿದೆ.

ಎನ್ಎಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಸಹೋದರಿಯ ಶುಲ್ಕ ಪಾವತಿಸಲು ಆಗಮಿಸಿದ್ದ ಸಾಹಿಲ್‌ ಎಂಬಾತನಿಗೆ ಕಾಲೇಜಿನ ಆವರಣದಲ್ಲಿ ಓಡಾಡುತ್ತಿದ್ದ ಇತರೆ ಸಮುದಾಯದ ಒಂದು ಗುಂಪು ವಿದ್ಯಾರ್ಥಿಗಳು ಟೋಪಿ ಧರಿಸಿರುವುದನ್ನು ಆಕ್ಷೇಪಿಸಿ ಅದನ್ನು ತೆಗೆಯುವಂತೆ ಹಲ್ಲೆ ನಡೆಸಿದ್ದಾರೆ.

ಹಲ್ಲೆ ನಡೆಸುತ್ತಿರುವುದನ್ನು ಆಕ್ಷೇಪಿಸಿ ಸಹೋದರನ ಸಹಾಯಕ್ಕೆ ಬಂದ ವಿದ್ಯಾರ್ಥಿನಿಯ ಮೇಲೆ ಕೂಡ ಗುಂಪಿನಲ್ಲಿದ್ದ ವಿದ್ಯಾರ್ಥಿಗಳು ಥಳಿಸಲು ಮುಂದಾಗಿದ್ದಾರೆ. ಕ್ಯಾಂಪಸ್ಸಿನಲ್ಲಿ ಓಡಾಡುತ್ತಿದ್ದ ಇತರ ವಿದ್ಯಾರ್ಥಿಗಳು ಹೆಚ್ಚಿನ ಅನಾಹುತವಾಗದಂತೆ ಗಲಾಟೆಯನ್ನು ತಡೆದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆಯ ಸಂಪೂರ್ಣ ದೃಶ್ಯ  ಕಾಲೇಜಿನಲ್ಲಿ ಅಳವಡಿಸಿರುವ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆ ನಡೆಸಿರುವ ಬಗ್ಗೆ ಸಾಹಿಲ್ ಪೊಲೀಸರಿಗೆ ದೂರು ನೀಡಿದ್ದು, ಸ್ಥಳೀಯ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 2023 ರಲ್ಲಿ 255 ಇಸ್ಲಾಂ ವಿರೋಧಿ ದ್ವೇಷ ಭಾಷಣ: ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಶೇ.80ಕ್ಕೂ ಹೆಚ್ಚು

ಸಿಸಿ ಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮೋಹಿತ್ ದಾಗರ್, ವಿಶಾಲ್ ದಾಗರ್, ಅತುಲ್ ಠಾಕೂರ್, ಸಾಗರ್ ಮತ್ತು 10 ಅಪರಿಚಿತ ಯುವಕರ ವಿರುದ್ಧ ಸಾಹಿಲ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿ ವಿದ್ಯಾರ್ಥಿಗಳನ್ನು ಬಂಧಿಸಲಾಗುವುದು ಎಂದು ಠಾಣಾಧಿಕಾರಿ ಪ್ರಭಾರಿ ಸಮರ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಎನ್ಎಎಸ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಮನೋಜ್ ಅಗರ್ವಾಲ್ ಮುಸ್ಲಿಂ ಸಮುದಾಯದ ಯುವಕನ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ...

ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ ಇರಿಸಲು ಯುಪಿ ಚಾಲಕರಿಗೆ ಮನವಿ!

ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ...

ಭಾರತದ ಯುವಕರದು ವಿರಾಟ್ ಕೊಹ್ಲಿ ರೀತಿಯ ಮನಸ್ಥಿತಿ: ರಘುರಾಂ ರಾಜನ್

ಬೃಹತ್ ಸಂಖ್ಯೆಯ ಭಾರತದ ಯುವಕರು ವಿದೇಶಗಳಿಗೆ ಹೋಗಿ ಅಲ್ಲಿ ತಮ್ಮ ಉದ್ಯಮವನ್ನು...